Hyundai: ಜನಪ್ರಿಯ ಹ್ಯುಂಡೈ ಕ್ರೆಟಾದ ಹೊಸ ವೇರಿಯೆಂಟ್‌ಗಳು ಬಿಡುಗಡೆ.. ಬೆಲೆ ಎಷ್ಟು, ಹೇಗಿದೆ?

ಭಾರತದಲ್ಲಿ ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India), ಕ್ರೆಟಾ ಎಸ್‌ಯುವಿಯನ್ನು ಯಶಸ್ವಿಯನ್ನು ಮಾರಾಟ ಮಾಡುತ್ತಿದೆ. ಈ ಕಾರು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಸಹ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ನೂತನ ಹ್ಯುಂಡೈ ಕ್ರೆಟಾಗಿರುವ ಬೇಡಿಕೆಯನ್ನು ಮನಗಂಡಿರುವ ಕಂಪನಿಯು ಎರಡು ಹೊಚ್ಚ ಹೊಸ ರೂಪಾಂತರಗಳನ್ನು (ವೇರಿಯೆಂಟ್) ಪರಿಚಯಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಹ್ಯುಂಡೈ ಕ್ರೆಟಾ (Hyundai Creta) ಎಸ್‌ಯುವಿಯ ಹೊಸ 'ಇಎಕ್ಸ್ (ಒ)' ರೂಪಾಂತರ (ವೇರಿಯೆಂಟ್), ರೂ.12.97 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಇದು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಪನೋರಮಿಕ್ ಸನ್‌ರೂಫ್ ಹಾಗೂ ಎಲ್ಇಡಿ ರೀಡಿಂಗ್ ಲ್ಯಾಂಪ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

2025 Hyundai Creta Launched Gets New Variants Rs 12 97 Lakh Price Details

ಈ ಹ್ಯುಂಡೈ ಕ್ರೆಟಾ ಕಾರಿನ ಮತ್ತೊಂದು ನೂತನ 'ಎಸ್ಎಕ್ಸ್' ಪ್ರೀಮಿಯಂ ರೂಪಾಂತರ (ವೇರಿಯೆಂಟ್), ರೂ.16.18 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಇದು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, 8-ವೇ ಪವರ್ ಅಡ್ಜಸ್ಟಬಲ್ ಡ್ರೈವರ್ ಸೀಟ್, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ & ಸ್ಕೂಪ್ಡ್ ಸೀಟ್‌ಗಳನ್ನು ಒಳಗೊಂಡಿದೆ.

ಇದು ಮಾತ್ರವಲ್ಲದೆ, ಹ್ಯುಂಡೈ ಕ್ರೆಟಾ ಎಸ್‌ಯುವಿಯ ಎಸ್ಎಕ್ಸ್ (ಒ) ಹಾಗೂ ಎಸ್ (ಒ) ರೂಪಾಂತರಗಳ ವೈಶಿಷ್ಟ್ಯಗಳನ್ನು (ಫೀಚರ್ಸ್) ಮೇಲ್ದರ್ಜೆರಿಸಲಾಗಿದೆ. ಎಸ್ಎಕ್ಸ್ (ಒ) ರೂಪಾಂತರ (ವೇರಿಯೆಂಟ್), ಹೊಸದಾಗಿ ರೈನ್ ಸೆನ್ಸರ್ಸ್, ರೇರ್ ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್ ಮತ್ತು ಸ್ಕೂಪ್ಡ್ ಸೀಟ್‌ಗಳನ್ನು ಹೊಂದಿದೆ.

2025 Hyundai Creta Launched Gets New Variants Rs 12 97 Lakh Price Details

ನೂತನ ಹ್ಯುಂಡೈ ಕ್ರೆಟಾ ಕಾರಿನ ಪವರ್‌ಟ್ರೇನ್‌ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದು 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. ಈ ಕಾರು ಹಲವು ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದ್ದು, 17.4 ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಕಾರು ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ ಹಾಗೂ ರೇಂಜರ್ ಖಾಕಿ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ. ಇದರಲ್ಲಿ 5 ಆಸನಗಳಿವೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.

ಹೊಸ ಹ್ಯುಂಡೈ ಕ್ರೆಟಾ ಎಸ್‌ಯುವಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಇನ್ನು, ಹ್ಯುಂಡೈ ಕ್ರೆಟಾ ಕಾರಿಗೆ ಹೊಸ ರೂಪಾಂತರಗಳು (ವೇರಿಯೆಂಟ್) ಬಿಡುಗಡೆಯಾಗಿರುವುದರಿಂದ ಗ್ರಾಹಕರಿಗೆ ಹೆಚ್ಚಿನ ಖುಷಿ ತಂದಿದೆ. ನೂತನ ರೂಪಾಂತರಗಳು ಸಾಕಷ್ಟು ಆಕರ್ಷಕವಾಗಿವೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದ್ದು, ಭಾರೀ ಸಂಖ್ಯೆಯಲ್ಲಿ ಖರೀದಿದಾರರು ಕೊಂಡುಕೊಳ್ಳಬಹುದು ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, March 4, 2025, 10:35 [IST]
English summary
2025 hyundai creta launched gets new variants rs 12 97 lakh price details
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+