Tata-Maruti-Renault: ಮುಂಬರಲಿರುವ ಪುಟ್ಟ ಎಲೆಕ್ಟ್ರಿಕ್ ಕಾರುಗಳಿವು.. ಜಾಸ್ತಿ ಓಡುತ್ತವೆ!
ಭಾರತದಲ್ಲಿ ಕಳೆದ 2-3 ವರ್ಷಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಭಾರೀ ಬೇಡಿಕೆ ಬಂದಿದೆ. ವಿವಿಧ ಕಂಪನಿಗಳು ಆಕರ್ಷಕ ವೈಶಿಷ್ಟ್ಯದೊಂದಿಗೆ ಗರಿಷ್ಠ ದೂರ ಸಂಚರಿಸುವ ಕಾರುಗಳನ್ನು ಮಾರಾಟಗೊಳಿಸುತ್ತಿವೆ. ಇಲ್ಲಿ ಮುಂಬರಲಿರುವ ಟಾಟಾ (Tata), ಮಾರುತಿ ಸುಜುಕಿ (Maruti Suzuki) ಮತ್ತು ರೆನಾಲ್ಟ್ (Renault) ಎಲೆಕ್ಟ್ರಿಕ್ ಕಾರುಗಳ ಬಗ್ಗೆ ವಿವರಿಸಿದ್ದೇವೆ.
ಮೊದಲಿಗೆ ಟಾಟಾ ಆಲ್ಟ್ರೋಜ್ ಇವಿ (Tata Altroz EV) ಕುರಿತು ತಿಳಿಯೋಣ. ಈ ಕಾರನ್ನು 2025ರಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳ್ಳುವ ಸಾಧ್ಯತೆಯಿದೆ. ಬಹುತೇಕ ಪಂಚ್ ಇವಿಯಂತೆ ಪ್ಲಾಟ್‌ಫಾರ್ಮ್‌ನ್ನು ಹೊಂದಿರಬಹುದು. ಜೊತೆಗೆ ಮುಂಬರಲಿರುವ ಆಲ್ಟ್ರೋಜ್ ಇವಿ, 25 ಕೆಡಬ್ಲ್ಯೂಹೆಚ್ (kWh) ಹಾಗೂ 35 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದಿರಬಹುದು. ಅದಕ್ಕೆ ತಕ್ಕಂತೆ 300 ರಿಂದ 420 ಕಿ.ಮೀ ರೇಂಜ್ (ಮೈಲೇಜ್) ಕ್ರಮಿಸಬಹುದು.

ಈ ಆಲ್ಟ್ರೋಜ್ ಇವಿಯಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 129 ಪಿಎಸ್ ಗರಿಷ್ಠ ಪವರ್ (ಶಕ್ತಿ) ಉತ್ಪಾದಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್ ಮತ್ತು ಕನೆಕ್ಟ್ದ್ ಕಾರ್ ಟೆಕ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಸುಮಾರು 14 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗಬಹುದು ಎಂದು ಅಂದಾಜಿಸಲಾಗಿದೆ.
ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಚಾಲಿತ ರೆನಾಲ್ಟ್ ಕ್ವಿಡ್ (Renault Kwid) ಅತ್ಯಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಈ ಕಾರು ಮುಂಬರುವ ವರ್ಷಗಳಲ್ಲಿ ಎಲೆಕ್ಟ್ರಿಕ್ ರೂಪಾಂತರದಲ್ಲಿ ಬಿಡುಗಡೆಗೊಳ್ಳಬಹುದು. ಇದು ವಿದೇಶದಲ್ಲಿ ಮಾರುಕಟ್ಟೆಗೊಳ್ಳುವ ಡೇಸಿಯಾ ಸ್ಪ್ರಿಂಗ್ ಇವಿ (Dacia Spring EV) ಹೋಲಿಕೆಯಾಗಲಿದೆ ಎಂದು ತಿಳಿದುಬಂದಿದೆ.

ಹೊಸ ರೆನಾಲ್ಟ್ ಕ್ವಿಡ್ ಇವಿ, 26.8 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಒಳಗೊಂಡಿರಬಹುದು. ಅದಕ್ಕೆ ತಕ್ಕಂತೆ 230 ಕಿ.ಮೀ ರೇಂಜ್ (ಮೈಲೇಜ್) ಕೊಡಬಹುದು. ಈ ಕಾರು ತುಂಬಾ ಕಡಿಮೆ ಬೆಲೆಗೆ ರೂ.5 ಲಕ್ಷಕ್ಕೆ ದೊರೆಯಬಹುದು ಎನ್ನಲಾಗಿದೆ. 10-ಇಂಚಿನ ಟಚ್‌ಸ್ಕ್ರೀನ್, 4 ಪವರ್ ವಿಂಡೋ, ಮ್ಯಾನುಯಲ್ ಎಸಿ, ಕನೆಕ್ಟ್ದ್ ಕಾರ್ ಟೆಕ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿರುವ ಸಾಧ್ಯತೆಯಿದೆ.
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಸಹ ಎಲೆಕ್ಟ್ರಿಕ್ ಅವತಾರದಲ್ಲಿ ಬಿಡುಗಡೆಗೊಳ್ಳಬಹುದು ಎಂದು ಆಗಾಗ ಸುದ್ದಿಯಾಗುತ್ತಿರುತ್ತದೆ. ಈ ಕಾರು 300 ಕಿ.ಮೀ ಕ್ರಮಿಸುವ ಸಾಮರ್ಥ್ಯವನ್ನು ಹೊಂದಿರುವ ಬ್ಯಾಟರಿ ಪ್ಯಾಕ್ ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಜನವರಿ 2026ರಲ್ಲಿ ಭಾರತದ ಮಾರುಕಟ್ಟೆಯಲ್ಲಿ ಲಾಂಚ್ ಆಗುವ ಸಾಧ್ಯತೆಯಿದೆ.

ವ್ಯಾಗನ್ಆರ್ ಎಲೆಕ್ಟ್ರಿಕ್ ಕಾರು ರೂ.8.5 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಬಹುದು ಎಂದು ಹೇಳಲಾಗಿದೆ. 7-ಇಂಚಿನ ಟಚ್‌ಸ್ಕ್ರೀನ್ ಸ್ಕ್ರಿನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿರಬಹುದು. ಸುರಕ್ಷತೆಯ ದೃಷ್ಟಿಯಿಂದ ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೇನಾರ್ಸ್, ಹಿಲ್ - ಹೋಲ್ಡ್ ಅಸಿಸ್ಟ್ ಅನ್ನು ಒಳಗೊಂಡಿರಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications