Toyota: ಶೋರೂಂ ತಲುಪಿದ ಟೈಸರ್ ಕಾರು.. ರೂ.7 ಲಕ್ಷ ಬೆಲೆ, ಬೈಕ್‌ಗೂ ಮೀರಿಸುವ ಮೈಲೇಜ್!
ಭಾರತದ ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor) ದೊಡ್ಡಮಟ್ಟದಲ್ಲಿ ಜನಪ್ರಿಯತೆಯನ್ನು ಗಳಿಸಿದೆ. ಈ ತಿಂಗಳ ಆರಂಭದಲ್ಲಿ ಕಂಪನಿಯು ಮಾರುತಿ ಸುಜುಕಿ ಫ್ರಾಂಕ್ಸ್ ಆಧಾರಿತ ಅರ್ಬನ್ ಕ್ರೂಸರ್ ಟೈಸರ್ ಎಸ್‌ಯುವಿಯನ್ನು ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು.
ಸದ್ಯ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಕಾರು, ವಿವಿಧ ರಾಜ್ಯಗಳಿಗೆ ಸೇರಿದ ಡೀಲರ್‌ಶಿಪ್‌ಗಳನ್ನು ತಲುಪುವುದಕ್ಕೆ ಶುರುವಾಗಿದೆ ಎಂಬ ವಿವರಗಳು ಲಭಿಸಿವೆ. ಇದರಿಂದ ಈ ಎಸ್‌ಯುವಿಯ ವಿತರಣೆಗಳು ಕೆಲವೇ ದಿನಗಳಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ನೂತನ ಕಾರು ರೂ.7.74 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ವಿನ್ಯಾಸದ ದೃಷ್ಟಿಯಿಂದಲೂ ಈ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor) ಎಸ್‌ಯುವಿ ಅತ್ಯಾಧುನಿಕವಾಗಿದೆ. ಇ, ಎಸ್, ಎಸ್ ಪ್ಲಸ್, ಜಿ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಜೊತೆಗೆ ಲ್ಯೂಸೆಂಟ್ ಆರೆಂಜ್, ಸ್ಪೋರ್ಟಿನ್ ರೆಡ್, ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ.
ಟೊಯೊಟಾ ಹಾಗೂ ಮಾರುತಿ ಸುಜುಕಿ ಕಂಪನಿಗಳು ಪಾಲುದಾರಿಕೆಯನ್ನು ಹೊಂದಿರುವುದರಿಂದ 'ಫ್ರಾಂಕ್ಸ್' ಕಾರಿನಂತೆಯೇ ಅರ್ಬನ್ ಕ್ರೂಸರ್ ಟೈಸರ್ ಎಸ್‌ಯುವಿಯು ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 90 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 113 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ.

ಮತ್ತೊಂದು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 ಪಿಎಸ್ ಪವರ್ ಮತ್ತು 148 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಸಿಎನ್‌ಜಿ ಚಾಲಿತ 1.2-ಲೀಟರ್ ಎಂಜಿನ್ 77.5 ಪಿಎಸ್ ಪವರ್, 98.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದೆ.
ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಮಾದರಿಗಳು 20 ರಿಂದ 28.5 ಕಿಲೋಮೀಟರ್ ವರೆಗೆ ಮೈಲೇಜ್ ನೀಡುತ್ತವೆ. FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿರುವ ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಟೈಸರ್ ಎಸ್‌ಯುವಿ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಟೈಸರ್ ಕಾರು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಈ ಕಾರಿಗೆ ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೋನೆಟ್ ಪ್ರಬಲ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.
Source: Carwale


Click it and Unblock the Notifications