Kia: ಬಾ ಗುರು ನೋಡು.. ಕಿಯಾ ಇವಿ6 ಫೇಸ್‌ಲಿಫ್ಟ್ ಕಾರಿನ ಕನ್ನಡ ವಿಡಿಯೋ ರಿವ್ಯೂ, ಯಾರು ಹೇಳಲ್ಲ!

ಕಿಯಾ ಮೋಟಾರ್ಸ್ (Kia Motors), ಈ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ನೂತನ 'ಇವಿ6 ಫೇಸ್‌ಲಿಫ್ಟ್' ಕಾರನ್ನು ಹೊರತಂದಿತ್ತು. ಈ ಎಲೆಕ್ಟ್ರಿಕ್ ಎಸ್‌ಯುವಿ ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ಇತ್ತೀಚೆಗೆ, ನಮ್ಮ ತಂಡಕ್ಕೆ ಹೊಚ್ಚ ಹೊಸ ಕಿಯಾ ಇವಿ6 ಫೇಸ್‌ಲಿಫ್ಟ್ ಕಾರಿನ ಟೆಸ್ಟ್ ಡ್ರೈವ್ ನಡೆಸಲು ಆಂಧ್ರ ಪ್ರದೇಶದಲ್ಲಿರುವ ಕಂಪನಿಯ ತಯಾರಿಕಾ ಘಟಕಕ್ಕೆ ಆಹ್ವಾನಿಸಲಾಗಿತ್ತು. ಬನ್ನಿ.. ಈ ಕಾರು ಹೇಗಿದೆ ಎಂಬುದರ ಕುರಿತ ವಿಡಿಯೋ ರಿವ್ಯೂ ನಿಮಗಾಗಿ..

ಈ ಕಿಯಾ ಇವಿ6 ಫೇಸ್‌ಲಿಫ್ಟ್ (Kia EV6 Facelift) ರೂ.65.8 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೊರಭಾಗದಲ್ಲಿ ನವೀಕರಿಸಿದ ಬಂಪರ್‌ಗಳು ಮತ್ತು ಆಕರ್ಷಕವಾದ ಹೆಡ್‌ಲೈಟ್‌ಗಳು ಒಳಗೊಂಡಿದ್ದು, 19-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಒಳಭಾಗವು ಹೆಚ್ಚು ಅತ್ಯಾಧುನಿಕವಾಗಿದ್ದು, 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದು.

ಹೊಸ ಕಿಯಾ ಇವಿ6 ಫೇಸ್‌ಲಿಫ್ಟ್ ಎಲೆಕ್ಟ್ರಿಕ್ ಎಸ್‌ಯುವಿ 84 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 663 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ಇದರಲ್ಲಿರುವ ಡುಯಲ್- ಮೋಟಾರ್ ಸೆಟಪ್, 320 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 605 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ನೂತನ ಕಿಯಾ ಇವಿ6 ಫೇಸ್‌ಲಿಫ್ಟ್ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 12.3-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 14-ಸ್ಪೀಕರ್ ಮೆರಿಡಿಯನ್ ಆಡಿಯೊ ಸಿಸ್ಟಮ್‌, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಎಲೆಕ್ಟ್ರಿಕ್ ಸನ್‌ರೂಫ್‌ನ್ನು ಒಳಗೊಂಡಿದೆ.

2025 Kia EV6 Facelift Review Video In Kannada

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. 8 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ ಟ್ರಾಕ್ಷನ್ ಕಂಟ್ರೋಲ್ ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, April 15, 2025, 16:00 [IST]
English summary
2025 kia ev6 facelift review video
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+