ಭಾರೀ ಬೇಡಿಕೆ: ಫೋಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿಗಾಗಿ ಕ್ಯೂ ನಿಂತ ಜನ!
ಜನಪ್ರಿಯ ಕಾರು ತಯಾರಕ ಕಂಪನಿ ಫೋಕ್ಸ್‌ವ್ಯಾಗನ್‌ನ (Volkswagen) ಜನಪ್ರಿಯ ಎಸ್‍ಯುವಿ ಟೈಗನ್ ಆಕರ್ಷಕ ಮಾದರಿಯಾಗಿದೆ. ಈ ಫೋಕ್ಸ್‌ವ್ಯಾಗನ್ ಟೈಗನ್ (Volkswagen Taigun) ಎಸ್‍ಯುವಿಯು ಭರ್ಜರಿಯಾಗಿ ಮಾರಾಟವಾಗುತ್ತಿದೆ. 2024ರ ಜೂನ್ ತಿಂಗಳಿನಲ್ಲಿ ಟೈಗನ್ ಮಾದರಿಯ 1,519 ಯುನಿಟ್ ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಜೂನ್ ತಿಂಗಳಿನಲ್ಲಿ ಟೈಗನ್ ಮಾದರಿಯ 1,449 ಯುನಿಟ್ ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.5 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಈ ಫೋಕ್ಸ್‌ವ್ಯಾಗನ್ ಟೈಗನ್‌ನ MQB A0ರಲಿ-IN ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ.
ಫೋಕ್ಸ್‌ವ್ಯಾಗನ್ ಟೈಗನ್ ಕಂಫರ್ಟ್‌ಲೈನ್, ಹೈಲೈನ್, ಟಾಪ್‌ಲೈನ್, ಸೌಂಡ್ ಎಡಿಷನ್ ಟಾಪ್‌ಲೈನ್, ಜಿಟಿ, ಜಿಟಿ ಎಡ್ಜ್ ಟ್ರಯಲ್ ಎಡಿಷನ್, ಜಿಟಿ ಪ್ಲಸ್, ಜಿಟಿ ಎಡ್ಜ್ ಲಿಮಿಟೆಡ್ ಎಡಿಷನ್ ಮತ್ತು ಜಿಟಿ ಪ್ಲಸ್ ಎಡ್ಜ್ ಸೇರಿದಂತೆ ಅನೇಕ ರೂಪಾಂತರಗಳಲ್ಲಿ ಲಭ್ಯವಿದೆ. ಇದು ಬ್ರಾಂಡ್‌ನ ಇಂಡಿಯಾ 2.0 ಸ್ಟ್ರಾಟಜಿ ಅಡಿಯಲ್ಲಿ ಹೊರಬಂದ ಮೊದಲ ಮಾದರಿಯಾಗಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯ ಬಗ್ಗೆ ಹೇಳುವುದಾದರೆ, ಈ ಎಸ್‍ಯುವಿಯು ಕಂಫರ್ಟ್‌ಲೈನ್, ಹೈಲೈನ್, ಟಾಪ್‌ಲೈನ್, ಸೌಂಡ್ ಎಡಿಷನ್ ಟಾಪ್‌ಲೈನ್, ಜಿಟಿ, ಜಿಟಿ ಎಡ್ಜ್ ಟ್ರಯಲ್ ಎಡಿಷನ್, ಜಿಟಿ ಪ್ಲಸ್, ಜಿಟಿ ಎಡ್ಜ್ ಲಿಮಿಟೆಡ್ ಎಡಿಷನ್ ಮತ್ತು ಜಿಟಿ ಪ್ಲಸ್ ಎಡ್ಜ್ ಸೇರಿದಂತೆ ಅನೇಕ ರೂಪಾಂತರಗಳಲ್ಲಿ ಲಭ್ಯವಿದೆ. ಎಸ್‌ಯುವಿಯು ಫೋಕ್ಸ್‌ವ್ಯಾಗನ್ ಎಸ್‌ಯುವಿ ಗ್ರಿಲ್ ಸಿಗ್ನೇಚರ್ ಪಡೆಯುತ್ತದೆ ಅದು ಹೆಡ್‌ಲ್ಯಾಂಪ್‌ಗಳನ್ನು ಪೂರೈಸಲು ವಿಸ್ತರಿಸುತ್ತದೆ.
ಈ ಎಸ್‍ಯುವಿಯ ಟಾಪ್-ಎಂಡ್ ಆವೃತ್ತಿಯು ಎಲ್ಲಾ ಎಲ್ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಎಲ್‌ಇಡಿ ಡಿಆರ್‌ಎಲ್ ಅನ್ನು ಪಡೆಯುತ್ತದೆ. ಈ ಫೋಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿಯು ಎರಡು ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಡೈನಾಮಿಕ್ ಟ್ರಿಮ್ ಅಡಿಯಲ್ಲಿರುವ ರೂಪಾಂತರಗಳು 1.0 ಲೀಟರ್, ಮೂರು ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದ್ದರೆ, ಪರ್ಫಾರ್ಮೆನ್ಸ್ ಮಾದರಿಯು 1.5 ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಪಡೆಯುತ್ತದೆ.

ಇದರಲ್ಲಿ 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 115 ಬಿಹೆಚ್‍ಪಿ ಪವರ್ ಮತ್ತು 178 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಸ್‍ಯುವಿಯಲ್ಲಿ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 1.0 ಲೀಟರ್ ಎಂಜಿನ್ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್‌ನೊಂದಿಗೆ ಲಭ್ಯವಿದೆ.
ಇದರೊಂದಿಗೆ 1.5 ಲೀಟರ್ ಎಂಜಿನ್ 6-ಸ್ಪೀಡ್ ಮ್ಯಾನುವಲ್ ಮತ್ತು DSG ಗೇರ್ ಬಾಕ್ಸ್ ಆಯ್ಕೆಯೊಂದಿಗೂ ಲಭ್ಯವಿರುತ್ತದೆ. ಇನ್ನೋಂದು ಮಾದರಿ ಫೋಕ್ಸ್‌ವ್ಯಾಗನ್ ವರ್ಟಸ್ ಬಗ್ಗೆ ಹೇಳುವುದಾದರೆ, ಪೆಟ್ರೋಲ್-ಮಾತ್ರ ಸೆಡಾನ್ ಆಗಿದ್ದು, ಈ ಕಾರಿನಲ್ಲಿ 1.0-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಎಂಜಿನ್‌ಗಳನ್ನು ಹೊಂದಿವೆ. ಇದರಲ್ಲಿ 1.0 ಲೀಟರ್ TSI ಪೆಟ್ರೋಲ್ ಎಂಜಿನ್ 114 ಬಿಹೆಚ್‍ಪಿ ಪವರ್ ಮತ್ತು 175 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಅಥವಾ ಆಯ್ಕೆಯ 6-ಸ್ಪೀಡ್ ಟಾರ್ಕ್ ಕರ್ನ್ವಾಟರ್ ಪಡೆಯುತ್ತದೆ. ಇದರೊಂದಿಗೆ 1.5 ಲೀಟರ್ TSI ಪೆಟ್ರೋಲ್ ಎಂಜಿನ್ 148 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 7-ಸ್ಪೀಡ್ DSG ಆಟೋಮ್ಯಾಟಿಕ್ ಗೇರ್‌ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications