Tata: ಟಾಟಾದ ಹೊಸ ಕಾರಿನ ಮೊದಲ ಟೀಸರ್ ಬಿಡುಗಡೆ.. ಶೀಘ್ರ ಮಾರಾಟಕ್ಕೆ.. 28 ಕಿ.ಮೀ ಮೈಲೇಜ್, 5 ಲಕ್ಷ ಬೆಲೆ?
ಟಾಟಾ ಮೋಟಾರ್ಸ್ (Tata Motors) ಸುರಕ್ಷಿತ ಕಾರು ತಯಾರಿಕೆಗೆ ಹೆಸರುವಾಸಿಯಾಗಿದೆ. 2025 ಕಂಪನಿಗೆ ತುಂಬಾ ಮಹತ್ವದ ವರ್ಷವಾಗಿದ್ದು, ಹಲವು ಹೊಚ್ಚ ಹೊಸ ಕಾರುಗಳನ್ನು ಮಾರಾಟಕ್ಕೆ ತರಲು ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಹ್ಯಾಚ್‌ಬ್ಯಾಕ್‌ಗೆ ಪ್ರಬಲವಾದ ಸ್ಪರ್ಧೆಯೊಡ್ಡಲು ನವೀಕರಣಗೊಂಡ ಹೊಚ್ಚ ಹೊಸ ಟಿಯಾಗೊ (Tiago) ಕಾರನ್ನು ಅತಿ ಶೀಘ್ರದಲ್ಲಿ ಬಿಡುಗಡೆ ಮಾಡಲಿದೆ. ಅದಕ್ಕೆ ಸಂಬಂಧಿಸಿದ ಮೊದಲ ಟೀಸರ್‌ನ್ನು ಕೂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಈ ಟೀಸರ್ ಫೋಟೋವನ್ನು ಸೂಕ್ಷ್ಮವಾಗಿ ಗಮನಿಸಿದರೆ, 2025ರ ನೂತನ ಟಾಟಾ ಟಿಯಾಗೊ (Tata Tiago) ಹ್ಯಾಚ್‌ಬ್ಯಾಕ್ ವಿನ್ಯಾಸ (ಡಿಸೈನ್), ಹೀಗಿರುವ ಕಾರಿನಂತೆಯೇ ಇದೆ. ಆದರೂ ಹೊಸ ಹ್ಯಾಚ್‌ಬ್ಯಾಕ್ ಒಂದಷ್ಟು ಸಣ್ಣ - ಪುಟ್ಟ ಬದಲಾವಣೆಗಳನ್ನು ಹೊಂದಿರಲಿದ್ದು, ನವೀನವಾದ ಬಣ್ಣಗಳ ಆಯ್ಕೆಯಲ್ಲಿಯೂ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ.

ನೂತನ ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್‌ನ್ನು ಇನ್ನೂ ಕೆಲವೇ ದಿನಗಳಲ್ಲಿ ಅದ್ದೂರಿಯಾಗಿ ಶುರುವಾಗುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ-2025ರಲ್ಲಿ ಅನಾವರಣಗೊಳಿಸುವ ಸಾಧ್ಯತೆಯಿದೆ. ಆ ಬಳಿಕ ದೇಶೀಯ ಮಾರುಕಟ್ಟೆಯಲ್ಲಿಯೂ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಆದರೆ, ಈ ಕುರಿತಂತೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.
ಮುಂಬರಲಿರುವ 2025ರ ಟಾಟಾ ಟಿಯಾಗೊ ಕಾರಿನ ಪವರ್‌ಟ್ರೇನ್‌ನಲ್ಲಿ ಯಾವುದೇ ದೊಡ್ಡ ಬದಲಾವಣೆಗಳನ್ನು ಮಾಡಲಾಗಿರುವುದಿಲ್ಲ ಎನ್ನಲಾಗಿದೆ. ಇದು 1.2-ಲೀ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಪಡೆದಿರಲಿದ್ದು, 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದೆ. ಇದರೊಟ್ಟಿಗೆ ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ಗರಿಷ್ಠ 28.06 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.

ಈ ಹೊಸ ಹ್ಯಾಚ್‌ಬ್ಯಾಕ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡು ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ. ಪ್ರಮುಖವಾಗಿ ವಿಶಾಲ ಗಾತ್ರದ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಾಧ್ಯತೆಯೂ ಹೆಚ್ಚಿದೆ.
ನೂತನ ಟಾಟಾ ಟಿಯಾಗೊ ಕಾರು ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆ ನೀಡಲಿದೆ ಎನ್ನಲಾಗಿದೆ. ಈ ಹ್ಯಾಚ್‌ಬ್ಯಾಕ್ ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಹೊಚ್ಚ ಹೊಸ ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್ ಅತ್ಯಂತ ಕಡಿಮೆ ಬೆಲೆಯಲ್ಲಿಯೂ ಮಾರಾಟಕ್ಕೆ ಬರುವ ನೀರಿಕ್ಷೆಯಿದೆ. ಪ್ರಸ್ತುತ ಖರೀದಿಗೆ ದೊರೆಯುವ ಕಾರಿನಂತೆ ರೂ.5 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿರಬಹುದು ಎಂದು ಹೇಳಲಾಗಿದೆ. ಈ ಕಾರಿಗೆ ಮಾರುತಿ ಸುಜುಕಿ ಸ್ವಿಫ್ಟ್ ಮಾತ್ರವಲ್ಲದೆ, ಸೆಲೆರಿಯೊ ಮತ್ತು ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ಗಳು ಕೂಡ ದೊಡ್ಡ ಎದುರಾಳಿಯಾಗಿವೆ.
ಇನ್ನು, ಮುಂಬರಲಿರುವ 2025ರ ಟಾಟಾ ಟಿಯಾಗೊ ಕಾರಿಗೆ ಮೇಲೆ ಗ್ರಾಹಕರು ಸಹ ಭಾರೀ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಈ ಹ್ಯಾಚ್‌ಬ್ಯಾಕ್ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡು ಮಾರಾಟಕ್ಕೆ ಬರುವ ಸಾಧ್ಯತೆಯಿದೆ. ಒಮ್ಮೆ ನೂತನ ಕಾರು ಬಿಡುಗಡೆಯಾದ ಮೇಲೆ ದೇಶೀಯ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications