Toyota: 5-ಸೀಟರ್.. 28.5 ಕಿ.ಮೀ ಮೈಲೇಜ್, ಈ ಜನಪ್ರಿಯ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಜಪಾನ್ ಮೂಲದ ಟೊಯೊಟಾ (Toyota) ಪ್ರಮುಖ ಕಾರು ತಯಾರಕ ಕಂಪನಿಯಾಗಿ ಹೆಸರುವಾಸಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಅರ್ಬನ್ ಕ್ರೂಸರ್ ಟೈಸರ್ (Urban Cruiser Taisor) ಜನಪ್ರಿಯ ಎಸ್‌ಯುವಿಯಾಗಿದ್ದು, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ನೀವು ಹೊಚ್ಚ ಹೊಸ ಕಾರನ್ನು ಮನೆಗೆ ತರಲು ಆಲೋಚಿಸಿದ್ದರೆ.. ಈ ಕಾರು ಸರಿ ಹೊಂದುತ್ತದೆ. ನಾವಿಲ್ಲಿ ನೂತನ 'ಟೈಸರ್' ಎಸ್‌ಯುವಿಯ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.

ಬೆಂಗಳೂರಿನಲ್ಲಿ ನೂತನ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor) ಎಸ್‌ಯುವಿ, ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಲಭ್ಯವಿದೆ. ಈ ಕಾರಿನ ಇ (ಪೆಟ್ರೋಲ್) ರೂಪಾಂತರ, ರೂ.8.65 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.6,65 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇ.8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.13,500 ವರೆಗೆ ಇಎಂಐ ಕಟ್ಟಬೇಕು.

Toyota Urban Cruiser Taisor Suv on road price mileage and emi details

ಈ ಟೊಯೊಟಾ ಟೈಸರ್ ಕಾರಿನ ಎಸ್ (ಪೆಟ್ರೋಲ್) ರೂಪಾಂತರ, ರೂ.9.60 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.7.60 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇ.8% ಬಡ್ಡಿ ಹಾಕಿ, 5 ವರ್ಷಗಳಿಗೆ ಮಾಸಿಕ ರೂ.15,500 ವರೆಗೆ ಇಎಂಐ ಪಾವತಿ ಮಾಡಬೇಕು.

ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಎಸ್‌ಯುವಿಯ ಎಸ್ ಪ್ಲಸ್ (ಪೆಟ್ರೋಲ್) ರೂಪಾಂತರ, ರೂ.10 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.8 ಲಕ್ಷವರೆಗೆ ಸಾಲವಿರುತ್ತದೆ. ಶೇ.8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.16,000 ವರೆಗೆ ಇಎಂಐ ಕಟ್ಟಬೇಕು.

Toyota Urban Cruiser Taisor Suv on road price mileage and emi details

ನೂತನ ಅರ್ಬನ್ ಕ್ರೂಸರ್ ಟೈಸರ್ ಕಾರಿನ ಜಿ ಟರ್ಬೊ (ಪೆಟ್ರೋಲ್) ರೂಪಾಂತರ, ರೂ.12 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ಈ ಕಾರನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿಸಿದರೆ, ರೂ.10 ಲಕ್ಷವರೆಗೆ ಸಾಲ ಬಾಕಿ ಉಳಿಯುತ್ತದೆ. ಅದಕ್ಕೆ ಶೇ.8% ಬಡ್ಡಿಯನ್ನು ಹಾಕಿ, 5 ವರ್ಷಗಳಿಗೆ ಮಾಸಿಕ 20,000 ವರೆಗೆ ಇಎಂಐ ಪಾವತಿ ಮಾಡಬೇಕು.

ಈ ಟೊಯೊಟಾ ಟೈಸರ್ ಎಸ್‌ಯುವಿಯ ಇ (ಸಿಎನ್‌ಜಿ) ರೂಪಾಂತರ, ರೂ.9.75 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮನೆಗೆ ತಂದರೆ, ರೂ.7.75 ಲಕ್ಷವರೆಗೆ ಸಾಲವಿರುತ್ತದೆ. ಶೇ.8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ 15,000 ವರೆಗೆ ಇಎಂಐ ಕಟ್ಟಬೇಕು.

ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಎಸ್‌ಯುವಿ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 19.8 ರಿಂದ 28.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಈ ಕಾರು 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು, ಮತ್ತು ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ನಿಮ್ಮ ಗಮನಕ್ಕೆ ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂ ಭೇಟಿ ನೀಡಿರಿ.

More from DriveSpark

Article Published On: Friday, December 20, 2024, 17:32 [IST]
English summary
Toyota urban cruiser taisor suv on road price mileage and emi details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+