ಸದ್ದಿಲ್ಲದೇ ಸಿದ್ಧತೆ: ಈ 3 ಜನಪ್ರಿಯ ಎಸ್‌ಯುವಿಗಳು ಹೊಸ ಅವತಾರದಲ್ಲಿ ಬರುತ್ತೇವೆ.. ಬೈಕ್‌ನಂತೆ ಮೈಲೇಜ್!
ಭಾರತದ ಕಾರು ಮಾರುಕಟ್ಟೆಯಲ್ಲಿ ಎಸ್‌ಯುವಿಗಳು ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಇವುಗಳನ್ನು ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಮುಂಬರುವ ವರ್ಷಗಳಲ್ಲಿ ಹಸಿರು ಚಲನಶೀಲತೆಯನ್ನು ಬೆಂಬಲಿಸುವ ವಾಹನಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಅದಕ್ಕಾಗಿ ಈಗಿನಿಂದಲೇ ಮಾರುತಿ ಸುಜುಕಿ, ಮಹೀಂದ್ರಾ ಹಾಗೂ ಕಿಯಾದಂತಹ ಕಂಪನಿಗಳು ಸಾಕಷ್ಟು ತಯಾರಿಯನ್ನು ಆರಂಭಿಸಿವೆ. ಕೆಲವೇ ವರ್ಷಗಳಲ್ಲಿ ಎಲೆಕ್ಟ್ರಿಕ್/ ಹೈಬ್ರಿಡ್ ಚಾಲಿತ ಕಾರುಗಳನ್ನು ಮಾರಾಟಕ್ಕೆ ತರಲಿವೆ. ಬಹುಮುಖ್ಯವಾಗಿ ಕೆಲವು ಜನಪ್ರಿಯ ಎಸ್‌ಯುವಿಗಳನ್ನು ಹೊಸ ಪವರ್‌ಟ್ರೇನ್‌ನೊಂದಿಗೆ ಪರಿಚಯಿಸಲಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಇವಿ (Mahindra XUV 3XO EV): ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಇಂಧನ ಚಾಲಿತ (ಪೆಟ್ರೋಲ್/ಡೀಸೆಲ್) 'ಎಕ್ಸ್‌ಯುವಿ 3ಎಕ್ಸ್ಒ' ಎಸ್‌ಯುವಿ ಅಬ್ಬರಿಸುತ್ತಿದೆ. ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಇದೇ ಕಾರನ್ನು ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಗೊಳಿಸಲು ಕಂಪನಿಯು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಈ ಎಸ್‌ಯುವಿ ಪ್ರಾಯೋಗಿಕ ಸಂಚಾರವನ್ನು ನಡೆಸುವಾಗಲೂ ಕಾಣಿಸಿಕೊಂಡಿದೆ.

ಎಲ್ಲವು ಅಂದುಕೊಂಡರೆ ನಡೆದರೆ, ಹೊಚ್ಚ ಹೊಸ 'ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಇವಿ' ಇದೇ ವರ್ಷದ ಮಧ್ಯಭಾಗದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಕಾರು ಇಂಧನ ಚಾಲಿತ ಎಕ್ಸ್‌ಯುವಿ 3ಎಕ್ಸ್ಒ ಕಾರಿನಂತೆ ವಿನ್ಯಾಸವನ್ನು ಹೊಂದಿರಲಿದ್ದು, ಎಕ್ಸ್‌ಯುವಿ400 ಇವಿಯಂತೆ 34.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 39.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿರಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 375 ರಿಂದ 456 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಹುದು ಎಂದು ಸಹ ಅಂದಾಜಿಸಲಾಗಿದೆ.
ಕಿಯಾ ಸೈರಸ್ ಇವಿ (Kia Syros EV): ಪ್ರಸ್ತುತ ದೇಶೀಯವಾಗಿ ಖರೀದಿಗೆ ದೊರೆಯುತ್ತಿರುವ ಸಾಮಾನ್ಯ 'ಸೈರಸ್' ಎಸ್‌ಯುವಿಗೆ ಖರೀದಿದಾರರು ಮನಸೋತಿದ್ದಾರೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಇದೇ ಕಾರನ್ನು ಎಲೆಕ್ಟ್ರಿಕ್ ರೂಪದಲ್ಲೂ ಬಿಡುಗಡೆಗೊಳಿಸಲು ಕಂಪನಿಯು ಸಾಕಷ್ಟು ಸಿದ್ಧತೆಯನ್ನು ನಡೆಸುತ್ತಿದೆ ಎಂದು ಹೇಳಲಾಗಿದೆ.

ಮುಂಬರಲಿರುವ ಕಿಯಾ ಸೈರಸ್ ಇವಿ 2026ರ ಆರಂಭದಲ್ಲಿ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ಇದು ದೊಡ್ಡ ಗಾತ್ರದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿರಲಿದ್ದು, ಭರ್ತಿ ಚಾರ್ಜ್‌ನಲ್ಲಿ 450 ಕಿಲೋಮೀಟರ್ ಓಡುತ್ತದೆ ಎಂದು ಅಂದಾಜಿಸಲಾಗಿದೆ. ಈ ಕಾರು ರೂ.14 ಲಕ್ಷ (ಎಕ್ಸ್-ಶೋರೂಂ) ಬೆಲೆಗೂ ಮಾರಾಟಕ್ಕೆ ಬರಬಹುದು ಎಂದು ಹೇಳಲಾಗಿದೆ.
ಮಾರುತಿ ಸುಜುಕಿ ಬ್ರೆಜಾ ಹೈಬ್ರಿಡ್ (Maruti Suzuki Brezza Hybrid): ದೇಶೀಯವಾಗಿ ಮಾರುತಿ ಸುಜುಕಿಯು ಅರೆನಾ ಡೀಲರ್‌ಶಿಪ್ ಮೂಲಕ ಇಂಧನ ಚಾಲಿತ (ಪೆಟ್ರೋಲ್/ಸಿಎನ್‌ಜಿ) 'ಬ್ರೆಜಾ' ಎಸ್‌ಯುವಿಯನ್ನು ಮಾರಾಟ ಮಾಡುತ್ತಿದೆ. ಇದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಕಾರಾಗಿ ಹೊರಹೊಮ್ಮಿದೆ. ಈ ಎಸ್‌ಯುವಿಯನ್ನು ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಅವತಾರದಲ್ಲಿ ಮಾರಾಟಕ್ಕೆ ತರಲು ಸಿದ್ಧತೆಗಳು ನಡೆಯುತ್ತಿವೆ ಎನ್ನಲಾಗಿದೆ.

ಬಹುತೇಕ ನೂತನ ಮಾರುತಿ ಸುಜುಕಿ ಬ್ರೆಜಾ ಹೈಬ್ರಿಡ್ ಎಸ್‌ಯುವಿ, 2029ರಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುವ ಸಾಧ್ಯತೆಯಿದ್ದು, 27 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ ಎಂದು ಅಂದಾಜಿಸಲಾಗಿದೆ. ಸದ್ಯ, ಗ್ರಾಹಕರ ಖರೀದಿಗೆ ಲಭ್ಯವಿರುವ ಸಾಮಾನ್ಯ ಬ್ರೆಜಾ ಕಾರು ರೂ.8 ರಿಂದ ರೂ.14 ಲಕ್ಷವರೆಗೆ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications