Maruti: 7-ಸೀಟರ್.. 9 ಲಕ್ಷ, ಸದ್ದಿಲ್ಲದೇ ನವೀಕರಣಗೊಂಡ ಬಹುಬೇಡಿಕೆಯ ಮಾರುತಿ ಎರ್ಟಿಗಾ ಎಂಪಿವಿ.. ಏನಿದೆ ಹೊಸತು?
ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ವಿಶ್ವಾಸಾರ್ಹ ಎಂಪಿವಿಯಾಗಿ ಹೊರಹೊಮ್ಮಿದೆ. ಇದೊಂದು ಫ್ಯಾಮಿಲಿ ಕಾರಾಗಿದ್ದು, ನೋಡಲು ಕೂಡ ತುಂಬಾ ಚೆನ್ನಾಗಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ತಕ್ಕಂತೆ ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಸದ್ಯ, ಇದೇ 'ಎರ್ಟಿಗಾ'ವನ್ನು ಯಾವುದೇ ಔಪಚಾರಿಕ ಘೋಷಣೆಗಳನ್ನು ಮಾಡದೇ ನವೀಕರಣಕ್ಕೆ ಒಳಪಡಿಸಲಾಗಿದ್ದು, ಕೆಲವು ವೈಶಿಷ್ಟ್ಯಗಳನ್ನು ಪರಿಷ್ಕರಿಸಲಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಹೊಸತೇನಿದೆ (What Is New):
ಈ 'ಮಾರುತಿ ಸುಜುಕಿ ಎರ್ಟಿಗಾ' ಎಂಪಿವಿಯು ಹಲವು ಹೊಸತನಗಳಿಗೆ ಸಾಕ್ಷಿಯಾಗಿದೆ. ಮರುವಿನ್ಯಾಸಗೊಳಿಸಲಾದ ರೇರ್ ರೂಫ್ ಸ್ಪಾಯ್ಲರ್ ಹಾಗೂ ಸೆಂಟರ್ ಕನ್ಸೋಲ್‌ನ ಹಿಂದೆ ನವೀನವಾದ ಎಸಿ ವೆಂಟ್‌ಗಳನ್ನು ಪಡೆದಿದೆ. ಜೊತೆಗೆ ಎರಡು & ಮೂರನೇ ಸಾಲಿನಲ್ಲಿ ಕುಳಿತುಕೊಳ್ಳುವ ಪ್ರಯಾಣಿಕರ ಅನುಕೂಲಕ್ಕಾಗಿ 2 ಟೈಪ್-ಸಿ ಯುಎಸ್‌ಬಿ ಪೋರ್ಟ್‌ಗಳನ್ನು ಒಳಗೊಂಡಿದೆ.

ಬೆಲೆ & ರೂಪಾಂತರಗಳು (Price & Variants):
ಈ ಎಂಪಿವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ. 9.11 ಲಕ್ಷ ಹಾಗೂ ಗರಿಷ್ಠ ರೂ.13.40 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ (ಒ) ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ವಿನ್ಯಾಸ & ಬಣ್ಣಗಳು (Design & Colors):
ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 15-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸ್ಪ್ಲೆಂಡಿಡ್ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಬರ್ನ್ ರೆಡ್, ಪರ್ಲ್ ಮೆಟಾಲಿಕ್ ಆಕ್ಸ್‌ಫರ್ಡ್ ಬ್ಲೂ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಸುತ್ತಳತೆ (Dimensions):
ನೂತನ ಎರ್ಟಿಗಾ ಎಂಪಿವಿ ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,395 ಎಂಎಂ ಉದ್ದ, 1,735 ಅಗಲ ಹಾಗೂ 1,690 ಎಂಎಂ ಎತ್ತರವುವಿದೆ. 185 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,740 ವೀಲ್‌ಬೇಸ್‌ನ್ನು ಒಳಗೊಂಡಿದೆ. ಜೊತೆಗೆ 1205 ಕೆಜಿ ತೂಕವು ಇದೆ.
ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಈ ಕಾರು 7 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 209 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance):
ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀ. ಪೆಟ್ರೋಲ್/ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 26 ಕಿ.ಮೀ ವರೆಗೂ ಮೈಲೇಜ್ ನೀಡುತ್ತದೆ. 45 ಲೀಟರ್ ಸಾಮರ್ಥ್ಯವಿರುವ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 9 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ವೈಶಿಷ್ಟ್ಯಗಳು (Features):
ಹೊಸ ಎರ್ಟಿಗಾ ಎಂಪಿವಿಯ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪ್ಯಾಡಲ್ ಶಿಫ್ಟರ್ಸ್, ಕೀಲೆಸ್ - ಎಂಟ್ರಿ, ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರೇರ್ ಪಾರ್ಕಿಂಗ್ ಸೇನಾರ್ಸ್ & ಹಿಲ್ - ಹೋಲ್ಡ್ ಅಸಿಸ್ಟ್‌ನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








