Volkswagen Taigun: ಸಿಹಿಸುದ್ದಿ.. ಫೋಕ್ಸ್‌ವ್ಯಾಗನ್ ಟೈಗನ್ ಕಾರಿನ ಬೆಲೆ ರೂ.1.10 ಲಕ್ಷ ಇಳಿಕೆ
ಜನಪ್ರಿಯ ಕಾರು ತಯಾರಕ ಕಂಪನಿ ಫೋಕ್ಸ್‌ವ್ಯಾಗನ್ ಇಂಡಿಯಾ (Volkswagen India), ತಕ್ಷಣದಿಂದಲೇ ಜಾರಿಗೆ ಬರುವಂತೆ ಟೈಗುನ್ (Taigun) ಕಾರಿನ ಬೆಲೆಯನ್ನು ಪರಿಷ್ಕರಿಸಿದೆ. ಆಯ್ದ ರೂಪಾಂತರಗಳಿಗೆ ಅನ್ವಯವಾಗುವಂತೆ ಎಕ್ಸ್ ಶೋರೂಂ ಬೆಲೆಯನ್ನು ರೂ.1.10 ಲಕ್ಷದವರೆಗೆ ಕಡಿತಗೊಳಿಸಿದೆ. ಇದು ಸೀಮಿತ ಅವಧಿಯ ಕೊಡುಗೆಯಾಗಿದೆ.
ಫೋಕ್ಸ್‌ವ್ಯಾಗನ್ ಟೈಗನ್ ಕಂಫರ್ಟ್‌ಲೈನ್ 1.0 ಎಂಟಿ ರೂಪಾಂತರ ಈ ಮೊದಲು ರೂ.11.70 ಲಕ್ಷ ದರವನ್ನು ಪಡೆದಿತ್ತು. ಈಗ ರೂ.70,000 ಇಳಿಕೆಯಾಗಿ, ರೂ.11 ಲಕ್ಷ ಬೆಲೆಯನ್ನು ಹೊಂದಿದೆ. ಜಿಟಿ ಪ್ಲಸ್ ಕ್ರೋಮ್ 1.5 ಡಿಎಸ್‌ಜಿ ಮಾದರಿ ದರ ರೂ.75,000 ಕಡಿಮೆಯಾಗಿ, ರೂ.18.69 ಲಕ್ಷಕ್ಕೆ ತಲುಪಿದೆ. 1.5 ಜಿಟಿ ಪ್ಲಸ್ ಡಿಎಸ್‌ಜಿ ಡೀಪ್ ಬ್ಲ್ಯಾಕ್ ಪರ್ಲ್ ಆವೃತ್ತಿ ಬೆಲೆ ರೂ.1.04 ಲಕ್ಷ ಇಳಿಕೆಯಾಗಿ ರೂ.18.90 ಲಕ್ಷವಾಗಿದೆ.

ನೂತನ ಫೋಕ್ಸ್‌ವ್ಯಾಗನ್ ಟೈಗನ್ (Volkswagen Taigun) ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, ಲಾವಾ ಬ್ಲೂ, ಕರ್ಕುಮಾ ಯೆಲ್ಲೋ, ವೈಲ್ಡ್ ಚೆರ್ರಿ ರೆಡ್, ಕ್ಯಾಂಡಿ ವೈಟ್, ಕಾರ್ಬನ್ ಸ್ಟೀಲ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಜೊತೆಗೆ ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.
ಫೋಕ್ಸ್‌ವ್ಯಾಗನ್ ಟೈಗನ್ 2 ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1-ಲೀಟರ್ ಪೆಟ್ರೋಲ್ ಎಂಜಿನ್, 115 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 178 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.5-ಲೀಟರ್ ಪೆಟ್ರೋಲ್ ಎಂಜಿನ್, 150 ಪಿಎಸ್ ಪವರ್ ಹಾಗೂ 250 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ.

ಈ ಫೋಕ್ಸ್‌ವ್ಯಾಗನ್ ಟೈಗನ್ ರೂಪಾಂತರಗಳಿಗೆ ಅನುಗುಣವಾಗಿ 6-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಟಾರ್ಕ್ ಕನ್ವರ್ಟರ್ ಹಾಗೂ 7-ಸ್ವೀಡ್ ಡಿಸಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದ್ದು, 17.88 ರಿಂದ 20.08 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. ಇದು 385 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಒಳಗೊಂಡಿದೆ.
ನೂತನ ಫೋಕ್ಸ್‌ವ್ಯಾಗನ್ ಟೈಗನ್ (Volkswagen Taigun) 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕನೆಕ್ಟ್ದ್ ಕಾರ್ ಟೆಕ್, 8-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸಬ್ ವೂಫರ್ ಮತ್ತು ಆಂಪ್ಲಿಫೈಯರ್, ಆಂಬಿಯೆಂಟ್ ಲೈಟಿಂಗ್, ಸಿಂಗಲ್ ಪೇನ್ ಸನ್‌ರೂಫ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಸುರಕ್ಷತೆಗೂ 6-ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ವ್ಯೂ ಕ್ಯಾಮೆರಾ ಹಾಗೂ ಎಲ್ಲ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ರಿಮೈಂಡರ್ಸ್ ಅನ್ನು ಪಡೆದಿದೆ. ಈ ಕಾರಿಗೆ ಹ್ಯುಂಡೈ ಕ್ರೆಟಾ, ಮಾರುತಿ ಗ್ರ್ಯಾಂಡ್ ವಿಟಾರಾ, ಕಿಯಾ ಸೆಲ್ಟೋಸ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ. ಗಮನಿಸಿ.. ಈ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








