ಬೈಕ್‌ನಂತೆ ಮೈಲೇಜ್ ಕೊಡುವ ಟೊಯೊಟಾ ಕಾರಿಗೆ ಮನಸೋತ ಗ್ರಾಹಕರು: ಮಾರಾಟದಲ್ಲಿ ಹೊಸ ಮೈಲಿಗಲ್ಲು
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor) ದೇಶದ ಪ್ರಮುಖ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಟೊಯೊಟಾ ಕಂಪನಿಯು ಗ್ಲಾಂಝಾ, ಇನ್ನೋವಾ ಕ್ರಿಸ್ಟಾ, ಇನ್ನೋವಾ ಹೈಕ್ರಾಸ್, ರೂಮಿಯಾನ್ ಮತ್ತು ಫಾರ್ಚುನರ್ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಟೊಯೊಟಾ ಕಂಪನಿಯ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಎಸ್‍ಯುವಿ ಮಾದರಿಯು ಕೂಡ ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ಭಾರಿ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ.
ಇದೀಗ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ಈ ಅರ್ಬನ್ ಕ್ರೂಸರ್ ಹೈರೈಡರ್ ಮಾದರಿಯು 1,00,000 ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದ್ದು, ಇದು ಎರಡನೇ ಮಾರುತಿ-ರೀಬ್ಯಾಡ್ಜ್ ಮಾಡೆಲ್ ಆಗಿದೆ. 2022ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಈ ಕಾರು ಕಡಿಮೆ ಅವಧಿಯಲ್ಲಿ ಮಹತ್ತರ ಸಾಧನೆಯನ್ನು ಮಾಡಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ 1.5-ಲೀಟರ್ ಪೆಟ್ರೋಲ್ (ನಿಯೋ ಡ್ರೈವ್), ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯಲ್ಲಿಯೂ ದೊರೆಯಲಿದ್ದು, 19.39 ರಿಂದ 27.97 ಕಿ.ಮೀ ಮೈಲೇಜ್ ಅನ್ನು ಕೊಡುತ್ತದೆ.
ಈ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಕಾರು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದರ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.11.14 ಲಕ್ಷವಾಗಿದೆ. ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‌ಯುವಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಈ ಕಾರಿನಲ್ಲಿ 5 - ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಬರೋಬ್ಬರಿ 373 ಲೀಟರ್‌ನ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‍ಯುವಿಯು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಕನೆಕ್ಟೆಡ್ ಕಾರ್ ಟೆಕ್, ಆಂಬಿಯೆಂಟ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌ಗಳು, ಹೆಡ್ಸ್ ಅಪ್ ಡಿಸ್ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪನೋರಮಿಕ್ ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಪಡೆದಿದೆ.
ಈ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಇ, ಎಸ್, ಜಿ ಸೇರಿದಂತೆ ಹಲವು ರೂಪಾಂತರಗಳನ್ನು ಹೊಂದಿದೆ. ಈ ಟೊಯೊಟಾಡ ಎಸ್‍ಯುವಿಯು ಕೆಫೆ ವೈಟ್, ಗೇಮಿಂಗ್ ಗ್ರೇ ಮತ್ತು ಸ್ಪೋರ್ಟಿನ್ ರೆಡ್ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೂ ಸಿಲಭ್ಯವಿರುತ್ತದೆ. ಹೊಸ ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ.

ಪ್ರಯಾಣಿಯರ ರಕ್ಷಣೆಗಾಗಿ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‍ಯುವಿಯಲ್ಲಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿವಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ಆಲ್ ವೀಲ್ ಡಿಸ್ಕ್ ಬೈಕ್‌ಗಳನ್ನು ಒಳಗೊಂಡಿದೆ.
ಒಟ್ಟಾರೆಯಾಗಿ, ಈ ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿ ಸಾಕಷ್ಟು ಅತ್ಯಾಕರ್ಷಕವಾಗಿರುವುದರಿಂದ ಬಹುತೇಕರ ಆಯ್ಕೆಯ ವಾಹನವಾಗಿದೆ ಎಂದು ಹೇಳಬಹುದು. ಇದರಿಂದ ಕೊಂಚ ಹೆಚ್ಚಿನ ಕಾಯುವಿಕೆ ಅವಧಿಯನ್ನು ಹೊಂದಿದೆ. ನೀವು ದೀಪಾವಳಿ ಹಬ್ಬಕ್ಕೆ ಈ ಕಾರನ್ನು ಬುಕ್ಕಿಂಗ್ ಮಾಡಿದರೆ ಹೊಸ ವರ್ಷದೊಳಗೆ ವಿತರಣೆಯಾಗಿ ಬಿಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








