30 Km ಮೈಲೇಜ್.. 5-ಸೀಟರ್, ಈ ಅಗ್ಗದ ಟೊಯೊಟಾ ಕಾರಿಗೆ ಮನಸೋತ ಗ್ರಾಹಕರು!
ಟೊಯೊಟಾ ಗ್ಲಾನ್ಜಾ (Toyota Glanza) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳಲ್ಲೂ 'ಗ್ಲಾನ್ಜಾ' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 6,162 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 4,273 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ಶೇಕಡ 44% ಪ್ರಗತಿಯಾಗಿದೆ.
ಆದರೂ ಇದೇ ವರ್ಷದ ಮೇ ತಿಂಗಳಿನಿಂದ ಸೆಪ್ಟೆಂಬರ್‌ವರೆಗೆ 'ಟೊಯೊಟಾ ಗ್ಲಾನ್ಜಾ' ಮಾರಾಟವು ಅಷ್ಟೇನು ಉತ್ತಮವಾಗಿರಲಿಲ್ಲ. ಸಾಕಷ್ಟು ಸಾಧಾರಣ ಮಟ್ಟದಲ್ಲಿತ್ತು. ಸರಿ ಸುಮಾರು 21,111 ಯುನಿಟ್‌ಗಳನ್ನು ಮಾರಾಟಲಾಗಿತ್ತು. ಈ ಅಂಕಿ ಅಂಶವನ್ನು ಲೆಕ್ಕ ಹಾಕಿದಾಗ ಪ್ರತಿ ತಿಂಗಳು 4,222 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

ಕಳೆದ ತಿಂಗಳು (ಅಕ್ಟೋಬರ್-2025) 'ಟೊಯೊಟಾ ಗ್ಲಾನ್ಜಾ' ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಳ್ಳಲು ನಾನಾ ಕಾರಣಗಳನ್ನು ಪಟ್ಟಿ ಮಾಡಬಹುದು. ಇದೊಂದು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದ್ದು, ಎಸ್‌ಯುವಿಗಳಿಗೆ ಸವಾಲೆಸೆಯುವ ರೀತಿಯಲ್ಲಿದೆ. ಸೆಪ್ಟೆಂಬರ್ 22ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಈ ಕಾರಿನ ಬೆಲೆಯಲ್ಲಿಯೂ ತುಸು ಅಗ್ಗವಾಗಿದೆ. ಹಾಗೆಯೇ ದೀಪಾವಳಿ ಹಬ್ಬವಿದ್ದರಿಂದ 'ಗ್ಲಾನ್ಜಾ'ವನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೊಂಡುಕೊಂಡಿದ್ದಾರೆ ಎನ್ನಲಾಗಿದೆ.
ಟೊಯೊಟಾ ಗ್ಲಾನ್ಜಾ ವಿಶೇಷತೆಗಳೇನು:
ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದೆ. ಕನಿಷ್ಠ ರೂ.6.39 ಲಕ್ಷ ಹಾಗೂ ಗರಿಷ್ಠ ರೂ.9.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಖರೀದಿದಾರರಿಗೂ ಸುಲಭವಾಗಿ ಕೈಗೆಟುಕುತ್ತದೆ. ಇ (E), ಎಸ್ (S), ಜಿ (G) ಮತ್ತು ವಿ (V) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & 16 ಇಂಚಿರುವ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಪೋರ್ಟಿನ್ ರೆಡ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ ಮತ್ತು ಕೆಫೆ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,520 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.
ಹೊಸ 'ಗ್ಲಾನ್ಜಾ' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.2-ಲೀ. ಪೆಟ್ರೋಲ್ ಎಂಜಿನ್, 6000 ಆರ್‌ಪಿಎಂನಲ್ಲಿ 90 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 4400 ಆರ್‌ಪಿಎಂನಲ್ಲಿ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 22.35 ರಿಂದ 22.94 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಇನ್ನೊಂದು 1.2-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್, 6000 ಆರ್‌ಪಿಎಂನಲ್ಲಿ 77.5 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 4300 ಆರ್‌ಪಿಎಂನಲ್ಲಿ 98.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 30 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ಸಾಗಿಸಲು 318 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 11.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ನೂತನ 'ಗ್ಲಾನ್ಜಾ' ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 9 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್, ಕನೆಕ್ಟ್ಡ್ ಕಾರ್ ಟೆಕ್ ಹಾಗೂ ಕೀಲೆಸ್ ಎಂಟ್ರಿಯನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ವಿಎಸ್‍ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), 3-ಪಾಯಿಂಟ್ ಸೀಟ್‌ಬೆಲ್ಟ್ ಮತ್ತು ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications








