ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕರ್ನಾಟಕದಲ್ಲಿ ತಯಾರಾಗುವ ವೋಲ್ವೋ ಕಾರು
ಜನಪ್ರಿಯ ಕಾರು ತಯಾರಕ ಕಂಪನಿಯಾದ ವೋಲ್ವೋ ಕಾರ್ ಇಂಡಿಯಾ (Volvo Car India) ತನ್ನ ವೋಲ್ವೋ XC40 ರೀಚಾರ್ಜ್ (Volvo XC40 Recharge) ಎಲೆಕ್ಟ್ರಿಕ್ ಈಸ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿತು. ಇದೀಗ ಈ ವೋಲ್ವೋ XC40 ರೀಚಾರ್ಜ್ ಎಲೆಕ್ಟ್ರಿಕ್ ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ.
ವೋಲ್ವೋ ಕಂಪನಿಯ ಹೊಸಕೋಟೆ ಸ್ಥಾವರದಿಂದ ವೋಲ್ವೋ XC40 ರೀಚಾರ್ಜ್ ಮಾದರಿಯ 10,000ನೇ ಯುನಿಟ್ ಅನ್ನು ಉತ್ಪಾದಿಸಿದೆ. ಈ ಮಹತ್ವದ ಮೈಲಿಗಲ್ಲು ಸಾಧಿಸಿರುವ ವೋಲ್ವೋ C40 ರೀಚಾರ್ಜ್ ಮಾದರಿಯು ಎಲೆಕ್ಟ್ರಿಕ್ ಎಸ್‍ಯುವಿಯಾಗಿದೆ. ಈ ಪ್ರೀಮಿಯಂ ಎಲೆಕ್ಟ್ರಿಕ್ ಕಾರು ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗಯಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿದೆ. ಪ್ರೀಮಿಯಂ ಗ್ರಾಹರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

2017 ರಲ್ಲಿ ಸ್ಥಳೀಯ ಅಸೆಂಬ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗಿನಿಂದ, ವೋಲ್ವೋ ಭಾರತದಲ್ಲಿ ತನ್ನ ಅಸ್ತಿತ್ವವನ್ನು ಭದ್ರಪಡಿಸುತ್ತಿದೆ. XC60 ಎಸ್‍ಯುವಿಯು ಕೂಡ ಭಾರತದಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ. ಒಟ್ಟು ಉತ್ಪಾದನೆಯ ಸರಿಸುಮಾರು 40% ಅನ್ನು ಪ್ರತಿನಿಧಿಸುತ್ತದೆ ಮತ್ತು 4,000 ಯುನಿಟ್‌ಗಳನ್ನು ಭಾರತದ ನೆಲದಲ್ಲಿ ರಚಿಸಲಾಗಿದೆ.
ಹೊಸಕೋಟೆಯಲ್ಲಿನ ಅತ್ಯಾಧುನಿಕ ಘಟಕದಲ್ಲಿ XC90, XC60, S90, XC40 ರೀಚಾರ್ಜ್ ಮತ್ತು C40 ರೀಚಾರ್ಜ್ ಸೇರಿದಂತೆ ಹಲವಾರು ಮಾದರಿಗಳನ್ನು ಜೋಡಿಸಲು ಸಜ್ಜುಗೊಂಡಿದೆ. ಇದು ಕೇವಲ ತಾಂತ್ರಿಕ ಪ್ರಗತಿಯೊಂದಿಗೆ ವೇಗವಾಗಿ ಕಾರುಗಳ ಅಸೆಂಬ್ಲೆಯು ನಡೆಯುತ್ತದೆ. ಇದೇ ಘಟಕದಲ್ಲಿ ಭಾರತದ ಮೊದಲ ಸ್ವದೇಶಿ ಎಲೆಕ್ಟ್ರಿಕ್ ವಾಹನವಾದ XC40 ರೀಚಾರ್ಜ್ ಅನ್ನು ಜೋಡಿಸಿದೆ.
ಈ ಹೊಸ ವೋಲ್ವೋ C40 ರೀಚಾರ್ಜ್ ಮಾದರಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.57.90 ಲಕ್ಷವಾಗಿದೆ. ಈ ವೋಲ್ವೋ ಎಕ್ಸ್‌ಸಿ40 ರೀಚಾರ್ಜ್ ಮಾದರಿಯಲ್ಲಿ 78kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದ್ದು, ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್ ಆಯ್ಕೆ ಹೊಂದಿರುವ ಹೊಸ ಕಾರು 402 ಬಿಎಚ್‌ಪಿ ಮತ್ತು 660 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.
