ಈ ತಿಂಗಳ ಆರಂಭದಲ್ಲಿಯೇ ಮಾರಾಟಕ್ಕೆ ಬಂದಿವೆ ಜಬರ್ದಸ್ತ್ ಕಾರುಗಳು: ಬೆಲೆ ಎಷ್ಟು.. ವಿಶೇಷತೆಗಳೇನು?
ಭಾರತವು ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಪ್ರತಿ ತಿಂಗಳು ನವೀನ-ಶೈಲಿಯ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ವಿವಿಧ ಕಾರುಗಳು ಮಾರಾಟಕ್ಕೆ ಬರುತ್ತಿವೆ. ದಸರಾ ಹಾಗೂ ದೀಪಾವಳಿ ಹಿನ್ನೆಲೆ, ವಾಹನ ತಯಾರಕ ಕಂಪನಿಗಳಿಗೆ ಈ ಅಕ್ಟೋಬರ್ ತುಂಬಾ ಮಹತ್ವ ತಿಂಗಳಾಗಿದ್ದು, ಮೊದಲ ವಾರದಲ್ಲಿಯೇ ಹೊಸ ತಲೆಮಾರಿನ ಕಿಯಾ ಕಾರ್ನಿವಲ್ (New-Generation Kia Carnival) ಎಂಪಿವಿ ಹಾಗೂ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ (Nissan Magnite Facelift) ಎಸ್‌ಯುವಿಗಳು ಬಿಡುಗಡೆಯಾಗಿದ್ದವು. ಇಲ್ಲಿ ನೂತನ ಕಾರುಗಳ ಬೆಲೆ ಹಾಗೂ ವಿಶೇಷತೆ ಕುರಿತಂತೆ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಹೊಚ್ಚ ಹೊಸ ಕಿಯಾ ಕಾರ್ನಿವಲ್ ಎಂಪಿವಿ ಬಗ್ಗೆ ಮಾತನಾಡೋಣ. ಈ ಕಾರು, ರೂ.63.90 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಲಿಮೋಸಿನ್ ಹಾಗೂ ಲಿಮೋಸಿನ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. ಇದು 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ.

ಈ ಕಿಯಾ ಕಾರ್ನಿವಲ್ ಎಂಪಿವಿ ಹೊರಭಾಗದಲ್ಲಿ ಆಕರ್ಷಕವಾಗಿರುವ ವಿನ್ಯಾಸವನ್ನು (ಡಿಸೈನ್) ಹೊಂದಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ ಆಕಾರಕ್ಕೆ ಹೋಲಿಕೆಯಾಗುವ ಎಲ್‌ಇಡಿ ಡಿಆರ್‌ಎಲ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. 2.2-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಹಾಗೂ 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ನೂತನ ಕಿಯಾ ಕಾರ್ನಿವಲ್ ಎಂಪಿವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, 3-ಜೋನ್ ಕ್ಲೇಮೇಟ್ ಕಂಟ್ರೋಲ್, ಡುಯಲ್ ಸಿಂಗಲ್ ಪೇನ್ ಸನ್‌ರೂಫ್ ಮತ್ತು 12-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 8 ಏರ್‌ಬ್ಯಾಗ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಎಸ್‌ಯುವಿ ಬಗ್ಗೆ ಹೇಳುವುದಾದರೆ, ಇದು ರೂ.5.99 ರಿಂದ ರೂ.11.50 ಲಕ್ಷ (ಎಕ್ಸ್ ಶೋರೂಂ) ದರದಲ್ಲಿ ಖರೀದಿಗೆ ಸಿಗುತ್ತದೆ. ಹೊರಭಾಗದಲ್ಲಿ ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದ್ದು, ಹೊಸದಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ. ಈ ಕಾರಿನಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು.
ಈ ನಿಸ್ಸಾನ್ ಮ್ಯಾಗ್ನೈಟ್ ಕಾರು, 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.4 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ.
ಹೊಸ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಎಸ್‌ಯುವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications