ಜಿಂದಲ್ - ಎಂಜಿ ರಣತಂತ್ರ: ನವೀಕರಣಗೊಂಡ 2025ರ ಹೊಸ ಆಸ್ಟರ್ ಎಸ್‌ಯುವಿ ಬಿಡುಗಡೆ.. ರೂ.9.99 ಲಕ್ಷ!

ಭಾರತದಲ್ಲಿ ಜಿಂದಾಲ್ ಹಾಗೂ ಎಂಜಿ ಮೋಟಾರ್ ಕಂಪನಿಗಳು ವ್ಯಾಪಾರ ಪಾಲುದಾರಿಕೆಯನ್ನು ಹೊಂದಿವೆ. ಅದರ ಭಾಗವಾಗಿ ಹಲವು ಹೊಚ್ಚ ಹೊಸ ಕಾರುಗಳನ್ನು ಮಾರಾಟಕ್ಕೆ ತರಲಾಗುತ್ತಿದೆ. ಸದ್ಯ, ನವೀಕರಣಗೊಂಡ 2025 ಆಸ್ಟರ್ (Astor) ಎಸ್‌ಯುವಿ ಬಿಡುಗಡೆಯಾಗಿದೆ. ಇದು ಗ್ರಾಹಕರ ನಿರೀಕ್ಷೆಗೂ ಮೀರಿದ ವೈಶಿಷ್ಟ್ಯಗಳನ್ನು ಹೊಂದಿದ್ದು, ಸ್ಪ್ರಿಂಟ್, ಶೈನ್, ಸೆಲೆಕ್ಟ್, ಶಾರ್ಪ್ ಪ್ರೊ ಹಾಗೂ ಸ್ಯಾವಿ ಪ್ರೊ ಎಂಬ ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಕೂಡ ಖರೀದಿಗೆ ದೊರೆಯುತ್ತದೆ.

ಎಂಜಿ ಆಸ್ಟರ್ (MG Astor) ಎಸ್‌ಯುವಿಯಲ್ಲಿ ಹೊಸತೇನಿದೆ: ಈ ಕಾರಿನ ಮಿಡ್ ಲೆವೆಲ್ ವೇರಿಯೆಂಟ್ 'ಶೈನ್' ಪನೋರಮಿಕ್ ಸನ್‌ರೂಫ್ ಹಾಗೂ 6-ಸ್ಪೀಕರ್ ಸೌಂಡ್ ಸಿಸ್ಟಮ್‌ನಂತಹ ಹೆಚ್ಚುವರಿ ವೈಶಿಷ್ಟ್ಯಗಳನ್ನು ಹೊಂದಿದೆ. ಸೆಲೆಕ್ಟ್ ವೇರಿಯೆಂಟ್ 6-ಏರ್‌ಬ್ಯಾಗ್‌ಗಳು ಹಾಗೂ ಐವರಿ ಕಲರ್ಡ್ ಲೆದರ್ ಸೀಟ್‌ಗಳನ್ನು ಒಳಗೊಂಡಿದೆ. ಇದು ಬಿಟ್ಟರೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳಲ್ಲಿ ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ.

2025 MG Astor Suv Launched In India Rs 9 99 Lakh Starting Price Details

ಬೆಲೆ & ಆಸನ ಆಯ್ಕೆ: ನೂತನ ಎಂಜಿ ಆಸ್ಟರ್ ಎಸ್‌ಯುವಿ, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ಕನಿಷ್ಠ ರೂ.9.99 ಲಕ್ಷ ಹಾಗೂ ಗರಿಷ್ಠ ರೂ.17.55 ಎಕ್ಸ್ ಶೋರೂಂ ದರವನ್ನು ಪಡೆದಿದೆ. ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು.

ಕಾರ್ಯಕ್ಷಮತೆ: ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 108 ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 144 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಮತ್ತೊಂದು 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 138 ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 220 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. ಈ ಕಾರು 14 ರಿಂದ 15 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಬಣ್ಣಗಳು & ವೈಶಿಷ್ಟ್ಯಗಳು: ಹೊಸ ಎಂಜಿ ಆಸ್ಟರ್ ಎಸ್‌ಯುವಿ ಹವಾನಾ ಗ್ರೇ, ಅರೋರಾ ಸಿಲ್ವರ್, ಗ್ಲೇಜ್ ರೆಡ್, ಕ್ಯಾಂಡಿ ವೈಟ್ ಮತ್ತು ಸ್ಟಾರಿ ಬ್ಲ್ಯಾಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಕ್ರೂಸ್ ಕಂಟ್ರೋಲ್ ಮತ್ತು ಆಟೋಮೆಟಿಕ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು: ನೂತನ ಎಂಜಿ ಆಸ್ಟರ್ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಇನ್ನು, ಈ ಕಾರಿಗೆ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಹೋಂಡಾ ಎಲಿವೇಟ್, ಸ್ಕೋಡಾ ಕುಶಾಕ್ ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ. ಹೊಸ ಎಂಜಿ ಆಸ್ಟರ್ ಕಾರು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿ ಮಾಡುವ ಸಾಧ್ಯತೆಯಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, February 7, 2025, 12:09 [IST]
English summary
2025 mg astor suv launched in india rs 9 99 lakh starting price details
Read more on mg motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+