Tata Nexon: ಅಗ್ಗದ ದರಕ್ಕೆ ನವೀಕರಿಸಿದ ಹೊಸ ಟಾಟಾ ನೆಕ್ಸಾನ್ ಕಾರು ಬಿಡುಗಡೆ.. ಏನಿದೆ ವಿಶೇಷತೆಗಳು?

ಭಾರತದ ಮಾರುಕಟ್ಟೆಯಲ್ಲಿ ಟಾಟಾ ನೆಕ್ಸಾನ್ (Tata Nexon) ಜನಪ್ರಿಯ ಕಾರಾಗಿ ಹೊರಹೊಮ್ಮಿದೆ. ಇದೊಂದು 5 ಆಸನಗಳನ್ನು ಹೊಂದಿರುವ ಎಸ್‌ಯುವಿಯಾಗಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಹೊಸ ವರ್ಷದ ಆರಂಭದಲ್ಲಿಯೇ ಕಂಪನಿಯು 'ನೆಕ್ಸಾನ್' ಕಾರನ್ನು ನವೀಕರಿಸಿದ್ದು, ವಿವಿಧ ರೂಪಾಂತರಗಳು (ವೇರಿಯೆಂತ್) ಹಾಗೂ ಹೊಸ ಬಣ್ಣದ ಆಯ್ಕೆಯಲ್ಲಿ ಪರಿಚಯಿಸಿದೆ. ಬನ್ನಿ.. ಆ ಬಗ್ಗೆ ಸಂಪೂರ್ಣವಾದ ವಿವರವನ್ನು ತಿಳಿಯೋಣ.

ನೂತನ ಟಾಟಾ ನೆಕ್ಸಾನ್ ಎಸ್‌ಯುವಿಯ ಪ್ಯೂರ್ ಪ್ಲಸ್ (Pure+), ಕ್ರಿಯೇಟಿವ್ (Creative) ಹಾಗೂ ಕ್ರಿಯೇಟಿವ್ ಪ್ಲಸ್ ಪಿಎಸ್ (Creative+ PS) ಎಂಬ 3 ರೂಪಾಂತರಗಳನ್ನು ಬಿಡುಗಡೆಗೊಳಿಸಲಾಗಿದೆ. ಈ ಮಾಡೆಲ್‌ಗಳು ಕ್ರಮವಾಗಿ ರೂ.9.69 ಲಕ್ಷ, ರೂ.10.99 ಲಕ್ಷ ಮತ್ತು ರೂ.12.29 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿವೆ. ಇದರೊಟ್ಟಿಗೆ ನೆಕ್ಸಾನ್ ಕಾರನ್ನು ಗ್ರಾಸ್‌ಲ್ಯಾಂಡ್ ಬೀಜ್ & ರಾಯಲ್ ಬ್ಲ್ಯೂ ಎಂಬ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಹೊರತರಲಾಗಿದೆ.

2025 tata nexon suv launched in india New Variants Colour Options details

ಪ್ಯೂರ್ ಪ್ಲಸ್: ಈ ರೂಪಾಂತರ ಸಾಕಷ್ಟು ಅತ್ಯಾಧುನಿಕವಾಗಿದೆ. ಇದು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 4-ಸ್ಪೀಕರ್‌ಗಳು, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೆಚ್‌ಡಿ ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, 4-ಪವರ್ ವಿಂಡೋಗಳು, ರೇರ್ ಎಸಿ ವೆಂಟ್‌ಗಳು, ಬಾಡಿ ಕಲರ್ ಡೋರ್ ಹ್ಯಾಂಡಲ್‌ಗಳು ಮತ್ತು ಶಾರ್ಕ್ ಫಿನ್ ಆಂಟೆನಾಬಂತಹ ವೈಶಿಷ್ಟ್ಯಗಳನ್ನು ಹೊಂದಿದೆ.

ಕ್ರಿಯೇಟಿವ್: ಇದು ಕೂಡ ಅತ್ಯುತ್ತಮವಾಗಿದೆ. ಪ್ರಮುಖವಾಗಿ ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, 16-ಇಂಚಿನ ಅಲಾಯ್ ವೀಲ್‌ಗಳು , ಟಚ್ ಆಟೋ ಎಸಿ ಪ್ಯಾನಲ್, ಕ್ರೂಸ್ ಕಂಟ್ರೋಲ್, ರೇರ್ ವೈಪರ್ & ವಾಷರ್, ಸ್ಟೀರಿಂಗ್ ವೀಲ್ ಕಂಟ್ರೋಲ್ಸ್, ಯುಎಸ್‌ಬಿ ಟೈಪ್ ಎ & ಟೈಪ್ ಸಿ ಚಾರ್ಜರ್‌ಗಳು, ಕೂಲ್ಡ್ ಗ್ಲೋವ್‌ಬಾಕ್ಸ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

2025 tata nexon suv launched in india New Variants Colour Options details

ಕ್ರಿಯೇಟಿವ್ ಪ್ಲಸ್ ಪಿಎಸ್: ಈ ರೂಪಾಂತರವು ಹೆಚ್ಚು ಆಕರ್ಷಕವಾಗಿದೆ. ಬೈ-ಎಲ್ಇಡಿ ಹೆಡ್‌ಲ್ಯಾಂಪ್, ಕನೆಕ್ಟ್ಡ್ ಟೈಲ್ ಲೈಟ್‌ಗಳು, ಫ್ರಂಟ್ ಫಾಗ್ ಲ್ಯಾಂಪ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ರೇರ್ ಡಿಫಾಗರ್, 6 ಸ್ಪೀಕರ್‌ಗಳು, ಕಪ್‌ಹೋಲ್ಡರ್‌ನೊಂದಿಗೆ ರೇರ್ ಸೀಟ್ ಆರ್ಮ್‌ರೆಸ್ಟ್, ಕೀಲೆಸ್ ಎಂಟ್ರಿ, ಫ್ರಂಟ್ ಪಾರ್ಕಿಂಗ್ ಸೇನಾರ್ಸ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಆದರೆ, ಈ ಕಾರಿನ ಪವರ್‌ಟ್ರೇನ್‌ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇದರ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 120 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 170 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

2025 tata nexon suv launched in india New Variants Colour Options details

ಮತ್ತೊಂದು 1.2-ಲೀಟರ್ ಟರ್ಬೊ ಪೆಟ್ರೋಲ್ + ಸಿಎನ್‌ಜಿ ಎಂಜಿನ್ 100 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 170 ನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. ಕೇವಲ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯಲ್ಲಿ ಮಾತ್ರ ಸಿಗುತ್ತದೆ.

ಟಾಟಾ ನೆಕ್ಸಾನ್ ಕಾರಿನ ಇನ್ನೊಂದು 1.5-ಲೀಟರ್ ಡೀಸೆಲ್ ಎಂಜಿನ್ 118 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 260 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಈ ಎಸ್‌ಯುವಿಗಳು 17.01 ರಿಂದ 24.08 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, January 10, 2025, 14:55 [IST]
English summary
2025 tata nexon suv launched in india new variants colour options details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+