ಮಹೀಂದ್ರಾ ಥಾರ್ ರಾಕ್ಸ್‌ನ್ನು ಬುಕ್ಕಿಂಗ್ ಮಾಡಲು ಕಾಯುತ್ತಿದ್ದೀರಾ?.. ಈ ಪ್ರಮುಖ ವಿಚಾರಗಳು ನಿಮಗೆ ಗೊತ್ತಿರಲಿ!

ಭಾರತದ ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಮಹೀಂದ್ರಾ (Mahindra) ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ 5-ಡೋರ್‌ನ ಮಾರುತಿ ಸುಜುಕಿ ಜಿಮ್ನಿ & ಫೋರ್ಸ್ ಗೂರ್ಖಾಗೆ ಪ್ರಬಲವಾದ ಪೈಪೋಟಿ ನೀಡಲು, ಥಾರ್ ರಾಕ್ಸ್‌ (Thar Roxx) ಎಸ್‌ಯುವಿಯನ್ನು 5-ಡೋರ್‌ ಆಯ್ಕೆಯಲ್ಲಿ ಆಗಸ್ಟ್ 14ರ ಮಧ್ಯರಾತ್ರಿ ಬಿಡುಗಡೆಗೊಳಿಸಿತ್ತು. ಸದ್ಯ ಈ ಕಾರಿನ ಮೇಲೆ ಗ್ರಾಹಕರು ಕೂಡ ದೊಡ್ಡಮಟ್ಟದಲ್ಲಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ನೀವು ಹೊಚ್ಚ ಹೊಸ ಥಾರ್ ರಾಕ್ಸ್‌ ಖರೀದಿಸಬೇಕೇ.. ಹಾಗಾದರೆ, ಬುಕ್ಕಿಂಗ್ ಯಾವಾಗ.. ಬೆಲೆ ಎಷ್ಟು.. ವಿಶೇಷತೆ ಏನು ಎಂಬುದರ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.

ಬುಕ್ಕಿಂಗ್ ಯಾವಾಗ: ಮಹೀಂದ್ರಾ ಕಂಪನಿಯು ನೂತನ 'ಥಾರ್ ರಾಕ್ಸ್‌' ಆಫ್-ರೋಡ್ ಎಸ್‌ಯುವಿ ಬುಕ್ಕಿಂಗ್ ಪಡೆಯುವುದನ್ನು ಅಕ್ಟೋಬರ್ 3 ರಿಂದ ಆರಂಭಿಸಲಿದೆ. ಆದರೂ ಹಲವಾರು ಡೀಲರ್‌ಶಿಪ್‌ಗಳು ಅನಧಿಕೃತವಾಗಿ ಬುಕ್ಕಿಂಗ್‌ನ್ನು ತೆಗೆದುಕೊಳ್ಳುವುದನ್ನು ಶುರು ಮಾಡಿವೆ ಎಂದು ತಿಳಿದುಬಂದಿದೆ. ದಸರಾ ವೇಳೆಗೆ ವಿತರಣೆ ಶುರುವಾಗುವ ಸಾಧ್ಯತೆಯಿದೆ.

Waiting To New Mahindra Thar Roxx Suv Booking Very Important Information Must Know

ಟೆಸ್ಟ್ ಡ್ರೈವ್ ಆರಂಭ: ಹೊಸ ಮಹೀಂದ್ರಾ ಥಾರ್ ರಾಕ್ಸ್‌ ಎಸ್‌ಯುವಿ (Mahindra Thar Roxx Suv) ಟೆಸ್ಟ್ ಡ್ರೈವ್‌ಗಳು (ಪ್ರಾಯೋಗಿಕ ಸಂಚಾರ) ಸಹ ಶುರುವಾಗಿದೆ. ನೀವು ಟೆಸ್ಟ್ ಡ್ರೈವ್ ಮಾಡಲು ಹತ್ತಿರದ ಮಹೀಂದ್ರಾದ ಶೋರೂಂಗೆ ಭೇಟಿ ನೀಡಬಹುದು. ಈಗಾಗಲೇ, ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರು ಈ ಕಾರನ್ನು ತೆಗೆದುಕೊಳ್ಳಲು ಮನಸ್ಸು ಮಾಡಿರುವುದರಿಂದ ಟೆಸ್ಟ್ ಡ್ರೈವ್‌ಗಾಗಿ ಸ್ವಲ್ಪ ಸಮಯ ಕಾಯಬೇಕು ಎಂದು ವರದಿಯಾಗಿದೆ.

ಬೆಲೆ, ರೂಪಾಂತರಗಳು & ಬಣ್ಣಗಳು: ಈ ಮಹೀಂದ್ರಾ ಥಾರ್ ರಾಕ್ಸ್‌ ಕಾರು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ರೂ.12.99 ಲಕ್ಷದಿಂದ ರೂ.18.99 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. ಎಂಎಕ್ಸ್1, ಎಂಎಕ್ಸ್3, ಎಎಕ್ಸ್3ಎಲ್ ಮತ್ತು ಎಂಎಕ್ಸ್5 ಸೇರಿದಂತೆ ಹಲವು ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಈ ಕಾರು ಟ್ಯಾಂಗೋ ರೆಡ್, ಎವರೆಸ್ಟ್ ವೈಟ್, ಫಾರೆಸ್ಟ್ ಗ್ರೀನ್ ಹಾಗೂ ನೆಬುಲಾ ಬ್ಲ್ಯೂ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

Waiting To New Mahindra Thar Roxx Suv Booking Very Important Information Must Know

ವಿನ್ಯಾಸ & ಆಸನ ಆಯ್ಕೆ: ನೂತನ ಎಸ್‌ಯುವಿ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು (ಡಿಸೈನ್) ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಸಿ-ಆಕಾರಕ್ಕೆ ಹೋಲುವ ಎಲ್‌ಇಡಿ ಡಿಆರ್‌ಎಲ್‌ಗಳು ಹಾಗೂ ಸರ್ಕ್ಯೂಲರ್ ಫಾಗ್ ಲೈಟ್‌ಗಳನ್ನು ಒಳಗೊಂಡಿದೆ. ಇದರಲ್ಲಿ 5-ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು. ಪೆಟ್ರೋಲ್ ಹಾಗೂ ಡಿಸೇಲ್ ಎಂಜಿನ್‌ನ್ನು ಹೊಂದಿದೆ.

ವೈಶಿಷ್ಟ್ಯಗಳು: ಈ ಮಹೀಂದ್ರಾ ಥಾರ್ ರಾಕ್ಸ್‌ ಎಸ್‌ಯುವಿ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ, ಆಪಲ್ ಕಾರ್‌ಪ್ಲೇ, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ರೇರ್ ಎಸಿ ವೆಂಟ್‌ಗಳನ್ನು ಹೊಂದಿದೆ.

Waiting To New Mahindra Thar Roxx Suv Booking Very Important Information Must Know

ಸುರಕ್ಷತಾ ವೈಶಿಷ್ಟ್ಯಗಳು: ಈ ಮಹೀಂದ್ರಾ ಥಾರ್ ರಾಕ್ಸ್‌ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ಸಲುವಾಗಿ 6-ಏರ್‌ಬ್ಯಾಗ್‌, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 4 ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, September 23, 2024, 16:27 [IST]
English summary
Waiting to new mahindra thar roxx suv booking very important information must know
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+