ಈ ಜನಪ್ರಿಯ ರೆನಾಲ್ಟ್ ಕಾರಿಗೆ ಹೊಸ ರೂಪ.. ಭಾನುವಾರವೇ ಬಿಡುಗಡೆ, 5 ಸೀಟರ್.. 6.50 ಲಕ್ಷ?
ರೆನಾಲ್ಟ್ ಕಿಗರ್ (Renault Kiger) ವಿಶ್ವಾಸಾರ್ಹ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ಈ ಕಾರು ಮಾರಾಟಕ್ಕೆ ಬಂದು ನಾಲ್ಕು ವರ್ಷಗಳಿವೆ. ಸದ್ಯ ನವೀಕರಣಕ್ಕೆ ಒಳಪಟ್ಟ ಫೇಸ್‌ಲಿಫ್ಟ್ ಮಾಡೆಲ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲು ಕಂಪನಿಯು ಅಂತಿಮ ಹಂತದ ತಯಾರಿ ಮಾಡಿಕೊಳ್ಳುತ್ತಿದೆ. ಇದೇ ಭಾನುವಾರದಂದು (ಆಗಸ್ಟ್ 24) ಹೊಸ ರೂಪದ 'ಕಿಗರ್' ಎಸ್‌ಯುವಿಯನ್ನು ಪರಿಚಯಿಸಲಾಗುತ್ತದೆ. ಬನ್ನಿ, ನೂತನ ಕಾರಿನ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.
ಬೆಲೆ (Price):
ಹೊಚ್ಚ ಹೊಸ ರೆನಾಲ್ಟ್ ಕಿಗರ್ ಫೇಸ್‌ಲಿಫ್ಟ್ ಎಸ್‌ಯುವಿಯು ಅಗ್ಗದ ದರದಲ್ಲಿ ಲಭ್ಯವಾಗಲಿದ್ದು, ಮಧ್ಯಮ ಹಾಗೂ ಶ್ರೀಮಂತರ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಲು ಸಾಧ್ಯವಾಗಲಿದೆ. ಈ ಕಾರು ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ, ರೂ.6.50 ಲಕ್ಷದಿಂದ ರೂ.11 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರುವ ನಿರೀಕ್ಷೆಯಿದೆ.

ವಿನ್ಯಾಸ (Design):
ಇದು ನವೀನ ರೀತಿಯ ವಿನ್ಯಾಸಕ್ಕೆ ಸಾಕ್ಷಿಯಾರಲಿದೆ. ಹೋದ ವಾರ ಕಂಪನಿ ಹೊರತಂದಿದ್ದ ಟೀಸರ್‌ನಲ್ಲಿ ಹಿಂಭಾಗದ (ರೇರ್) ಟೈಲ್‌ಲ್ಯಾಂಪ್‌ನ್ನು ತೋರಿಸಲಾಗಿತ್ತು. ಬುಧವಾರ ಬಿಡುಗಡೆ ಮಾಡಿದ್ದ ಟೀಸರ್‌ನಲ್ಲಿ ಮುಂಭಾಗದ (ಫ್ರಂಟ್) ಗ್ರಿಲ್‌ನಲ್ಲಿ ಬ್ರ್ಯಾಂಡ್‌ನ ಹೊಸ ಲೋಗೋವನ್ನು ಅನಾವರಣ ಮಾಡಲಾಗಿದೆ. ಜೊತೆಗೆ ನವೀಕೃತ ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಒಳಗೊಂಡಿರಬಹುದು ಎನ್ನಲಾಗಿದೆ.
ಸುತ್ತಳತೆ (Dimensions):
ನೂತನ ರೆನಾಲ್ಟ್ ಕಿಗರ್ ಫೇಸ್‌ಲಿಫ್ಟ್ ಎಸ್‌ಯುವಿಯ ಗಾತ್ರದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ. ಅದು ಸ್ಟ್ಯಾಂಡರ್ಡ್ ಕಿಗರ್‌ನಂತೆ ಇರಲಿದೆ. 3,991 ಎಂಎಂ ಉದ್ದ, 1,750 ಅಗಲ ಹಾಗೂ 1,605 ಎಂಎಂ ಎತ್ತರವನ್ನು ಹೊಂದಿರಲಿದೆ. 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,500 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿರಲಿದೆ.
ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಈ ಕಾರಿನಲ್ಲಿ 5 ಆಸನಗಳಿರಲಿದ್ದು, ಪ್ರಯಾಣಿಕರು ದೂರದ ಊರುಗಳಿಗೆ ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 405 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿರಲಿದೆ.
ಕಾರ್ಯಕ್ಷಮತೆ (Performance):
ಹೊಸ ರೆನಾಲ್ಟ್ ಕಿಗರ್ ಫೇಸ್‌ಲಿಫ್ಟ್ ಎಸ್‌ಯುವಿ, ಈಗಿರುವ ಕಿಗರ್ ಮಾಡೆಲ್‌ನಂತೆ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿರಲಿದೆ. ಅದರಲ್ಲೂ ಯಾವುದೇ ಮಾರ್ಪಾಡುಗಳು ಇರುವುದಿಲ್ಲ ಎನ್ನಲಾಗಿದೆ. ಇದರ 1.0 ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 72 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ನೀರಿಕ್ಷೆಯಿದೆ.
ಮತ್ತೊಂದು 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 100 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 160 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ನಿರೀಕ್ಷೆಯಿದೆ. ಈ ಕಾರು 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿರಬಹುದು. 20 ಕಿ.ಮೀವರೆಗೆ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ.
ಬಣ್ಣ & ವೈಶಿಷ್ಟ್ಯಗಳು (Color & Features):
ಇದು ಮಿಸ್ಟರಿ ಬ್ಲ್ಯಾಕ್, ಐಸ್ ಕೂಲ್ ವೈಟ್, ಸ್ಟೆಲ್ತ್ ಬ್ಲ್ಯಾಕ್, ಮೂನ್‌ಲೈಟ್ ಸಿಲ್ವರ್, ಮಿಸ್ಟರಿ ಬ್ಲ್ಯಾಕ್ ಮತ್ತು ರೇಡಿಯಂಟ್ ರೆಡ್ ಬಣ್ಣಗಳನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ. 8-ಇಂಚಿನ ಫ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ರೆನಾಲ್ಟ್ ಕಿಗರ್ ಫೇಸ್‌ಲಿಫ್ಟ್ ಎಸ್‌ಯುವಿಯು ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸಲಿದೆ ಎನ್ನಲಾಗಿದೆ. ಅದಕ್ಕಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿರುವ ನಿರೀಕ್ಷೆಯಿದೆ.


Click it and Unblock the Notifications