Maruti: 10.50 ಲಕ್ಷದಿಂದ ಶುರು, 29 Km ಮೈಲೇಜ್.. ಮಾರುತಿಗೆ ಅದೃಷ್ಟದ ಬಾಗಿಲು ತೆರೆದ ಹೊಸ ಕಾರು!

ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris), ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮುತ್ತಿದೆ. ಇದು ಕಣ್ಣು ಕುಕ್ಕುವಂತಹ ವಿನ್ಯಾಸ ಹೊಂದಿದ್ದು, ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಖರೀದಿ ಲಭ್ಯವಿದೆ. ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಇದೇ ಕಾರು ಕಂಪನಿಗೆ ವರವಾಗಿದ್ದು, ಅದೃಷ್ಟದ ಬಾಗಿಲನ್ನು ತೆರೆದಿದೆ.

ಸೆಪ್ಟೆಂಬರ್ 16 ರಂದು ಹೊಚ್ಚ ಹೊಸ 'ಮಾರುತಿ ಸುಜುಕಿ ವಿಕ್ಟೋರಿಸ್' ಬಿಡುಗಡೆಗೊಳಿಸಲಾಗಿತ್ತು. ಈ ಎಸ್‌ಯುವಿಗೆ ಗ್ರಾಹಕರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನವೆಂಬರ್ ತಿಂಗಳು ಒಟ್ಟು 12,300 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಅದೇ ರೀತಿಯಲ್ಲಿ ಅಕ್ಟೋಬರ್‌ನಲ್ಲಿ 13,496 ಮತ್ತು ಸೆಪ್ಟೆಂಬರ್‌ನಲ್ಲಿ 4,261 ಯುನಿಟ್‌ಗಳನ್ನು ಮಾರಲಾಗಿದೆ.

12 300 Units Maruti Suzuki Victoris Sold In November 2025 Details

'ಮಾರುತಿ ವಿಕ್ಟೋರಿಸ್' ಮಾರಾಟ ಪ್ರಮಾಣವು ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ, ಈ ಕಾರು 'ಹೈಬ್ರಿಡ್' ಎಸ್‌ಯುವಿಯಾಗಿದೆ. ಜೊತೆಗೆ ಗ್ಲೋಬಲ್ ಎನ್‌ಸಿಎಪಿ ಹಾಗೂ ಭಾರತ್ ಎನ್‌ಸಿಎಪಿ ಸಂಸ್ಥೆಗಳು 'ವಿಕ್ಟೋರಿಸ್'ನ್ನು ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಿದ್ದು, 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿವೆ. ಹೀಗಾಗಿ, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಿಸಲಾಗಿದೆ.

ಇದು ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಮೇಲ್ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ, ಝಡ್ಎಕ್ಸ್ಐ (ಒ), ಝಡ್ಎಕ್ಸ್ಐ ಪ್ಲಸ್ ಮತ್ತು ಝಡ್ಎಕ್ಸ್ಐ (ಒ) ಪ್ಲಸ್ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ.

ಯಾವುದೇ ರೀತಿಯಲ್ಲಿ ರಾಜಿ ಮಾಡಿಕೊಳ್ಳದೆ, ಈ ಕಾರನ್ನು ಕಂಪನಿಯು ತುಂಬಾ ಚೆನ್ನಾಗಿ ಸಿದ್ಧಪಡಿಸಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಶಾರ್ಕ್ ಫಿನ್ ಆಂಟೆನಾ, ಕನೆಕ್ಟ್ಡ್ ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಪ್ಲೆಂಡಿಡ್ ಸಿಲ್ವರ್, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ ಮತ್ತು ಮಿಸ್ಟಿಕ್ ಗ್ರೀನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 210 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,600 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಮಾರುತಿ ವಿಕ್ಟೋರಿಸ್' ಸಾಮಾನ್ಯ ಕಾರುಗಳಿಗೆ ಸವಾಲೆಸೆಯುವಂತೆ ಬಲಶಾಲಿಯಾದ 3 ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀಟರ್ ಪೆಟ್ರೋಲ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ಸ್ಟ್ಯಾಂಡರ್ಡ್ ಬೈಕ್‌ಗಳಂತೆ 21 ರಿಂದ 29 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.

ಇದರ ಕ್ಯಾಬಿನ್ ವಿನ್ಯಾಸವು ಅತ್ಯಾಧುನಿಕವಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ದೂರದ ಊರುಗಳಿಗೆ ತೆರಳುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಸನ್‌ರೂಫ್, 64-ಕಲರ್ ಆಂಬಿಯೆಂಟ್ ಲೈಟಿಂಗ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಕಾರು ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಇದಕ್ಕೆ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್, ಹ್ಯುಂಡೈ ಕ್ರೆಟಾ ಹಾಗೂ ಟಾಟಾ ಸಿಯೆರಾ ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Thursday, December 11, 2025, 17:06 [IST]
English summary
12300 units maruti suzuki victoris sold in november 2025 details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+