ಮಾರಾಟದಲ್ಲಿ ಕುಸಿತ ಕಂಡ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ (Volkswagen) ತನ್ನ ಮಾರ್ಚ್ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ವರದಿ ಪ್ರಕಾರ, ಕಳೆದ ಮಾರ್ಚ್ ತಿಂಗಳಿನಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು 3,529 ಯುನಿಟ್ ಗಳನ್ನು ಮಾರಾಟ ಮಾಡಿದೆ. ಕಳೆದ ತಿಂಗಳ ಕಾರು ಮಾರಾಟದಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು ಕುಸಿತವನ್ನು ಕಂಡಿದೆ.

ಎಸ್‍ಯುವಿಗೆ ಭಾರತದಲ್ಲಿ ಭಾರೀ ಬೇಡಿಕೆಯನ್ನು ಹೊಂದಿದೆ. ಪ್ರತಿ ವರ್ಷ ಈ ರೀತಿಯ ಕಾರು ಖರೀದಿಸುವ ಗ್ರಾಹಕರ ಸಂಖ್ಯೆ ಹೆಚ್ಚುತ್ತಿದೆ. ಪರಿಣಾಮವಾಗಿ, ಈ ವಿಭಾಗದಲ್ಲಿ ಯಾವುದೇ ಕಾರು ಅತ್ಯುತ್ತಮ ಮಾರಾಟವನ್ನು ಪಡೆಯುತ್ತಿದೆ. ಎಸ್‍ಯುವಿಗಳು ಸೂಕ್ತವಾದ ವೈಶಿಷ್ಟ್ಯದ ಪ್ರಕಾರ ಗ್ರಾಹಕರನ್ನು ಆಕರ್ಷಿಸುತ್ತದೆ. ಕಳೆದ ತಿಂಗಳು ಫೋಕ್ಸ್‌ವ್ಯಾಗನ್ ಕಂಪನಿಯ ಟಿಗ್ವಾನ್ ಎಸ್‍ಯುವಿಯ ಮಾರಾಟವು 100ರ ಗಡಿ ದಾಟುವಲ್ಲಿ ವಿಫಲವಾಗಿದೆ.

Volkswagen Tiguan

ಕಳೆದ ತಿಂಗಳು ಟಿಗ್ವಾನ್ ಮಾದರಿಯ ಕೇವಲ 94 ಯುನಿಟ್ ಗಳು ಮಾರಾಟವಾಗಿವೆ. ಫೋಕ್ಸ್‌ವ್ಯಾಗನ್ ಕಂಪನಿಯು ಟಿಗ್ವಾನ್ ಆಲ್‌ಸ್ಪೇಸ್ 7-ಸೀಟರ್ ಎಸ್‍ಯುವಿಯನ್ನು ಭಾರತದಲ್ಲಿ ಇತ್ತೀಚೆಗೆ ಸ್ಥಗಿತಗೊಳಿಸಿದೆ. ಇದರ ನಂತರ ಫೋಕ್ಸ್‌ವ್ಯಾಗನ್ ಕಂಪನಿಯು ಹೊಸ ಟಿಗ್ವಾನ್ 5-ಸೀಟರ್ ಅನ್ನು ತನ್ನ ಪ್ರಮುಖ ಎಸ್‌ಯುವಿಯನ್ನಾಗಿ ಮಾಡಿದೆ. ಟಿಗ್ವಾನ್ ಫೇಸ್‌ಲಿಫ್ಟ್‌ ಎಸ್‌‍ಯುವಿಯು ಅಗ್ರೇಸಿವ್ ವಿನ್ಯಾಸ, ಅತ್ಯುತ್ತಮ ಕಾರ್ಯಕ್ಷಮತೆ, ಸುರಕ್ಷತೆ ಮತ್ತು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ಮಾದರಿಯಾಗಿದೆ.

ಕಳೆದ ಬಾರೀ ಟಿಗ್ವಾನ್ ಡೀಸೆಲ್ ಎಂಜಿನ್ ಅನ್ನು ಕೈಬಿಟ್ಟಿದೆ ಮತ್ತು ಪೆಟ್ರೋಲ್ ಎಂಜಿನ್‌ನೊಂದಿಗೆ ಮಾತ್ರ ಲಭ್ಯವಿದೆ. ಈ ಎಸ್‍ಯುವಿಯು ಸಣ್ಣ ವಿನ್ಯಾಸ ಬದಲಾವಣೆಗಳನ್ನು ಮತ್ತು ವೈಶಿಷ್ಟ್ಯದ ನವೀಕರಣಗಳನ್ನು ಸಹ ಸ್ವೀಕರಿಸಿತು. ಈ ಟಿಗ್ವಾನ್ MQB ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ ಆಕರ್ಷಕ 5-ಸೀಟರ್ ಎಸ್‍ಯುವಿಯಾಗಿದೆ.

