ಗುಡ್‌ನ್ಯೂಸ್: ರತನ್ ಟಾಟಾ ಕಂಪನಿಯಿಂದ 3 ನೂತನ ಕಾರುಗಳ ಬಿಡುಗಡೆ, ಬೈಕ್‌ನಂತೆ ಮೈಲೇಜ್.. 5 ಲಕ್ಷ ಬೆಲೆ!
ದಿವಂಗತ ರತನ್ ಟಾಟಾ ಮಾಲೀಕತ್ವದ ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಮಧ್ಯಮ ವರ್ಗದವರನ್ನು ಗಮನದಲ್ಲಿಟ್ಟುಕೊಂಡು 3 ನೂತನ ಕಾರುಗಳನ್ನು ಬಿಡುಗಡೆಗೊಳಿಸಿದೆ. ಈ ಮೂಲಕ ಕಂಪನಿಯು ಶುಕ್ರವಾರದಂದು ಹೊಸ ವರ್ಷದ ಶುಭಾರಂಭ ಮಾಡಿದೆ. ಸದ್ಯ, ಮಾರಾಟಕ್ಕೆ ಬಂದಿರುವ ಟಿಯಾಗೊ, ಟಿಯಾಗೊ ಇವಿ ಮತ್ತು ಟಿಗೂರ್ ಕಾರುಗಳು ಒಂದಕ್ಕಿಂತ ಒಂದು ಅದ್ಬುತವಾಗಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಭಾರತದ ಮಾರುಕಟ್ಟೆಯಲ್ಲಿ ಪರಿಚಯಿಸಲಾಗಿರುವ 2025ರ ಟಾಟಾ ಟಿಯಾಗೊ (Tata Tiago) ಹ್ಯಾಚ್‌ಬ್ಯಾಕ್, ರೂ.5 ಲಕ್ಷದಿಂದ ರೂ.8.20 ಲಕ್ಷ ಬೆಲೆಯನ್ನು ಹೊಂದಿದೆ. ಟಾಟಾ ಟಿಯಾಗೊ ಇವಿ (Tata Tiago ev), ರೂ.8 ಲಕ್ಷದಿಂದ ರೂ.11.14 ಲಕ್ಷ ಮತ್ತು ಟಾಟಾ ಟಿಗೂರ್ (Tata Tigor) ಸೆಡಾನ್, ರೂ.5.99 ಲಕ್ಷದಿಂದ ರೂ.9.50 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ.

ಈ 3 ನೂತನ ಕಾರುಗಳು ಹೊರಭಾಗದಲ್ಲಿ ಅತ್ಯಾಧುನಿಕ ವಿನ್ಯಾಸವನ್ನು ಒಳಗೊಂಡಿವೆ. ಸಾಮಾನ್ಯ ಟಿಯಾಗೊ ಮತ್ತು ಟಿಗೂರ್ ಕಾರುಗಳು, ಮುಂಭಾಗ (ಫ್ರಂಟ್) ನವೀಕರಣಗೊಂಡಿರುವ ಫಾಸಿಯಾ & ಗ್ರಿಲ್‌ನ್ನು ಹೊಂದಿವೆ. ಇದರೊಂದಿಗೆ ಅತ್ಯುತ್ತಮವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಒಳಗೊಂಡಿವೆ. ಟಿಯಾಗೊ ಹ್ಯಾಚ್‌ಬ್ಯಾಕ್ ಏರ್ ಡ್ಯಾಮ್ ಮೇಲೆ ಕ್ರೋಮ್ ಇನ್ಸರ್ಟ್‌ಗಳನ್ನು ಪಡೆದಿದೆ. ಟಿಗೂರ್ ಸೆಡಾನ್ ಕ್ರೋಮ್ ಸ್ಟ್ರಿಪ್ ಹೊಂದಿರುವ ವಿಭಿನ್ನವಾದ ಗ್ರಿಲ್‌ನ್ನು ಹೊಂದಿದೆ.
ಟಿಯಾಗೊ ಇವಿ (ಎಲೆಕ್ಟ್ರಿಕ್ ಕಾರು) ಬಾಡಿ ಕಲರ್ ಇರುವ ಏರ್ ಡ್ಯಾಮ್‌ನ್ನು ಪಡೆದುಕೊಂಡಿದೆ. ಹಾಗೆಯೇ ಇವೆಲ್ಲ ಕಾರುಗಳು ಎಲ್ಇಡಿ ಡಿಆರ್‌ಎಲ್‌ಗಳು, ಸರ್ಕ್ಯುಲರ್ ಫಾಗ್ ಲ್ಯಾಂಪ್‌ಗಳು, ಹೊಸದಾಗಿರುವ ಶಾರ್ಕ್-ಫಿನ್ ಆಂಟೆನಾ ಮತ್ತು 15-ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿವೆ. ಇದು ಮಾತ್ರವಲ್ಲದೆ ಈ ಮಾಡೆಲ್‌ಗಳೆಲ್ಲ 5 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ಖರೀದಿಗೆ ಲಭ್ಯವಿವೆ.

ನೂತನ ಕಾರುಗಳು ಬಹುತೇಕ ಒಂದೇ ರೀತಿಯ ವೈಶಿಷ್ಟ್ಯವನ್ನು ಹೊಂದಿವೆ. ಪ್ರಮುಖವಾಗಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಕ್ರೂಸ್ ಕಂಟ್ರೋಲ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿವೆ. ಟಾಪ್ ಎಂಡ್ ಮಾಡೆಲ್ ಟಿಗೂರ್ ಕಾರು ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಕೀಲೆಸ್ ಎಂಟ್ರಿ & 360-ಡಿಗ್ರಿ ಕ್ಯಾಮೆರಾದಂತಹ ಹೆಚ್ಚುವರಿ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಹೊಸ ಟಿಯಾಗೊ ಹಾಗೂ ಟಿಗೂರ್ ಕಾರುಗಳ ಪವರ್‌ಟ್ರೇನ್‌ನಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಇವುಗಳಲ್ಲಿ ಬಳಕೆ ಮಾಡಿರುವ 1.2-ಲೀಟರ್ ಪೆಟ್ರೋಲ್ ಎಂಜಿನ್, 86 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.
ಇನ್ನೊಂದು 1.2-ಲೀಟರ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್, 73.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 95 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಕಾರುಗಳು, 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿವೆ. 19.43 ರಿಂದ 28.06 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತವೆ.
ಟಾಟಾ ಟಿಯಾಗೊ ಇವಿಯ ಪವರ್‌ಟ್ರೇನ್‌ನ್ನು ಕೂಡ ಯಾವುದೇ ಮಾರ್ಪಾಡುಗಳಿಗೆ ಒಳಪಡಿಸಿಲ್ಲ. ಇದು 19.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 24 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 250 ರಿಂದ 315 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications