ಟಾಟಾಗೆ ಶಾಕ್.. ಟೊಯೊಟಾದ ಹೊಸ ಎಲೆಕ್ಟ್ರಿಕ್ ಕಾರು ಅನಾವರಣ.. ಭಾರೀ ರೇಂಜ್, ಕಡಿಮೆ ಬೆಲೆಗೆ ಮಾರಾಟಕ್ಕೆ?
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor), ಪ್ರಮುಖ ಕಾರು ತಯಾರಕ ಕಂಪನಿಯಾಗಿದೆ. ರಾಜ್ಯದ ಬಿಡದಿಯಲ್ಲಿ ಅತಿದೊಡ್ಡ ಉತ್ಪಾದನಾ ಘಟಕವನ್ನು ಹೊಂದಿದ್ದು, ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟ ಮಾಡುತ್ತಿದೆ. ಮಾರುತಿ ಸುಜುಕಿ ಹಾಗೂ ಟೊಯೊಟಾ ಕಂಪನಿಗಳು ತಂತ್ರಜ್ಞಾನ ಹಂಚಿಕೆಯಲ್ಲಿ ಪಾಲುದಾರಿಕೆ ಹೊಂದಿರುವುದು ಗೊತ್ತೇ ಇದೆ. ಸದ್ಯ, ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಟೊಯೊಟಾ ಕಂಪನಿ, ಮಾರುತಿ ಸುಜುಕಿ ಇ ವಿಟಾರಾ ಆಧಾರಿತ ನೂತನ 'ಅರ್ಬನ್ ಕ್ರೂಸರ್ ಬಿಇವಿ' ಕಾನ್ಸೆಪ್ಟ್ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಅನಾವರಣಗೊಳಿಸಿದೆ.
ವಿನ್ಯಾಸ (Design): ಹೊಚ್ಚ ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಬಿಇವಿ (Toyota Urban Cruiser BEV) ಕಾನ್ಸೆಪ್ಟ್ ಎಲೆಕ್ಟ್ರಿಕ್ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾಗಿ ಹೆಡ್‌ಲೈಟ್‌ಗಳು, 12-ಪೀಸ್ ಎಲ್ಇಡಿ ಡಿಆರ್‌ಎಲ್‌ಗಳು, ಚಾರ್ಜಿಂಗ್ ಪೋರ್ಟ್, ಅಲಾಯ್ ವೀಲ್‌ಗಳು, ರೂಫ್ ಮೌಂಟೆಡ್ ಸ್ಪಾಯ್ಲರ್ ಅನ್ನು ಹೊಂದಿದೆ.

ವೈಶಿಷ್ಟ್ಯಗಳು (Features): ಈ ಕಾರಿನ ಬಹುತೇಕ ವೈಶಿಷ್ಟ್ಯಗಳು ಮಾರುತಿ ಸುಜುಕಿ ಇ ವಿಟಾರಾಕ್ಕೆ ಹೋಲಿಕೆಯಾಗಿತ್ತದೆ. ಇದು ಟೂ-ಸ್ಪೋಕ್ ಸ್ಟೀರಿಂಗ್ ವೀಲ್‌ಗಳು, ಸ್ಕ್ವೇರ್ ಎಸಿ ವೆಂಟ್‌ಗಳನ್ನು ಪಡೆದಿದೆ. ಇದರೊಟ್ಟಿಗೆ ಡುಯಲ್ ಡಿಜಿಟಲ್ ಡಿಸ್‌ಪ್ಲೇ ಸೆಟಪ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನೀರಿಕ್ಷೆಯಿದೆ.
ಕಾರ್ಯಕ್ಷಮತೆ (Performance): ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯಲ್ಲಿಯೂ ಮಾರಾಟಕ್ಕೆ ಬರುವ ಸಾಧ್ಯತೆಯಿದೆ. 49 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಸಂಪೂರ್ಣ ಚಾರ್ಜ್‌ನಲ್ಲಿ 550 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಲಿದೆ ಎಂದು ಅಂದಾಜಿಸಲಾಗಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features): ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಬಿಇವಿ ಕಾನ್ಸೆಪ್ಟ್ ಎಲೆಕ್ಟ್ರಿಕ್ ಕಾರು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರಬಹುದು ಎನ್ನಲಾಗಿದೆ.
ಬೆಲೆ (Price): ನೂತನ ಅರ್ಬನ್ ಕ್ರೂಸರ್ ಬಿಇವಿ ಎಲೆಕ್ಟ್ರಿಕ್ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರಲಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ಈ ಕಾರು ರೂ.18 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಈ ವರ್ಷದ ಕೊನೆಯಲ್ಲಿ ಮಾರಾಟಕ್ಕೆ ಬರುವ ಸಾಧ್ಯತೆಯಿದೆ. ನೂತನ ಎಸ್‌ಯುವಿ, ಟಾಟಾದ ವಿವಿಧ ಎಲೆಕ್ಟ್ರಿಕ್ ಕಾರುಗಳಿಗೆ ಪ್ರಬಲವಾದ ಎದುರಾಳಿಯಾಗಲಿದೆ.

ಇಂಧನ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಕಾರು ಸಹ ಖರೀದಿಗೆ ಲಭ್ಯ: ಸದ್ಯ ಈ ಕಾರು ರೂ.11.14 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್, ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19.39 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








