Toyota: ಈ ಪ್ರಖ್ಯಾತ ಕಾರನ್ನು 1 ತಿಂಗಳ ಬಳಿಕವಷ್ಟೇ ಮನೆಗೆ ತರಬಹುದು.. 7.74 ಲಕ್ಷ, 28 Km ಮೈಲೇಜ್.. 5-ಸೀಟರ್!

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor - TKM) ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕೆಲವು ತಿಂಗಳ ಹಿಂದೆ, ಮಾರುತಿ ಸುಜುಕಿಯೊಂದಿಗಿನ ಪಾಲುದಾರಿಕೆ ಭಾಗವಾಗಿ ಟೊಯೊಟಾ ಕಂಪನಿಯು ಫ್ರಾಂಕ್ಸ್ (Fronx) ಆಧಾರಿತ ಅರ್ಬನ್ ಕ್ರೂಸರ್ ಟೈಸರ್ (Urban Cruiser Taisor) ಎಸ್‌ಯುವಿಯನ್ನು ಮಾರಾಟಕ್ಕೆ ತಂದಿತ್ತು.

ಸದ್ಯ ಟೊಯೊಟಾ ಇಂಡಿಯಾ (Toyota India) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಕ್ಟೋಬರ್ 1, 2024ಕ್ಕೆ ಅನ್ವಯವಾಗುವಂತೆ ಅರ್ಬನ್ ಕ್ರೂಸರ್ ಟೈಸರ್ ಎಸ್‌ಯುವಿ ಪಡೆದಿರುವ ಕಾಯುವಿಕೆ ಅವಧಿ ಕುರಿತ ವಿವರವನ್ನು ಬಹಿರಂಗಪಡಿಸಿದೆ. ಈ ಕಾರು ಗ್ರಾಹಕರು ಬುಕ್ಕಿಂಗ್ ಮಾಡಿದ ಸರಿ ಸುಮಾರು 1 ತಿಂಗಳ ಬಳಿಕ ವಿತರಣೆಯಾಗುತ್ತದೆ.

Toyota Urban Cruiser Taisor Suv October 2024 Waiting Period Revealed Rs 7 74 Lakh 28 Km Mileage

ನೂತನ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಎಸ್‌ಯುವಿ ರೂ.7.74 ಲಕ್ಷದಿಂದ ರೂ.13.08 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇ, ಎಸ್ ಹಾಗೂ ಎಸ್ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಸ್ಪೋರ್ಟಿನ್ ರೆಡ್, ಗೇಮಿಂಗ್ ಗ್ರೇ ಹಾಗೂ ಲುಸೆಂಟ್ ಆರೆಂಜ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಕಾರು ವಿವಿಧ ಪವರ್‌ಟ್ರೇನ್‌ನೊಂದಿಗೂ ದೊರೆಯುತ್ತದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 148 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

Toyota Urban Cruiser Taisor Suv October 2024 Waiting Period Revealed Rs 7 74 Lakh 28 Km Mileage

ಟೈಸರ್ ಎಸ್‌ಯುವಿಯ ಸಿಎನ್‌ಜಿ ಚಾಲಿತ ರೂಪಾಂತರ 1.2-ಲೀಟರ್ ಎಂಜಿನ್ ಒಳಗೊಂಡಿದ್ದು, 77 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 98.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಹಾಗೂ 6-ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 19.8 ರಿಂದ 28.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಕಾರು ಅತ್ಯಾಧುನಿಕವಾದ ವಿನ್ಯಾಸ (ಡಿಸೈನ್) ಹೊಂದಿದೆ. ಇದರಲ್ಲಿ 5-ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಎಫ್‌ಡಬ್ಲ್ಯೂಡಿ (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ.

ಈ ಎಸ್‌ಯುವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳು, ಹೆಡ್ಸ್-ಅಪ್ ಡಿಸ್‌ಪ್ಲೇ, ಕ್ರೂಸ್ ಕಂಟ್ರೋಲ್ ಮತ್ತು ಪ್ಯಾಡಲ್ ಶಿಫ್ಟರ್‌ನಂತಹ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, October 23, 2024, 20:18 [IST]
English summary
Toyota urban cruiser taisor suv october 2024 waiting period revealed rs 7 74 lakh 28 km mileage
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+