Toyota: ಟೊಯೊಟಾದ ಈ ಕಾರಿಗಾಗಿ ಮುಗಿಬಿದ್ದ ಗ್ರಾಹಕರು.. 5 ಜನ ಆರಾಮವಾಗಿ ಹೋಗಬಹುದು!
ಭಾರತದ ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಟೊಯೊಟಾ (Toyota) ಖ್ಯಾತಿಗಳಿಸಿದೆ. ಕಂಪನಿ ಮಾರಾಟಗೊಳಿಸುವ ಕಾರುಗಳು ಆಕರ್ಷಕ ವೈಶಿಷ್ಟ್ಯ, ವಿನ್ಯಾಸ ಹೊಂದಿರುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಕೊಂಡುಕೊಳ್ಳುತ್ತಾರೆ. ಸದ್ಯ, ಅರ್ಬನ್ ಕ್ರೂಸರ್ ಹೈರಿಡರ್ (Urban Cruiser Hyryder) ಎಸ್‌ಯುವಿಯ ಫೆಬ್ರವರಿ ತಿಂಗಳ ಕಾಯುವಿಕೆ ಅವಧಿ ಬಗ್ಗೆ ಮಾಹಿತಿ ದೊರೆತಿದೆ.
ಫೆಬ್ರವರಿ 1, 2024ಕ್ಕೆ ಅನ್ವಯವಾಗುವಂತೆ ಟೊಯೊಟಾ ಇಂಡಿಯಾ (Toyota India), ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿ ಪಡೆದಿರುವ ಕಾಯುವಿಕೆ ಅವಧಿ (Waiting Period) ಬಗ್ಗೆ ವಿವರವನ್ನು ಬಹಿರಂಗಗೊಳಿಸಿದೆ. ಈ ಕಾರಿನ ಸಿಎನ್‌ಜಿ ರೂಪಾಂತರಗಳು ವಿತರಣೆಯಾಗಲು ಹೆಚ್ಚಿನ ಸಮಯಾವಕಾಶ ಬೇಕಾಗಿದ್ದು, ಇವತ್ತು ಬುಕ್ಕಿಂಗ್ ಮಾಡಿದರೂ ಸುಮಾರು 12 - 13 ತಿಂಗಳ ನಂತರ ಡಿಲೆವರಿಯಾಗುತ್ತವೆ.

ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿಯ ಹೈಬ್ರಿಡ್ ರೂಪಾಂತರಗಳು ಸ್ವಲ್ಪ ಕಡಿಮೆ ಕಾಯುವಿಕೆ ಅವಧಿವನ್ನು ಹೊಂದಿದ್ದು, 4 - 5 ತಿಂಗಳ ಬಳಿಕ ಗ್ರಾಹಕರ ಕೈಸೇರಲಿವೆ. ಈ ಕಾರಿನ ಪೆಟ್ರೋಲ್ (ನಿಯೋ ಡ್ರೈವ್) ರೂಪಾಂತರಗಳು 8 - 9 ತಿಂಗಳ ನಂತರ ವಿತರಣೆಯಾಗಲಿವೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿ, ರೂ.11.14 ಲಕ್ಷದಿಂದ ರೂ.20.19 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ (Toyota Urban Cruiser Hyryder) ಕಾರು ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, 5 ಮಂದಿ ಪ್ರಯಾಣಿಸಬಹುದು. ಇ, ಎಸ್, ಸಿ, ವಿ ಸೇರಿದಂತೆ ವಿವಿಧ ರೂಪಾಂತರ ಹಾಗೂ ಕೆಫೆ ವೈಟ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್ ಒಳಗೊಂಡಂತೆ ಹತ್ತಾರು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ.
ಈ ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿ, 1.5-ಲೀಟರ್ ನಾನ್ ಹೈಬ್ರಿಡ್ ಪೆಟ್ರೋಲ್ ಎಂಜಿನ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.
ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ ಕಾರು, 2WD (ಟೂ ವೀಲ್ ಡ್ರೈವ್) ಹಾಗೂ AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ. ಇಂಧನ ದಕ್ಷತೆ ವಿಚಾರವಾಗಿ ಹೇಳುವುದಾದರೆ, 19.39 ರಿಂದ 27.97 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಯೂನಿಟ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಈ ಕಾರು ಅತ್ಯಾಧುನಿಕ ಸುರಕ್ಷಿತ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಮುಖವಾಗಿ 6-ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಆಲ್-ವೀಲ್ ಡಿಸ್ಕ್ ಬ್ರೇಕ್ಸ್ ಅನ್ನು ಹೊಂದಿದೆ. ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿಗೆ ಹ್ಯುಂಡೈ ಕ್ರೆಟಾ, ಮಾರುತಿ ಸುಜುಕಿ ಗ್ರಾಂಡ್ ವಿಟಾರಾ, ಕಿಯಾ ಸೆಲ್ಟೋಸ್, ಹೋಂಡಾ ಎಲಿವೇಟ್ ದೊಡ್ಡ ಪ್ರತಿಸ್ಪರ್ಧಿಗಳಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications