ರೂ.50,000ಕ್ಕಿಂತ ಕಮ್ಮಿ ಸಂಬಳ ಇದ್ಯಾ, ಮೊದಲ ಬಾರಿಗೆ ಹೊಸ ಕಾರು ತೆಗೆದುಕೊಳ್ಳಬೇಕೇ.. ಇವೇ 5 ಬೆಸ್ಟ್ ಚಾಯ್ಸ್!
ಹೊಸ ಕಾರು ಖರೀದಿಸಬೇಕೆಂಬುದು ಹಲವರ ಬಹುದಿನಗಳ ಕನಸಾಗಿರುತ್ತದೆ. ನಿಮ್ಮ ಸಂಬಳ 50,000 ರೂಪಾಯಿಗಿಂತ ಕಡಿಮೆ ಇದ್ದು, ಮೊದಲ ಬಾರಿಗೆ ನೂತನ ಕಾರೊಂದನ್ನು ಮನೆಗೆ ತರಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಮಾರುತಿ ಸುಜುಕಿ ಎಸ್-ಪ್ರೆಸ್ಸೊ, ಮಾರುತಿ ಸುಜುಕಿ ಸ್ವಿಫ್ಟ್, ರೆನಾಲ್ಟ್ ಟ್ರೈಬರ್, ಟಾಟಾ ಪಂಚ್ ಹಾಗೂ ಟೊಯೊಟಾ ಗ್ಲಾನ್ಜಾಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso):
ಇದು ಎಂಟ್ರಿ-ಲೆವೆಲ್ ಕಾರಾಗಿದೆ. ಮೊದಲ ಬಾರಿಗೆ ಕಾರು ಖರೀದಿಸುವವರಿಗೆ ಅತ್ಯುತ್ತಮವಾದ ಆಯ್ಕೆಯಾಗಲಿದೆ. ರೂ.3.50 ಲಕ್ಷದಿಂದ ರೂ.5.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸ್ಟ್ಯಾಂಡರ್ಡ್ ಮಾಡೆಲ್‌ನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, 5 ವರ್ಷದ ಅವಧಿಗೆ ತಿಂಗಳಿಗೆ ರೂ.4,500 ವರೆಗೆ ಇಎಂಐ ಕಟ್ಟಬೇಕು. ಈ ಕಾರು ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಸ್ಟಾರಿ ಬ್ಲೂ, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಎಸ್-ಪ್ರೆಸ್ಸೊ' 1-ಲೀಟರ್ ಪೆಟ್ರೋಲ್ ಮತ್ತು 1-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24 ರಿಂದ 32.73 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಕನೆಕ್ಟಿವಿಟಿ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift):
ಈ ಕಾರು ಕಮ್ಮಿ ಸಂಬಳ ಬರುವವರಿಗೆ ಉತ್ತಮವಾದ ಆಯ್ಕೆಯಾಗಲಿದೆ. ರೂ.5.79 ಲಕ್ಷದಿಂದ ರೂ.8.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಟ್ಯಾಂಡರ್ಡ್ ಮಾಡೆಲ್‌ನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, 5 ವರ್ಷಗಳಿಗೆ ಮಾಸಿಕ ರೂ.10,000 ವರೆಗೆ ಇಎಂಐ ಪಾವತಿಸಬೇಕು. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ ಮತ್ತು ನಾವೆಲ್ ಆರೆಂಜ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಹೊಸ 'ಸ್ವಿಫ್ಟ್' 1.2-ಲೀಟರ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24 ರಿಂದ 32.85 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಯುಎಸ್‌ಬಿ ಟೈಪ್-ಸಿ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ರೆನಾಲ್ಟ್ ಟ್ರೈಬರ್ (Renault Triber):
ಇದು ಕುಟುಂಬದ ಕಾರಾಗಿದೆ. ಪ್ರಪ್ರಥಮ ಬಾರಿಗೆ ನೂತನ ಕಾರು ತೆಗೆದುಕೊಳ್ಳುವವರಿಗೆ ಹೆಚ್ಚು ಸೂಕ್ತವಾಗಲಿದೆ. ರೂ.5.76 ಲಕ್ಷದಿಂದ ರೂ.8.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸ್ಟ್ಯಾಂಡರ್ಡ್ ಮಾಡೆಲ್‌ನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಖರೀದಿಸಿದರೆ, 5 ವರ್ಷಕ್ಕೆ ತಿಂಗಳಿಗೆ ರೂ.10,000 ವರೆಗೆ ಇಎಂಐ ಕಟ್ಟಬೇಕು. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 18 ರಿಂದ 19 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 7 ಆಸನಗಳನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಟಾಟಾ ಪಂಚ್ (Tata Punch):
ಈ ಮೈಕ್ರೋ ಎಸ್‌ಯುವಿ ರೂ.50,000ಕ್ಕಿಂತ ಕಡಿಮೆ ಸಂಬಳ ಬರುವವರಿಗೆ ಅತ್ಯುತ್ತಮ ಆಯ್ಕೆಯಾಗಲಿದೆ. ರೂ.5.50 ಲಕ್ಷದಿಂದ ರೂ.9.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಟ್ಯಾಂಡರ್ಡ್ ಮಾಡೆಲ್‌ನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, 5 ವರ್ಷಗಳಿಗೆ ಮಾಸಿಕ ರೂ.9,700 ವರೆಗೆ ಇಎಂಐ ಪಾವತಿ ಮಾಡಬೇಕು. 1.2-ಲೀಟರ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 18 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಹೊಂದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಟೊಯೊಟಾ ಗ್ಲಾನ್ಜಾ (Toyota Glanza):
ಇದೊಂದು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. ರೂ.6.39 ಲಕ್ಷದಿಂದ ರೂ.9.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸ್ಟ್ಯಾಂಡರ್ಡ್ ಮಾಡೆಲ್‌ನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, 5 ವರ್ಷಕ್ಕೆ ತಿಂಗಳಿಗೆ ರೂ.12,000 ವರೆಗೆ ಇಎಂಐ ಕಟ್ಟಬೇಕು. 1.2-ಲೀಟರ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 22 ರಿಂದ 30 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.


Click it and Unblock the Notifications








