Toyota: 26.11 Km ಮೈಲೇಜ್.. 10.44 ಲಕ್ಷ, 7-ಸೀಟರ್.. ಈ ಜನಪ್ರಿಯ ಫ್ಯಾಮಿಲಿ ಕಾರಿಗೆ ಮುಗಿಬಿದ್ದ ಗ್ರಾಹಕರು!

ಟೊಯೊಟಾ (Toyota) ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿ ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಅರ್ಬನ್ ಕ್ರೂಸರ್ ಹೈರಿಡರ್, ಅರ್ಬನ್ ಕ್ರೂಸರ್ ಟೈಸರ್, ಇನ್ನೋವಾ ಕ್ರಿಸ್ಟಾ ಮತ್ತು ಇನ್ನೋವಾ ಹೈಕ್ರಾಸ್ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಕಂಪನಿಯ ರೂಮಿಯನ್ ಜನಪ್ರಿಯ ಎಂಪಿವಿಯಾಗಿದ್ದು, ತಿಂಗಳಿಂದ ತಿಂಗಳಿಗೆ ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕಳೆದ ತಿಂಗಳು (ನವೆಂಬರ್‌-2024) ಟೊಯೊಟಾ ರೂಮಿಯನ್ (Toyota Rumion) ಎಂಪಿವಿ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಕಂಪನಿಯು ಸರಿ ಸುಮಾರು 1,803 ಯುನಿಟ್ ರೂಮಿಯನ್ ಕಾರುಗಳನ್ನು ಮಾರಾಟ ಮಾಡಿದೆ. ಅಕ್ಟೋಬರ್‌ನಲ್ಲಿ ಮಾರಲ್ಪಟ್ಟ 2,169 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ಕೊಂಚ ಮಟ್ಟಿಗೆ ಅಂದರೆ ಶೇಕಡ 16.87% ಇಳಿಕೆಯಾಗಿದೆ. ಅಕ್ಟೋಬರ್‌ ತಿಂಗಳಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬಗಳಿದ್ದ ಹಿನ್ನೆಲೆ, ದಾಖಲೆ ಸಂಖ್ಯೆಯಲ್ಲಿ ರೂಮಿಯನ್ ಎಂಪಿವಿಗಳು ಮಾರಾಟಗೊಂಡಿದ್ದವು.

Toyota Rumion Mpv Sales January To November 2024 Sales Report

ಅದೇ ಸೆಪ್ಟೆಂಬರ್‌ನಲ್ಲಿ 1,968 ಯುನಿಟ್, ಆಗಸ್ಟ್‌ನಲ್ಲಿ 1,721 ಯುನಿಟ್ ಜುಲೈನಲ್ಲಿ 1,929 ಯುನಿಟ್, ಜೂನ್‌ನಲ್ಲಿ 1,566 ಯುನಿಟ್‌, ಮೇನಲ್ಲಿ 1,919 ಯುನಿಟ್‌, ಏಪ್ರಿಲ್‌ನಲ್ಲಿ 1,192 ಯುನಿಟ್‌, ಮಾರ್ಚ್‌ನಲ್ಲಿ 688 ಯುನಿಟ್‌, ಫೆಬ್ರವರಿಯಲ್ಲಿ 730 ಯುನಿಟ್‌, ಜನವರಿಯಲ್ಲಿ 639 ಯುನಿಟ್‌ಗಳಷ್ಟು ರೂಮಿಯನ್ ಎಂಪಿವಿಗಳನ್ನು ಮಾರಾಟ ಮಾಡಲಾಗಿತ್ತು.

2023ರ ಆಗಸ್ಟ್‌ನಲ್ಲಿ ಟೊಯೊಟಾ ಕಂಪನಿಯು ಮಾರುತಿ ಸುಜುಕಿಯೊಂದಿಗಿನ ಪಾಲುದಾರಿಕೆ ಭಾಗವಾಗಿ ಎರ್ಟಿಗಾ (Ertiga) ಆಧಾರಿತ ರೂಮಿಯನ್ ಎಂಪಿವಿಯನ್ನು ಬಿಡುಗಡೆಗೊಳಿಸಿತ್ತು. ಮೊದಲ ತಿಂಗಳು (ಆಗಸ್ಟ್) 112 ಯುನಿಟ್, ಸೆಪ್ಟೆಂಬರ್‌ನಲ್ಲಿ 1,461 ಯುನಿಟ್, ಅಕ್ಟೋಬರ್‌ನಲ್ಲಿ 792 ಯುನಿಟ್, ನವೆಂಬರ್‌ನಲ್ಲಿ 718 ಯುನಿಟ್ ಹಾಗೂ ಡಿಸೆಂಬರ್‌ನಲ್ಲಿ 833 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು.

Toyota Rumion Mpv Sales January To November 2024 Sales Report

ಸದ್ಯ ದೇಶೀಯ ಗ್ರಾಹಕರ ಖರೀದಿಗೆ ದೊರೆಯುವ ಹೊಸ ಟೊಯೊಟಾ ರೂಮಿಯನ್ ಎಂಪಿವಿ, ರೂ.10.44 ಲಕ್ಷದಿಂದ ರೂ.13.73 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಸ್, ಜಿ ಮತ್ತು ವಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಜೊತೆಗೆ ಐಕಾನಿಕ್ ಗ್ರೇ, ಸ್ಪಂಕಿ ಬ್ಲೂ ಹಾಗೂ ಕೆಫೆ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

ಈ ಕಾರು 1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 20.11 ರಿಂದ 26.11 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಇದರಲ್ಲಿ 7 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ಪ್ರವಾಸ ವೇಳೆಯಲ್ಲಿ ಹೆಚ್ಚಿನ ಲಗೇಜ್ 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ ಟೊಯೊಟಾ ರೂಮಿಯನ್ ಎಂಪಿವಿ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಆಪಲ್ ಕಾರ್‌ಪ್ಲೇ, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಎಸಿ, ಕ್ರೂಸ್ ಕಂಟ್ರೋಲ್ ಮತ್ತು ಪುಶ್-ಬಟನ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 4 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, December 15, 2024, 17:45 [IST]
English summary
Toyota rumion mpv sales january to november 2024 sales report
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+