ಮುಂಬರಲಿರುವ ಹೊಸ ಕಾರುಗಳಿವು: ಶೋರೂಂ ತುಂಬಿ ತುಳುಕುವುದು ಪಕ್ಕಾ.. 6 ಲಕ್ಷ ಆರಂಭಿಕ ಬೆಲೆ ನಿರೀಕ್ಷೆ!

ಭಾರತದ ಕಾರು ಮಾರುಕಟ್ಟೆ ದಿನದಿಂದ ದಿನಕ್ಕೆ ಬೆಳವಣಿಗೆಯಾಗುತ್ತಿದೆ. ಪ್ರತಿ ತಿಂಗಳು ನವೀನ ವಿನ್ಯಾಸ ಹಾಗೂ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಹಲವು ಕಾರುಗಳು ಮಾರಾಟಕ್ಕೆ ಬರುತ್ತಿರುತ್ತವೆ. ಮುಂಬರುವ ತಿಂಗಳಲ್ಲಿ ಸ್ಕೋಡಾ ಕೈಲಾಕ್ (Skoda Kylaq), ಟಾಟಾ ನೆಕ್ಸಾನ್ ಸಿಎನ್‌ಜಿ (Tata Nexon CNG), ಕಿಯಾ ಸಿರೋಸ್ (Kia Syros), ಹೊಸ ತಲೆಮಾರಿನ ಹ್ಯುಂಡೈ ವೆನ್ಯೂ (New-gen Hyundai Venue), ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ (Nissan Magnite Facelift) ಮತ್ತು ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch facelift) ಕಾಂಪ್ಯಾಕ್ಟ್ ಎಸ್‌ಯುವಿಗಳು ಬಿಡುಗಡೆಯಾಗಲಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮೊದಲಿಗೆ ಸ್ಕೋಡಾ ಕೈಲಾಕ್ (Skoda Kylaq) ಎಸ್‌ಯುವಿ ಕುರಿತಂತೆ ಮಾತನಾಡೋಣ. ಈ ಕಾರನ್ನು 2025ರ ಜನವರಿ ಎರಡನೇ ವಾರದಲ್ಲಿ ಆಯೋಜಿಸಿರುವ 'ಭಾರತ್ ಮೊಬಿಲಿಟಿ ಎಕ್ಸ್‌ಪೋ'ದಲ್ಲಿ ಅನಾವರಣಗೊಳಿಸುವ ನಿರೀಕ್ಷೆಯಿದೆ. ಇದು ರೂ.8.5 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. 1-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್‌ ಮತ್ತು 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿರುವ ಸಾಧ್ಯತೆಯಿದೆ.

Upcoming 6 Compact Suvs In India Skoda Kylaq Tata Nexon CNG to Kia Syros

ಈ ಸ್ಕೋಡಾ ಕೈಲಾಕ್ ಎಸ್‌ಯುವಿ, ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸ (ಡಿಸೈನ್) ಒಳಗೊಂಡಿರಬಹುದು. ಸ್ಪ್ಲಿಟ್ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್-ಆಕಾರಕ್ಕೆ ಹೋಲಿಕೆಯಾಗುವ ಎಲ್‌ಇಡಿ ಟೈಲ್‌ಲೈಟ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿರುವ ನಿರೀಕ್ಷೆಯಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸನ್‌ರೂಫ್‌ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ಹೊಸ ನೆಕ್ಸಾನ್ ಸಿಎನ್‌ಜಿ (Tata Nexon CNG) ಎಸ್‌ಯುವಿ ತಿಂಗಳಾಂತ್ಯದಲ್ಲಿ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಮಾರಾಟಕ್ಕೆ ಬರಬಹುದು ಎಂದು ತಿಳಿದುಬಂದಿದೆ. ಈ ಕಾರು ಅತಿಕಡಿಮೆ ಬೆಲೆಗೆ ಖರೀದಿಗೆ ದೊರೆಯಲಿದ್ದು, ರೂ.9 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿರಬಹುದು ಎನ್ನಲಾಗಿದೆ. 1.2-ಲೀಟರ್ ಟರ್ಬೋಚಾರ್ಜ್ಡ್ 3-ಸಿಲಿಂಡರ್ ಎಂಜಿನ್ ಹೊಂದಿರಲಿದ್ದು, ಸರಿ ಸುಮಾರು 26.99 ಕೆಎಂ/ಕೆಜಿವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.

Upcoming 6 Compact Suvs In India Skoda Kylaq Tata Nexon CNG to Kia Syros

ಬಹುನಿರೀಕ್ಷಿತ ಕಿಯಾ ಸಿರೋಸ್ (Kia Syros) ಎಸ್‌ಯುವಿಯು 2025ರ ಆರಂಭದಲ್ಲಿ ಬಿಡುಗಡೆಯಾಗಬಹುದು ಎನ್ನಲಾಗಿದೆ. ಈ ಕಾರು ಎರಡು ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿರಲಿದ್ದು, 18 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡಬಹುದು ಎಂದು ಹೇಳಲಾಗಿದೆ. ಜೊತೆಗೆ 5 ಆಸನ ಆಯ್ಕೆ ವ್ಯವಸ್ಥೆಯನ್ನು ಸಹ ಹೊಂದಿರಲಿದೆ ಎನ್ನಲಾಗಿದೆ.

ಹೊಸ ತಲೆಮಾರಿನ ಹ್ಯುಂಡೈ ವೆನ್ಯೂ (New-gen Hyundai Venue) ಕಾಂಪ್ಯಾಕ್ಟ್ ಎಸ್‌ಯುವಿಯು ಮುಂದಿನ ವರ್ಷ (2025) ಮಾರಾಟಕ್ಕೆ ಬರುವ ಸಾಧ್ಯತೆಯಿದೆ. ಈ ಕಾರು 2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಒಳಗೊಂಡಿರಬಹುದು ಎನ್ನಲಾಗಿದೆ. ಜೊತೆಗೆ ರೂ.8 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆ ಹೊಂದಿರುವ ನಿರೀಕ್ಷೆಯಿದೆ.

Upcoming 6 Compact Suvs In India Skoda Kylaq Tata Nexon CNG to Kia Syros

ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ (Nissan Magnite Facelift) ಎಸ್‌ಯುವಿಯು ಬಹಳಷ್ಟು ನವೀಕರಣಗಳನ್ನು ಒಳಗೊಂಡಿರಲಿದ್ದು, ಅಕ್ಟೋಬರ್ 4ರಂದು ಬಿಡುಗಡೆಯಾಗಲಿದೆ. ರೂ.6.30 ಲಕ್ಷ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಬಹುದು ಎಂದು ಅಂದಾಜಿಸಲಾಗಿದೆ. ಈ ಕಾರು 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿರಬಹುದು ಎನ್ನಲಾಗಿದೆ.

ಬಹಳಷ್ಟು ವಿನೂತನವಾದ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿರುವ ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch facelift) ಎಸ್‌ಯುವಿ ಸಹ ಈ ವರ್ಷಾಂತ್ಯದೊಳಗೆ ಮಾರಾಟಕ್ಕೆ ಬರಬಹುದು. ಇದು 1.2-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿರಲಿದ್ದು, 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ. ರೂ.6 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಹೇಳಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, September 17, 2024, 15:13 [IST]
English summary
Upcoming 6 compact suvs in india skoda kylaq tata nexon cng to kia syros
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+