ನಿನ್ನೆ ಬಿಡುಗಡೆ.. 5-ಸೀಟರ್, 6.29 ಲಕ್ಷದ ಹೊಸ Renault Kiger Facelift ಕುರಿತ ಪ್ರಮುಖಾಂಶಗಳಿವು.. ಯಾರು ಹೇಳಲ್ಲ!
ನಿನ್ನೆಯಷ್ಟೇ ಹೊಚ್ಚ ಹೊಸ 2025ರ ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್ (Renault Kiger Facelift) ಎಸ್‌ಯುವಿಯನ್ನು ಮಾರಾಟಕ್ಕೆ ತರಲಾಯಿತು. ಇದು ಆಕರ್ಷಕವಾದ ವಿನ್ಯಾಸ ಹಾಗೂ ಹತ್ತಾರು ನವೀನ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಉತ್ತಮವಾದ ಕಾರ್ಯಕ್ಷಮತೆಗೂ ಹೆಸರುವಾಸಿಯಾಗಿದೆ. ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ನಾವಿಲ್ಲಿ ಈ ನೂತನ ಎಸ್‌ಯುವಿಯ ದರ ಮತ್ತು ವಿಶೇಷತೆಗಳ ಕುರಿತಂತೆ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು (Price & Variants):
ಈ ಕಾರು ಕನಿಷ್ಠ ರೂ.6.29 ಲಕ್ಷ ಹಾಗೂ ರೂ.11.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಅಥೆಂಟಿಕ್, ಎವೊಲ್ಯೂಷನ್, ಟೆಕ್ನೋ, ಎಮೊಷನ್ ಟರ್ಬೊ ಹಾಗೂ ಟೆಕ್ನೋ ಟರ್ಬೊ ಸಿವಿಟಿ ಎಂಬ 6 ಅತ್ಯಾಧುನಿಕ ರೂಪಾಂತರಗಳೊಂದಿಗೂ (ವೇರಿಯೆಂಟ್) ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colors):
ನೂತನ ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ನವೀನವಾಗಿರುವ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, 2ಡಿ 'ರೆನಾಲ್ಟ್' ಡೈಮಂಡ್ ಲೋಗೋ, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಮತ್ತು 16-ಇಂಚಿನ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ರೇಡಿಯಂಟ್ ರೆಡ್, ಕ್ಯಾಸ್ಪಿಯನ್ ಬ್ಲೂ, ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್ ಹಾಗೂ ಪರ್ಲ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.
ಸುತ್ತಳತೆ (Dimensions):
ಇದು ಹೆಚ್ಚು ವಿಶಾಲವಾಗಿದೆ. 3,991 ಎಂಎಂ ಉದ್ದ, 1,750 ಅಗಲ & 1,605 ಎಂಎಂ ಎತ್ತರವಿದೆ. ಇದರೊಂದಿಗೆ 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,500 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. 940 ಕೆಜಿ ತೂಕವು ಇದೆ. 40 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನುಒಳಗೊಂಡಿದೆ.
ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಈ ಕಾರು 5 ಆಸನ ಆಯ್ಕೆ ಪಡೆದಿದೆ. ಪ್ರಯಾಣಿಕರು ಸುಲಭವಾಗಿ ದೂರದ ಊರುಗಳಿಗೆ ಸಂಚಾರ ಮಾಡಬಹುದು. ಪ್ರವಾಸಕ್ಕೆ ಹೋಗುವಾಗ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ ದೊಡ್ಡ ಗಾತ್ರವಿರುವ 455 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಕಾರ್ಯಕ್ಷಮತೆ (Performance):
ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್, ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 19.83 ರಿಂದ 20.38 ಕಿ.ಮೀ ವರೆಗೂ ಮೈಲೇಜ್ ಕೊಡುತ್ತದೆ. ಇದರೊಂದಿಗೆ ಡೀಲರ್‌ಶಿಪ್ ಫಿಟೆಡ್ ಸಿಎನ್‌ಜಿ ಕಿಟ್ ಆಯ್ಕೆಯಲ್ಲಿಯೂ ಲಭ್ಯವಿದೆ.
ವೈಶಿಷ್ಟ್ಯಗಳು (Features):
ಈ ಕಾರಿನ ಕ್ಯಾಬಿನ್ ವಿನ್ಯಾಸವು ಅದ್ಭುತವಾಗಿದೆ. ಆಲ್ ಬ್ಲ್ಯಾಕ್ ಪೇಂಟ್ ಸ್ಕೀಮ್‌ನ್ನು ಹೊಂದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ರೇರ್ ಎಸಿ ವೆಂಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ಇದು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್‌ಗಳು, ಟ್ರಾಕ್ಷನ್ ಕಂಟ್ರೋಲ್, ಹಿಲ್ ಸ್ಟಾರ್ಟ್ ಅಸಿಸ್ಟ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಒಟ್ಟಾರೆಯಾಗಿ ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್ ಎಸ್‌ಯುವಿಗೆ ಹ್ಯುಂಡೈ ಎಕ್ಸ್‌ಟರ್, ಟಾಟಾ ಪಂಚ್, ನಿಸ್ಸಾನ್ ಮ್ಯಾಗ್ನೈಟ್, ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್ ಹಾಗೂ ಸ್ಕೋಡಾ ಕೈಲಾಕ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ. ಮುಂಬರುವ ದಿನಗಳಲ್ಲಿ ಈ ಕಾರಿಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.


Click it and Unblock the Notifications








