Toyota: 28.5 Km ಮೈಲೇಜ್.. 5-ಸೀಟರ್, 7 ಲಕ್ಷ.. ಈ ಜನಪ್ರಿಯ ಟೊಯೊಟಾ ಕಾರಿಗೆ ಮನಸೋತ ಗ್ರಾಹಕರು!
ಟೊಯೊಟಾ (Toyota) ಪ್ರಖ್ಯಾತ ವಾಹನ ತಯಾರಕ ಕಂಪನಿಯಾಗಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಅತ್ಯಾಧುನಿಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಹೊಂದಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಂಪನಿಯು ಮಾರುತಿ ಸುಜುಕಿಯೊಂದಿಗೆ ವ್ಯಾಪಾರ ಪಾಲುದಾರಿಕೆ ಹೊಂದಿದೆ. ಅದರ ಭಾಗವಾಗಿ ಈ ವರ್ಷದ ಏಪ್ರಿಲ್‌ನಲ್ಲಿ 'ಫ್ರಾಂಕ್ಸ್' ಆಧಾರಿತ ಅರ್ಬನ್ ಕ್ರೂಸರ್ ಟೈಸರ್ ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ತಿಂಗಳಿಂದ ತಿಂಗಳಿಗೆ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ.
ಕಳೆದ ನವೆಂಬರ್‌ನಲ್ಲಿಯೂ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor) ಎಸ್‌ಯುವಿಗಳು ಭಾರಿ ಸಂಖ್ಯೆಯಲ್ಲಿ ಮಾರಾಟವಾಗಿವೆ. ಬರೋಬ್ಬರಿ 3,620 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಅಕ್ಟೋಬರ್‌ನಲ್ಲಿ 3,092 ಯುನಿಟ್, ಸೆಪ್ಟೆಂಬರ್‌ನಲ್ಲಿ 2,278 ಯುನಿಟ್, ಆಗಸ್ಟ್‌ನಲ್ಲಿ 3,213 ಯುನಿಟ್ ಜುಲೈನಲ್ಲಿ 2,640 ಯುನಿಟ್ ಹಾಗೂ ಜೂನ್‌ನಲ್ಲಿ 3,184 ಯುನಿಟ್‌ಗಳು ಮಾರಾಟಗೊಂಡಿವೆ.

ಸದ್ಯ, ದೇಶೀಯ ಗ್ರಾಹಕರ ಖರೀದಿಗೆ ದೊರೆಯುವ ಹೊಚ್ಚ ಹೊಸ ಟೊಯೊಟಾ ಟೈಸರ್ ಎಸ್‌ಯುವಿ, ಕನಿಷ್ಠ ರೂ.7.74 ಲಕ್ಷ ಮತ್ತು ಗರಿಷ್ಠ ರೂ.13.04 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಇ, ಎಸ್ ಮತ್ತು ಎಸ್ ಪ್ಲಸ್ ಒಳಗೊಂಡಂತೆ ಹಲವು ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ.
ಈ ಕಾರು 2 ಶಕ್ತಿಯುತ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. ಇದರ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 148 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಸಿಎನ್‌ಜಿ ಚಾಲಿತ ರೂಪಾಂತರವು ಇದೇ 1.2-ಲೀಟರ್ ಸಾಮರ್ಥ್ಯದ ಎಂಜಿನ್‌ನ್ನು ಒಳಗೊಂಡಿದೆ. ಆದರೆ 77.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 98.5 (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಷ್ಟೇ ಶಕ್ತವಾಗಿದೆ. ಹಾಗೆಯೇ ಈ ಕಾರು, 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ನೂತನ ಟೊಯೊಟಾ ಟೈಸರ್ ಎಸ್‌ಯುವಿ 19.8 ರಿಂದ 28.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಎಫ್‌ಡಬ್ಲ್ಯುಡಿ (ಫ್ರಂಟ್ ವೀಲ್ ಡ್ರೈವ್) ಟೆಕ್ನಾಲಜಿಯನ್ನು ಹೊಂದಿದೆ. ಈ ಕಾರಿನಲ್ಲಿ 5 ಮಂದಿ ಸುಲಭವಾಗಿ ಪ್ರಯಾಣಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು, ರೇರ್ ಎಸಿ ವೆಂಟ್‌ಗಳು, ಪ್ಯಾಡಲ್ ಶಿಫ್ಟರ್‌ಗಳು ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಸ ಟೊಯೊಟಾ ಟೈಸರ್ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್ & 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








