Toyota: ಟೊಯೊಟಾದ ಈ ಕಾರಿಗೆ ಮುಗಿಬಿದ್ದ ಗ್ರಾಹಕರು.. 5 ಜನ ಹೋಗಬಹುದು, 27 ಕಿ.ಮೀ ಮೈಲೇಜ್!
ಭಾರತದ ಪ್ರಖ್ಯಾತ ವಾಹನ ತಯಾರಕ ಸಂಸ್ಥೆಯಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor - TKM) ಖ್ಯಾತಿಗಳಿಸಿದೆ. ಕಂಪನಿಯು ಮಾರಾಟಗೊಳಿಸುವ ಅರ್ಬನ್ ಕ್ರೂಸರ್ ಹೈರಿಡರ್ (Urban Cruiser Hyryder) ಎಸ್‌ಯುವಿಯು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಸಹ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಈ ಕಾರಿಗೆ ದಿನದಿಂದ ಬೇಡಿಕೆಯೂ ಅಧಿಕಗೊಳ್ಳುತ್ತಿದ್ದು, ವಿತರಣೆ ಪಡೆಯಲು ತಿಂಗಳುಗಟ್ಟಲೆ ಕಾಯಬೇಕಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಸದ್ಯ ಟೊಯೊಟಾ ಇಂಡಿಯಾ (Toyota India), ಜೂನ್ 1, 2024ಕ್ಕೆ ಅನ್ವಯವಾಗುವಂತೆ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ 'ಅರ್ಬನ್ ಕ್ರೂಸರ್ ಹೈರಿಡರ್' ಕಾರು ಹೊಂದಿರುವ ಕಾಯುವಿಕೆ ಅವಧಿ (Waiting Period) ಕುರಿತ ವಿವರವನ್ನು ಬಹಿರಂಗಗೊಳಿಸಿದೆ. ಇದರ ಹೈಬ್ರಿಡ್ (Hybrid) ಚಾಲಿತ ಮಾದರಿಗಳನ್ನು ನೀವು ಇವತ್ತು ಬುಕ್ಕಿಂಗ್ ಮಾಡಿದರೂ ಸುಮಾರು 2 ತಿಂಗಳ ನಂತರ ವಿತರಣೆಯಾಗುತ್ತವೆ.

ಅರ್ಬನ್ ಕ್ರೂಸರ್ ಹೈರಿಡರ್ ನಿಯೋ ಡ್ರೈವ್ (ಪೆಟ್ರೋಲ್) ಆವೃತ್ತಿಗಳು ಕೊಂಚ ಹೆಚ್ಚಿನ ಕಾಯುವಿಕೆ ಅವಧಿಯನ್ನು ಹೊಂದಿದ್ದು, ಬರೋಬ್ಬರಿ 5 ತಿಂಗಳ ಬಳಿಕ ಡೆಲಿವರಿಯಾಗುತ್ತವೆ. ಈ ಕಾರಿನ ಸಿಎನ್‌ಜಿ ರೂಪಾಂತರಗಳು ಸ್ವಲ್ಪ ತಡವಾಗಿ ನಿಮ್ಮ ಮನೆಯನ್ನು ಸೇರುತ್ತವೆ. ಇವು ಸರಿ ಸುಮಾರು 4 ತಿಂಗಳ ಕಾಯುವಿಕೆ ಅವಧಿಯನ್ನು ಪಡೆದಿವೆ.
ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿಯು ರೂ.11.14 ಲಕ್ಷದಿಂದ ರೂ.20.19 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಕೆಫೆ ವೈಟ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್ ಸೇರಿದಂತೆ ಅತ್ಯಾಧುನಿಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗಲಿದ್ದು, ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

ನೂತನ ಕಾರು 1.5-ಲೀಟರ್ ಪೆಟ್ರೋಲ್ (ನಿಯೋ ಡ್ರೈವ್), ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರ (ವೇರಿಯೆಂಟ್)ಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೂ ದೊರೆಯುತ್ತದೆ. 2WD (ಟೂ ವೀಲ್ ಡ್ರೈವ್) ಮತ್ತು AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದ್ದು, 19.39 ರಿಂದ 27.97 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.
ಟೊಯೊಟಾ ಅರ್ಬನ್ ಕ್ರೂಸರ್ ಹೈರಿಡರ್ ಎಸ್‌ಯುವಿಯು 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಲ್ ವೀಲ್ ಡಿಸ್ಕ್ ಬ್ರೇಕ್ಸ್ ಅನ್ನು ಪಡೆದಿದೆ.

ಈ ಕಾರಿಗೆ ಹ್ಯುಂಡೈ ಕ್ರೆಟಾ, ಮಾರುತಿ ಸುಜುಕಿ ಗ್ರಾಂಡ್ ವಿಟಾರಾ, ಕಿಯಾ ಸೆಲ್ಟೋಸ್, ಹೋಂಡಾ ಎಲಿವೇಟ್ ಎಸ್‌ಯುವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ. ಮುಂಬರುವ ದಿನಗಳಲ್ಲಿ ಅರ್ಬನ್ ಕ್ರೂಸರ್ ಹೈರಿಡರ್ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದ್ದು, ದೊಡ್ಡ ಕುಟುಂಬಗಳಿಗೆ ಸರಿಹೊಂದಬಹುದು ಎಂದು ಹೇಳಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications