Volvo: 2025ರ ವೋಲ್ವೋ ಎಕ್ಸ್‌ಸಿ90 ಫೇಸ್‌ಲಿಫ್ಟ್ ಬಿಡುಗಡೆ.. ಇದೇ ರಸ್ತೆ ಮೇಲಿನ ಅರಮನೆ, ಬೆಲೆ ಎಷ್ಟು.. ಹೇಗಿದೆ?
ವೋಲ್ವೋ ಕಾರ್ ಇಂಡಿಯಾ (Volvo Car India) ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಹಲವು ಕಾರುಗಳನ್ನು ಯಶಸ್ವಿಯಾಗಿ ಮಾರಾಟ ಮಾಡುತ್ತಿದೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ವೋಲ್ವೋ ನವೀಕರಣಗೊಳಿಸಿರುವ ಹೊಚ್ಚ ಹೊಸ ಎಕ್ಸ್‌ಸಿ90 ಎಸ್‌ಯುವಿಯನ್ನು ಬಿಡುಗಡೆಗೊಳಿಸಿದೆ. ಬನ್ನಿ.. ಈ ಕಾರಿನ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದನ್ನು ತಿಳಿಯೋಣ.
2025ರ ನೂತನ ವೋಲ್ವೋ ಎಕ್ಸ್‌ಸಿ90 ಫೇಸ್‌ಲಿಫ್ಟ್ (Volvo XC90 Facelift) ಎಸ್‌ಯುವಿ ರಸ್ತೆ ಮೇಲಿನ ಅರಮನೆ ರೀತಿಯಲ್ಲಿದ್ದು, ಕೊಂಚ ದುಬಾರಿ ದರವನ್ನು ಹೊಂದಿದೆ. ಈ ಕಾರು ರೂ.1.02 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಹಳೆಯ ಎಕ್ಸ್‌ಸಿ90ಗಿಂತ ರೂ.2 ಲಕ್ಷ ಹೆಚ್ಚಿನ ದರವನ್ನು ಪಡೆದಿದೆ.

ಹೊಸ ವೋಲ್ವೋ ಎಕ್ಸ್‌ಸಿ90 ಫೇಸ್‌ಲಿಫ್ಟ್ ಕಾರು ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು ಥಾರ್ಸ್ ಹ್ಯಾಮರ್ ಎಲ್ಇಡಿ ಡಿಆರ್‌ಎಲ್‌ಗಳನ್ನು ಹೊಂದಿದೆ. ಮುಂಭಾಗದ (ಫ್ರಂಟ್) ಬಂಪರ್‌ನ್ನು ಮರುವಿನ್ಯಾಸಗೊಳಿಸಲಾಗಿದೆ. 21-ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳು ಮತ್ತು ವಿನೂತನವಾಗಿರುವ ಟೈಲ್ ಲೈಟ್ ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ.
ಈ ಎಸ್‌ಯುವಿ 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ದೂರದ ಊರುಗಳಿಗೆ ಓಡಾಟ ನಡೆಸಬಹುದು. ಜೊತೆಗೆ ಓನಿಕ್ಸ್ ಬ್ಲಾಕ್, ಕ್ರಿಸ್ಟಲ್ ವೈಟ್, ಡೆನಿಮ್ ಬ್ಲೂ, ವೇಪರ್ ಗ್ರೇ ಮತ್ತು ಬ್ರೈಟ್ ಡಸ್ಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ನೂತನ ವೋಲ್ವೋ ಎಕ್ಸ್‌ಸಿ90 ಕಾರು 48ವಿ-ಮೈಲ್ಡ್ ಹೈಬ್ರಿಡ್ 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿದೆ. 250 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 360 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಇದರೊಟ್ಟಿಗೆ 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಹೊಸ ವೋಲ್ವೋ ಎಕ್ಸ್‌ಸಿ90 ಎಸ್‌ಯುವಿ 8 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ ಎಂದು ಅಂದಾಜಿಸಲಾಗಿದೆ. ಇದು ಎಡಬ್ಲ್ಯೂಡಿ (ಆಲ್-ವೀಲ್ ಡ್ರೈವ್) ಟೆಕ್ನಾಲಜಿಯನ್ನು ಒಳಗೊಂಡಿದೆ. 180 ಕೆಎಂಪಿಹೆಚ್ ಸ್ಪೀಡ್‌ನ್ನು ಹೊಂದಿದೆ. ಕೇವಲ 7.7 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಕಾರು ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 11.2-ಇಂಚಿನ ಫ್ರೀಸ್ಟ್ಯಾಂಡಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 12.3-ಇಂಚಿನ ಡ್ರೈವರ್ ಡಿಸ್‌ಪ್ಲೇ, 19-ಸ್ಪೀಕರ್ ಬೋವರ್ಸ್ & ವಿಲ್ಕಿನ್ಸ್ ಆಡಿಯೊ ಸಿಸ್ಟಮ್, ಪನೋರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್, ಹೆಡ್ಸ್-ಅಪ್ ಡಿಸ್‌ಪ್ಲೇ ಮತ್ತು 4-ಜೋನ್ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ನೂತನ ವೋಲ್ವೋ ಎಕ್ಸ್‌ಸಿ90 ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ ಮಲ್ಟಿಪಲ್ ಏರ್‌ಬ್ಯಾಗ್‌ಗಳು, ಹಿಲ್ ಸ್ಟಾರ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳು, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ರೇರ್ ಪಾರ್ಕಿಂಗ್ ಸೆನ್ಸರ್ಸ್ ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








