27 Km ಮೈಲೇಜ್.. 6-ಆಸನಗಳು, 5 ಲಕ್ಷ, ಈ ಪ್ರಖ್ಯಾತ ಕಾರಿನ ಹೊಸ ಆನ್-ರೋಡ್ ದರವೆಷ್ಟು, EMI ಇಷ್ಟೇನಾ?
ಮಾರುತಿ ಸುಜುಕಿ ಇಕೋ (Maruti Suzuki Eeco) ಪ್ರಮುಖ ಎಂಪಿವಿಯಾಗಿ ಹೊರಹೊಮ್ಮಿದೆ. ಸೆ.22 ರಿಂದ ಪರಿಷ್ಕೃತ ಜಿಎಸ್‌ಟಿ ತೆರಿಗೆ ದರಗಳು ಜಾರಿಗೊಂಡಿವೆ. ಇದರ ಸಂಪೂರ್ಣ ಪ್ರಯೋಜವು 'ಇಕೋ' ಕಾರಿಗೂ ದೊರೆಯುತ್ತಿದ್ದು, ರೂ.68,000 ವರೆಗೆ ಬೆಲೆ ಇಳಿಕೆಯಾಗಿದೆ. ಕನಿಷ್ಠ ರೂ.5.21 ಲಕ್ಷ ಹಾಗೂ ಗರಿಷ್ಠ ರೂ.6.36 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. ನೀವು ಅಧಿಕ ಆಸನಗಳನ್ನು ಹೊಂದಿರುವ ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, 'ಇಕೋ' ಅತ್ಯುತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಇದೇ ಎಂಪಿವಿಯ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಕುರಿತಂತೆ ಒಂದಷ್ಟು ಪ್ರಮುಖ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ನೂತನ 'ಇಕೋ' ಎಂಪಿವಿ ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಸ್ಟ್ಯಾಂಡರ್ಡ್ 5 ಸೀಟರ್ (ಪೆಟ್ರೋಲ್) ರೂಪಾಂತರ, ರೂ.6.25 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.4.25 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.8,600 ವರೆಗೆ ಇಎಂಐ ಕಟ್ಟಬೇಕು.

ಇನ್ನೊಂದು 5 ಸೀಟರ್ ಎಸಿ (ಪೆಟ್ರೋಲ್) ರೂಪಾಂತರ, ರೂ.6.64 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.4.64 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ 5 ವರ್ಷಗಳಿಗೆ ಮಾಸಿಕ ರೂ.9,500 ವರೆಗೆ ಇಎಂಐ ಪಾವತಿ ಮಾಡಬೇಕು.
ಮತ್ತೊಂದು ಸ್ಟ್ಯಾಂಡರ್ಡ್ 6 ಸೀಟರ್ (ಪೆಟ್ರೋಲ್) ರೂಪಾಂತರ, ರೂ.6.56 ಲಕ್ಷವರೆಗೆ ದರವನ್ನು ಹೊಂದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.4.56 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.9,200 ವರೆಗೆ ಇಎಂಐ ಕಟ್ಟಬೇಕು.

ಇದೇ ಕಾರಿನ 5 ಸೀಟರ್ ಎಸಿ ಸಿಎನ್‌ಜಿ ರೂಪಾಂತರ, ರೂ.7.60 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.5.60 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ 5 ವರ್ಷಗಳಿಗೆ ಮಾಸಿಕ ರೂ.11,300 ಇಎಂಐ ಪಾವತಿಸಬೇಕು.
ಮಾರುತಿ ಸುಜುಕಿ ಇಕೋ ವಿಶೇಷತೆಗಳೇನು:
ಈ ಎಂಪಿವಿಯು ತುಂಬಾ ಸರಳವಾದ ವಿನ್ಯಾಸವನ್ನು ಪಡೆದಿದೆ. ಅತ್ಯುತ್ತಮವಾದ ಹ್ಯಾಲೊಜೆನ್ ಹೆಡ್‌ಲ್ಯಾಂಪ್‌ಗಳು ಹಾಗೂ ಟೈಲ್‌ಲೈಟ್‌ಗಳನ್ನು ಹೊಂದಿದೆ. ಮೆಟಾಲಿಕ್ ಗ್ಲಿಸ್ಟೆನಿಂಗ್ ಗ್ರೇ, ಬ್ಲ್ಯೂಯಿಸ್ ಬ್ಲ್ಯಾಕ್, ಸಾಲಿಡ್ ವೈಟ್ ಮತ್ತು ಮೆಟಾಲಿಕ್ ಬ್ರಿಸ್ಕ್ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 160 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2350 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
ನೂತನ ಇಕೋ ಎಂಪಿವಿ ಬಲಿಷ್ಠವಾದ 1.2 ಲೀಟರ್ ಪೆಟ್ರೋಲ್ ಮತ್ತು 1.2 ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಮಾತ್ರ ಹೊಂದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 19 ರಿಂದ 27 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 15.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಇದು ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ ಪುಟ್ಟ ಗಾತ್ರದ 275 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ಸೆಮಿ ಡಿಜಿಟಲ್ ಸ್ಪೀಡೋಮೀಟರ್, ಬೇಸಿಕ್ ಆಡಿಯೊ ಸಿಸ್ಟಮ್, ಮ್ಯಾನುವಲ್ ಎಸಿ ಹಾಗೂ ರೇರ್ ಪಾರ್ಕಿಂಗ್ ಸೆನ್ಸಾರ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ಸೀಟ್‌ಬೆಲ್ಟ್ ರಿಮೈಂಡರ್‌ನ್ನು ಪಡೆದಿದೆ.
ನಿಮ್ಮ ಗಮನಕ್ಕೆ.. ಈ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಗಳು ನಗರದಿಂದ ನಗರಕ್ಕೆ ಬೇರೆಯಾಗಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