ಈ ಕಾರಿನಲ್ಲಿ ಕಂಪನಿಯು ಸ್ಟ್ಯಾಂಡರ್ಡ್ ಆಗಿ 11kW ಹೋಂ ಚಾರ್ಜರ್ ಅನ್ನು ನೀಡಿದೆ. ಇದು ಪ್ರತಿ ಚಾರ್ಜ್‌ಗೆ ಗರಿಷ್ಠ 418 ಕಿ.ಮೀ ಮೈಲೇಜ್ ನೀಡುವುದಾಗಿ ಡಬ್ಲ್ಯುಎಲ್‌ಟಿಪಿ ಟೆಸ್ಟಿಂಗ್ ಮೂಲಕ ಪ್ರಮಾಣೀಕರಿಸಲಾಗಿದೆ. ಇನ್ನು 11kW ಹೋಂ ಚಾರ್ಜರ್ ಮೂಲಕ ಬ್ಯಾಟರಿ ಪೂರ್ತಿ ಚಾರ್ಜ್ ಮಾಡಲು ಕನಿಷ್ಠ 12 ರಿಂದ 18 ಗಂಟೆಗಳ ಕಾಲ ಸಮಯಾವಕಾಶ ತೆಗೆದುಕೊಂಡರೆ 50kW ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಎರಡೂವರೆ ಗಂಟೆಗಳಲ್ಲಿ ಪೂರ್ತಿ ಚಾರ್ಜ್ ಮಾಡಬಹುದಾಗಿದೆ.
ಕೇವಲ 33 ನಿಮಿಷಗಳಲ್ಲಿ ಶೇ.80 ರಷ್ಟು ಚಾರ್ಜಿಂಗ್ ಒಗದಗಿಸಬಲ್ಲ 150kW ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯಕ್ಕೆ ಹೊಸ ಕಾರಿನ ಬ್ಯಾಟರಿ ಪ್ಯಾಕ್ ಸರ್ಪೊಟ್ ಮಾಡಲಿದೆ. ಭಾರೀ ಗಾತ್ರದ ಬ್ಯಾಟರಿ ಪ್ಯಾಕ್ ಪರಿಣಾಮ ಹೊಸ ಕಾರು ಬರೋಬ್ಬರಿ 2,188 ಕೆ.ಜಿ ಪಡೆದುಕೊಂಡಿದೆ. ಹೊಸ ಎಕ್ಸ್‌ಸಿ40 ರೀಚಾರ್ಜ್ ಇವಿ ಕಾರು ಮಾದರಿಯು ಸಾಮಾನ್ಯ ಎಕ್ಸ್‌ಸಿ40 ಪೆಟ್ರೋಲ್ ಕಾರಿಗಿಂತಲೂ 400 ಕೆ.ಜಿಯಷ್ಟು ಹೆಚ್ಚಿನ ತೂಕ ಹೊಂದಿದೆ.
ಈ ಎಲೆಕ್ಟ್ರಿಕ್ ಕಾರಿನಲ್ಲಿ 19 ಇಂಚಿನ ಅಲಾಯ್ ವ್ಹೀಲ್, 452 ಲೀಟರ್ ಸಾಮರ್ಥ್ಯದ ಬೂಟ್‌ಸ್ಪೆಸ್ ನೀಡಲಾಗಿದೆ. ಇವಿ ಮಾದರಿಯಾಗಿರುವುದರಿಂದ ಹೊಸ ಕಾರಿನ ಬಾನೆಟ್ ಅಡಿಯಲ್ಲೂ ಸುಮಾರು 31 ಲೀಟರ್ ನಷ್ಟು ಸ್ಟೋರೇಜ್ ಸ್ಪೆಸ್ ಲಭ್ಯವಿದೆ. ಹೊಸ ಕಾರಿನಲ್ಲಿ ಐಷಾರಾಮಿ ಚಾಲನೆಗೆ ಪೂರಕವಾದ ಹಲವಾರು ತಾಂತ್ರಿಕ ಸೌಲಭ್ಯಗಳಿವೆ. ಈ ಎಲೆಕ್ಟ್ರಿಕ್ ಎಸ್‍ಯುವಿಯ ಒಳಭಾಗದಲ್ಲೂ ಹಲವಾರು ಆಕರ್ಷಕ ತಾಂತ್ರಿಕ ಸೌಲಭ್ಯಗಳನ್ನು ಹೊಂದಿವೆ.
ಈ ವೋಲ್ವೋ ಎಕ್ಸ್‌ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಕಾರು ಕೇವಲ 4.9 ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗ ಪಡೆದುಕೊಳ್ಳುತ್ತದೆ. ಇನ್ನು ಈ ಕಾರು ಪ್ರತಿ ಗಂಟೆಗೆ 180 ಕಿ.ಮೀ ಟಾಪ್ ಸ್ಪೀಡ್ ಹೊಂದಿದೆ. ಈ ಕಾರು 4,425 ಎಂಎಂ ಉದ್ದ, 1,863 ಎಂಎಂ ಅಗಲ, 1,652 ಎಂಎಂ ಅಗಲ ಮತ್ತು 175 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಅನ್ನು ಹೊಂದಿದೆ.


Click it and Unblock the Notifications