2 ಕುಟುಂಬ ಪ್ರಯಾಣಿಸಬಹುದಾದ ಸಾಮಾನ್ಯ ಜನರ ಅಂಬಾರಿಗೆ ಭಾರೀ ಬೇಡಿಕೆ: 26 Km ಮೈಲೇಜ್, ಅಗ್ಗದ ಬೆಲೆ
ಜನಪ್ರಿಯ ವಾಹನ ತಯಾರಕ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor - TKM) ತನ್ನ ರೂಮಿಯನ್ (Rumion) ಎಂಪಿವಿಯನ್ನು ಭರ್ಜರಿಯಾಗಿ ಮಾರಾಟ ಮಾಡುತ್ತಿದೆ. ಇದು ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ರೀ-ಬ್ಯಾಡ್ಜ್ ಆವೃತ್ತಿಯಾಗಿದೆ. ಇದೀಗ ಟೊಯೊಟಾ ಕಂಪನಿಯು ಕಳೆದ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. 2024ರ ನೆವೆಂಬರ್ ತಿಂಗಳಿನಲ್ಲಿ ಟೊಯೊಟಾ ರೂಮಿಯನ್ ಮಾದರಿಯ 1,803 ಯುನಿಟ್ ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ನೆವೆಂಬರ್ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.151 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.
ಪ್ರಸ್ತುತ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಟೊಯೊಟಾ ರೂಮಿಯನ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.10.44 ಲಕ್ಷವಾಗಿದೆ. ಈ ಟೊಯೊಟಾ ರೂಮಿಯನ್ (Toyota Rumion) ಮಾದರಿಯು ಹಲವು ರೂಪಾಂತರಗಳಲ್ಲಿ ಲಭ್ಯವಿದೆ. ಈ ಎಂಪಿವಿಯು ಐಕಾನಿಕ್ ಗ್ರೇ, ಸ್ಪಂಕಿ ಬ್ಲೂ, ಕೆಫೆ ವೈಟ್ ಮತ್ತು ಎಂಟೈಸಿಂಗ್ ಸಿಲ್ವರ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಈ ಕಾರಿನಲ್ಲಿ 7 ಮಂದಿ ಆರಾಮದಾಯವಾಗಿ ಪ್ರಯಾಣಿಸಬಹುದು.

ಈ ಕಾರು ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್ 103 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 137 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ.
ಸಿಎನ್‌ಜಿ ಚಾಲಿತ ರೂಪಾಂತರವು ಇದೇ ಎಂಜಿನ್ ಆಯ್ಕೆಯನ್ನು ಹೊಂದಿದೆ. ಆದರೆ, 88 ಪವರ್ ಹಾಗೂ 121.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ಲಭ್ಯವಿದೆ. ರೂಪಾಂತರಗಳಿಗೆ ಅನುಗುಣವಾಗಿ 20.11 ರಿಂದ 26.11 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಟೊಯೊಟಾ ರೂಮಿಯನ್ ಎಂಪಿವಿಯು ಫೀಚರ್ಸ್ ದೃಷ್ಟಿಯಿಂದಲ್ಲೂ ಅತ್ಯುತ್ತಮವಾಗಿದ್ದು, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಪ್ಯಾಡಲ್ ಶಿಫ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಜೊತೆಗೆ 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಹೊಂದಿದೆ.
ಸುರಕ್ಷತೆಯ ವಿಚಾರದಲ್ಲೂ ಈ ಕಾರು ಅತ್ಯಾಧುನಿಕವಾಗಿದ್ದು, 4 ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ರೇರ್ ಪಾರ್ಕಿಂಗ್ ಕ್ಯಾಮೆರಾ, ISOFIX ಚೈಲ್ಡ್ ಸೀಟ್ ಆಂಕರ್ಸ್ ಅನ್ನು ಪಡೆದಿದೆ. ಟೊಯೊಟಾ ರೂಮಿಯನ್ ಎಂಪಿವಿಗೆ ಕಿಯಾ ಕ್ಯಾರೆನ್ಸ್, ಮಹೀಂದ್ರಾ ಮರಾಜೋ ಪ್ರತಿಸ್ಪರ್ಧಿಯಾಗಿವೆ.

ಇನ್ನು ಬೆಂಗಳೂರಿನಲ್ಲಿ ಹೊಚ್ಚ ಹೊಸ ಟೊಯೊಟಾ ರೂಮಿಯನ್ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ. ಇದರ ಎಸ್ ಎಂಟಿ (ಪೆಟ್ರೋಲ್) ರೂಪಾಂತರ, ರೂ.13.01 ಲಕ್ಷ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಈ ಕಾರನ್ನು ಖರೀದಿಸಿದರೆ, ರೂ.11,01 ಲಕ್ಷ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.22,331 ಇಎಂಐ ಪಾವತಿಸಬೇಕು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








