20 ಕಿ.ಮೀ ಮೈಲೇಜ್.. 7-ಸೀಟರ್, ಜುಲೈ 23ರಂದು ಹೊಸ ರೂಪದಲ್ಲಿ ಈ ಜನಪ್ರಿಯ ಎಂಪಿವಿ ಬಿಡುಗಡೆ.. 6 ಲಕ್ಷ?

ರೆನಾಲ್ಟ್ ಟ್ರೈಬರ್ (Renault Triber) ಪ್ರಮುಖ ಎಂಪಿವಿಯಾಗಿದೆ. ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದ್ದು, ದೊಡ್ಡ ಕುಟುಂಬಗಳಿಗೆ ಹೆಚ್ಚು ಸೂಕ್ತವಾಗಿದೆ. ಪ್ರತಿ ತಿಂಗಳು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರು ಕೂಡ ಮೆಚ್ಚಿಕೊಂಡಿದ್ದಾರೆ. 2019ರಲ್ಲಿ ಈ ಕಾರನ್ನು ಮಾರಾಟಕ್ಕೆ ತರಲಾಗಿತ್ತು. ಸದ್ಯ, ಇದೇ 'ಟ್ರೈಬರ್'ನ್ನು ನವೀಕರಣಕ್ಕೂ ಒಳಪಡಿಸಲಾಗಿದ್ದು, 2025ರ ಹೊಚ್ಚ ಹೊಸ ಫೇಸ್‌ಲಿಫ್ಟ್ ಮಾಡೆಲ್ ಬಿಡುಗಡೆಗೆ ಅಧಿಕೃತವಾಗಿ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

2025ರ ಹೊಸ ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್ (Renault Triber Facelift) ಎಂಪಿವಿ, ಜುಲೈ 23ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಪ್ರಸ್ತುತ ಖರೀದಿಗೆ ದೊರೆಯುವ ಟ್ರೈಬರ್ ರೂ.6.15 ಲಕ್ಷದಿಂದ ರೂ.8.98 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ನೂತನ ಮಾಡೆಲ್ ಕೂಡ ಹೆಚ್ಚು-ಕಮ್ಮಿ ಇದೇ ದರದಲ್ಲಿ ಮಾರಾಟಕ್ಕೆ ಬರಬಹುದು ಎನ್ನಲಾಗಿದೆ.

2025 New Renault Triber Facelift Launched On July 23 Expected Price And Features Details

ಈ ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್ ಎಂಪಿವಿ, ಹೊರಭಾಗದ ವಿನ್ಯಾಸದಲ್ಲಿ ಹಲವು ಬದಲಾವಣೆಗಳನ್ನು ಪಡೆದುಕೊಂಡಿರುವುದು ಬಹುತೇಕ ಖಚಿತವಾಗಿದೆ. ಇದು ಮರುವಿನ್ಯಾಸಗೊಳಿಸಲಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಗ್ರಿಲ್ ಹಾಗೂ ಬಂಪರ್‌ಗಳನ್ನು ಪಡೆದಿರಲಿದೆ. ನವೀನವಾಗಿರುವ ಅಲಾಯ್ ವೀಲ್‌ಗಳು, ಟೈಲ್ ಲ್ಯಾಂಪ್‌ಗಳು, ರೂಫ್ - ಮೌಂಟೆಡ್ ಸ್ಪಾಯ್ಲರ್ ಹಾಗೂ ರೇರ್ ವೈಪರ್‌ & ವಾಷರ್‌ನ್ನು ಒಳಗೊಂಡಿರುವ ನಿರೀಕ್ಷೆಯಿದೆ.

ನೂತನ ಟ್ರೈಬರ್ ಕಾರಿನ ಪವರ್‌ಟ್ರೇನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎನ್ನಲಾಗಿದೆ. ಇದು, ಈಗಿರುವ ಟ್ರೈಬರ್‌ನಂತೆ 1-ಲೀ. ಸಾಮರ್ಥ್ಯದ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿರಲಿದ್ದು, 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದೆ. ಜೊತೆಗೆ 18 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ ಎಂದು ಅಂದಾಜಿಸಲಾಗಿದೆ.

2025 New Renault Triber Facelift Launched On July 23 Expected Price And Features Details

ಇದರಲ್ಲಿಯೂ 7 ಆಸನ ಆಯ್ಕೆ ವ್ಯವಸ್ಥೆಯಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಯಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 84 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ.

ಹೊಸ ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್ ಎಂಪಿವಿಯ ಕ್ಯಾಬಿನ್ ವಿನ್ಯಾಸವು ಹೊಸತನದಿಂದ ಕೂಡಿರುವ ಸಾಧ್ಯತೆಯಿದೆ. ದೊಡ್ಡ ಗಾತ್ರದ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ - ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ಕನೆಕ್ಟ್ಡ್ ಕಾರ್ ಟೆಕ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ರೇರ್ ಎಸಿ ವೆಂಟ್‌ಗಳು, ಪುಶ್ ಬಟನ್ ಸ್ಟಾರ್ಟ್‌, ಕೀಲೆಸ್ ಎಂಟ್ರಿ ಹಾಗೂ ಸ್ಟೀರಿಂಗ್ - ಮೌಂಟೆಡ್ ಆಡಿಯೊದಂತಹ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ.

2025 New Renault Triber Facelift Launched On July 23 Expected Price And Features Details

ಈ ಕಾರು ಪ್ರಯಾಣಿಕರಿಗೂ ಗರಿಷ್ಠ ರಕ್ಷಣೆ ಒದಗಿಸಲಿದೆ. ಸುರಕ್ಷತೆಯ ದೃಷ್ಟಿಯಿಂದ 6 - ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ - ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ - ಸ್ಟಾರ್ಟ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೆನ್ಸರ್ಸ್ ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.

ಒಟ್ಟಾರೆಯಾಗಿ 2025ರ ನೂತನ ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್ ಎಂಪಿವಿ ಬಿಡುಗಡೆಯಾಗುತ್ತಿದೆ ಎಂಬ ವಿಚಾರವು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಅತ್ಯಾಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದ್ದು, ಬಜೆಟ್ ಬೆಲೆಯಲ್ಲಿಯೂ ಮಾರಾಟಕ್ಕೆ ಬರುವ ಎಲ್ಲ ಸಾಧ್ಯತೆಗಳಿವೆ. ಆ ಬಳಿಕ ನೂತನ ಕಾರಿಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

Article Published On: Wednesday, July 9, 2025, 17:34 [IST]
English summary
2025 new renault triber facelift launched on july 23 expected price and features details
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+