Volkswagen Tiguan

ಫೋಕ್ಸ್‌ವ್ಯಾಗನ್ ಟಿಗ್ವಾನ್ (Volkswagen Tiguan) ಎಸ್‍ಯುವಿ ವಿನ್ಯಾಸದ ಬಗ್ಗೆ ಹೇಳುವುದಾದರೆ, ಸ್ವಲ್ಪ ಇದು ದೇಶದಲ್ಲಿ ಮಾರಾಟವಾಗಿದ್ದ ಅದರ ಹಿಂದಿನ ಮಾದರಿಗೆ ಸ್ವಲ್ಪ ಹೋಲುತ್ತದೆ. ಆದರೆ ಕೆಲವು ಟ್ವೀಕ್‌ಗಳಿವೆ.ಇನ್ನು ಈ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿ ನಯವಾದ ಹೆಡ್‌ಲ್ಯಾಂಪ್‌ಗಳನ್ನು ಹೊಂದಿವೆ. ಇದು ಎಲ್ಇಡಿ ಮ್ಯಾಟ್ರಿಕ್ಸ್ ತಂತ್ರಜ್ಞಾನದಿಂದ ಕೂಡಿದೆ. ಇನ್ನು ಈ ಟಿಗ್ವಾನ್ ಫೇಸ್‌ಲಿಫ್ಟ್‌ ಎಸ್‍ಯುವಿಯ ಕ್ರೋಮ್ ಫಿನಿಶಿಂಗ್ ಹೊಂದಿರುವ ವಿಂಡೋ ಲೈನ್ ಎಸ್‍ಯುವಿಯ ಪ್ರೀಮಿಯಂ ಲುಕ್ ಅನ್ನು ಹೆಚ್ಚಿಸಲಾಗಿದೆ.

ಈ ಎಸ್‍ಯುವಿಯಲ್ಲಿ ಸ್ಪ್ಲಿಟ್-ಸ್ಟೈಲ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಬಂಪರ್‌ನಲ್ಲಿ ಕ್ರೋಮ್ ಅಸ್ಸೆಂಟ್ ಗಳು, ದೊಡ್ಡ ಪ್ರತಿಫಲಿತ ಸ್ಟ್ರಿಪ್ ಮತ್ತು ಬೂಟ್ ಲಿಡ್ ಮಧ್ಯದಲ್ಲಿ ವಿಡಬ್ಲ್ಯೂ ಬ್ಯಾಡ್ಜ್ ಅನ್ನು ಇರಿಸಲಾಗಿದೆ. ಇನ್ನು ಈ ಟಿಗ್ವಾನ್ ಮಾದರಿಯ ಇಂಟಿರಿಯರ್ ನಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕನೆಕ್ಟ್ ಆಗಿರುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ.

Volkswagen Tiguan

ಇನ್ನು ಇದರಲ್ಲಿ ಸಂಪೂರ್ಣ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಸ್ಕಫ್ ಪ್ಲೇಟ್‌ಗಳು, ಪನೋರಮಿಕ್ ಸನ್‌ರೂಫ್ ಮತ್ತು 30 ಮಾದರಿಯ ಅಂಬೈಟ್ ಲೈಟ್ ಗಳನ್ನು ಕೂಡ ಇದಲ್ಲಿ ನೀಡಿದೆ. ಕಳೆದ ಬಾರೀ ನವೀಕರಣಗೊಂಡ ಎಸ್‍ಯುವಿಯ ಹಿಂಭಾಗದಲ್ಲಿ ಎಸಿ ವೆಂಟ್ಸ್, ವೈರ್‌ಲೆಸ್ ಮೊಬೈಲ್ ಚಾರ್ಜಿಂಗ್ ಜೊತೆಗೆ ಅನೇಕ ಯುಎಸ್‌ಬಿ ಸ್ಲಾಟ್‌ಗಳು, ಕೂಲ್ಡ್ ಗ್ಲೋವ್‌ಬಾಕ್ಸ್ ಮತ್ತು ಬಳಕೆಯ ಸುಲಭವಾದ ಕನೆಕ್ಟಿವಿಟಿ ಹೊಂದಿರುವ ತಂತ್ರಜ್ಞಾನದವನ್ನು ಕೂಡ ಒಳಗೊಂಡಿದೆ.

ಟಿಗ್ವಾನ್ ಮಾದರಿಯಲ್ಲಿ 2.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 187.34 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 7-ಸ್ಪೀಡ್ ಡಿಎಸ್ಜಿ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಇದರೊಂದಿಗೆ ಆಲ್-ವ್ಹೀಲ್-ಡ್ರೈವ್ ಸಿಸ್ಟಂ ಅನ್ನು ಒಳಗೊಂಡಿದೆ.

ಇನ್ನು ಈ ಟಿಗ್ವಾನ್ ಎಸ್‍ಯುವಿಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ, ಆರು ಏರ್‌ಬ್ಯಾಗ್‌ಗಳು, ಎಬಿಎಸ್, ಇಎಸ್‌ಪಿ, ಆಂಟಿ-ಸ್ಪಿಲ್ ಕಂಟ್ರೋಲ್, ಆಟೋ-ಹೋಲ್ಡ್, ಹಿಲ್ ಸ್ಟಾರ್ಟ್ ಅಸಿಸ್ಟ್ & ಹಿಲ್ ಡಿಸೆಂಟ್ ಕಂಟ್ರೋಲ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್, ಹಿಂಭಾಗದಲ್ಲಿ 3 ಹೆಡ್‌ರೆಸ್ಟ್‌ಗಳು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಆಂಕರ್, ಡ್ರೈವರ್ ಅಲರ್ಟ್ ಸಿಸ್ಟಂ ಮತ್ತು ಎಲ್ಇಡಿ ಕಾರ್ನರಿಂಗ್ ಲ್ಯಾಂಪ್ ಅನ್ನು ಒಳಗೊಂಡಿದೆ.

More from DriveSpark

Article Published On: Monday, April 15, 2024, 19:42 [IST]
English summary
Volkswagen taigun suv sales march 94 units sold details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+