ಮೊದಲ ಬಾರಿ ಕಾರು ಖರೀದಿ ಮಾಡುವ ಪ್ಲಾನ್ ಇದೆಯಾ?: ಹಾಗಾದರೆ ಈ ಕಾರಿಗಿಂತ ಬೇರೆ ಆಯ್ಕೆಯಿಲ್ಲ!
ಭಾರತದಲ್ಲಿ ಚಿಕ್ಕ ಹ್ಯಾಚ್‌ಬ್ಯಾಕ್ ಸೆಗ್ಮೆಂಟ್‌ನಲ್ಲಿ ಸ್ವಿಫ್ಟ್ ರೀತಿಯಲ್ಲೇ ಪ್ರಸಿದ್ದವಾಗಿರುವ ಕಾರು ಹ್ಯುಂಡೈ ಕಂಪನಿಯ ಐ10. ತನ್ನದೇ ಆದ ವಿಶಿಷ್ಟ ಶೈಲಿ ಮತ್ತು ಉತ್ತಮ ಫೀಚರ್‌ಗಳನ್ನು ಒಳಗೊಂಡಿರುವ ಈ ಕಾರು ಮಧ್ಯಮ ವರ್ಗದವರಿಗೆ, ಇಲ್ಲವೇ ಮೊದಲ ಕಾರು ಖರೀದಿ ಮಾಡಬೇಕು ಎಂದಿರುವವರಿಗೆ ಒಳ್ಳೆಯ ಆಯ್ಕೆ. ಅದರಲ್ಲೂ ಈ ಕಾರಿನ ಐ10 ನಿಯೋಸ್ ಅಂತೂ ಎಲ್ಲರ ಗಮನವನ್ನು ಬಹು ಬೇಗ ಸೆಳೆಯುತ್ತದೆ. ಇದಕ್ಕೆ ನಮ್ಮ ಮುಂದೆ ಹಲವಾರು ಉದಾಹರಣೆಗಳೂ ಇದೆ. ಇಂದು ನಾವು ಮೊದಲ ಬಾರಿಗೆ ಕಾರು ಖರೀದಿ ಮಾಡುವವರಿಗೆ ಈ ಕಾರು ಯಾಕೆ ಉತ್ತಮ ಆಯ್ಕೆ ಎಂದು ನೋಡೋಣ.
ಬೆಲೆ: ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ (Hyundai Grand i10 Nios) ಕಾರು, ರೂ.5.92 ಲಕ್ಷದಿಂದ ರೂ.8.56 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಎರಾ, ಮ್ಯಾಗ್ನಾ, ಸ್ಪೋರ್ಟ್ಜ್ ಎಕ್ಸಿಕ್ಯೂಟಿವ್, ಸ್ಪೋರ್ಟ್ಜ್ ಸೇರಿದಂತೆ ವಿವಿಧ ರೂಪಾಂತರ (Variant) ಹಾಗೂ ಆಕರ್ಷಕ ಬಣ್ಣಗಳೊಂದಿಗೆ ದೊರೆಯುತ್ತದೆ.

ಎಂಜಿನ್: ಈ ಗ್ರ್ಯಾಂಡ್ ಐ10 ನಿಯೋಸ್ 2 ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 83 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 114 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಚಾಲಿತ ಕಾರು ಕೂಡ ಇದೇ ಎಂಜಿನ್ ಪಡೆದಿದೆ. ಆದರೆ, 69 ಪಿಎಸ್ ಪವರ್, 95 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದೆ.
ಮೈಲೇಜ್: ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ (Hyundai Grand i10 Nios) ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ನೊಂದಿಗೆ ಲಭ್ಯವಿದೆ.16 ರಿಂದ 27 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದ್ದು, 5 ಮಂದಿ ಆರಾಮದಾಯಕವಾಗಿ ಕುಳಿದುಕೊಂಡು ಪ್ರಯಾಣಿಸಬಹುದು.

ಫೀಚರ್ಸ್: ಈ ಕಾರು 8-ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಎಸಿ, ಕ್ರೂಸ್ ಕಂಟ್ರೋಲ್, ಹೈಟ್ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್ ಸೇರಿದಂತೆ ಯುವ ಗ್ರಾಹಕರನ್ನು ಆಕರ್ಶಿಸುವ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಸುರಕ್ಷತೆ: ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಅಸಿಸ್ಟ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ISOFIX (ಐಎಸ್ಒಎಫ್ಐಎಕ್ಸ್) ಚೈಲ್ಡ್ ಸೀಟ್ ಮೌಂಟ್ ಅನ್ನು ಹೊಂದಿದೆ.

ಭಾರತದಲ್ಲಿ ಗ್ರ್ಯಾಂಡ್ ಐ10 ನಿಯೋಸ್ ಕಾರಿಗೆ ಮಾರುತಿ ಸುಜುಕಿ ಸ್ವಿಫ್ಟ್ ಮತ್ತು ರೆನಾಲ್ಟ್ ಟ್ರೈಬರ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ. ನಿಮ್ಮ ಗಮನಕ್ಕೆ.. ಈ ರಿಯಾಯಿತಿ ಪ್ರಯೋಜನಗಳು ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್, ಎಂಜಿನ್, ರೂಪಾಂತರ, ಬಣ್ಣಗಳನ್ನು ಆಧರಿಸಿ, ಬೇರೆಯಾಗಬಹುದು. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications