ಬಡವರಿಗೆ ಬೆಸ್ಟ್ ಕಾರಿದು: 3.70 ಲಕ್ಷ, ಹೊಸ Maruti Alto K10 ತೆಗೆದುಕೊಳ್ಳಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ವಿಶ್ವಾಸಾರ್ಹ ಹ್ಯಾಚ್‌ಬ್ಯಾಕ್ ಆಗಿದೆ. ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಈ ಕಾರಿನ ದರವು ರೂ.1.07 ಲಕ್ಷವರೆಗೆ ಇಳಿಕೆಯಾಗಿದೆ. ರೂ.3.70 ಲಕ್ಷದಿಂದ ರೂ.5.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಮನೆಗೆ ತರಲು ಆಲೋಚಿಸಿದ್ದೀರಾ.. ಹಾಗಾದರೆ 'ಆಲ್ಟೊ ಕೆ10' ಅತ್ಯುತ್ತಮ ಆಯ್ಕೆಯಾಗಿದೆ. ನಾವಿಲ್ಲಿ ಇದೇ ಹ್ಯಾಚ್‌ಬ್ಯಾಕ್‌ನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಈ ಕಾರು ಹಲವು ವಿಧದಲ್ಲಿ ಗ್ರಾಹಕರ ಖರೀದಿ ಲಭ್ಯವಿದೆ. ಇದರ ಸ್ಟ್ಯಾಂಡರ್ಡ್ (ಪೆಟ್ರೋಲ್) ರೂಪಾಂತರ, ರೂ.4.39 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.50,000 ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.3.89 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.8,000 ವರೆಗೆ ಇಎಂಐ ಪಾವತಿ ಮಾಡಬೇಕು.

ಇದೇ ಹ್ಯಾಚ್‌ಬ್ಯಾಕ್‌ನ ಎಲ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.6.05 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.50,000 ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.5.55 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.11,000 ವರೆಗೆ ಇಎಂಐ ಕಟ್ಟಬೇಕು.
ಮತ್ತೊಂದು ವಿಎಕ್ಸ್ಐ (ಪೆಟ್ರೋಲ್) ರೂಪಾಂತರ, 6.83 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.50,000 ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.6.33 ಲಕ್ಷವರೆಗೆ ಸಾಲ ಬಾಕಿಯುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.13,000 ವರೆಗೆ ಇಎಂಐ ಪಾವತಿಸಬೇಕು.

ಇನ್ನೊಂದು ಎಲ್ಎಕ್ಸ್ಐ (ಸಿಎನ್‌ಜಿ) ರೂಪಾಂತರ, ರೂ.7 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.50,000 ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.6.50 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.13,000 ವರೆಗೆ ಇಎಂಐ ಕಟ್ಟಬೇಕು.
ಮಾರುತಿ ಸುಜುಕಿ ಆಲ್ಟೊ ಕೆ10 ವಿಶೇಷತೆಗಳೇನು:
ಈ ಹ್ಯಾಚ್‌ಬ್ಯಾಕ್ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಟಿಯರ್‌ಡ್ರಾಪ್ ಶೇಪ್ಡ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು 13 ಇಂಚಿನ ವೀಲ್‌ಗಳನ್ನು ಪಡೆದಿದೆ. ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಪ್ರೀಮಿಯಂ ಅರ್ಥ್ ಗೋಲ್ಡ್ ಹಾಗೂ ಮೆಟಾಲಿಕ್ ಸ್ಪೀಡಿ ಬ್ಲೂ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಇದು 3,530 ಎಂಎಂ ಉದ್ದ, 1,490 ಅಗಲ ಮತ್ತು 1,520 ಎತ್ತರವಿದೆ. 167 ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,380 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬಲಿಷ್ಠವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24 ರಿಂದ 34 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.
ನೂತನ 'ಆಲ್ಟೊ ಕೆ10' ಕಾರು 27 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. ಸರಿ ಸುಮಾರು 741 ಕೆಜಿ ತೂಕವಿದೆ. 145 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 5.23 ಸೆಕೆಂಡುಗಳಲ್ಲಿ 0-60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ಸ್ಟೀರಿಂಗ್, ಕೀಲೆಸ್ ಎಂಟ್ರಿ, 4 ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಹಾಗೂ ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಈ ಹ್ಯಾಚ್‌ಬ್ಯಾಕ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ 3 ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಹೊಂದಿದೆ.
ನಿಮ್ಮ ಗಮನಕ್ಕೆ.. ಇಲ್ಲಿ ಹೊಸ 'ಮಾರುತಿ ಆಲ್ಟೊ ಕೆ10' ಕಾರಿನ ಕೆಲವೇ ರೂಪಾಂತರಗಳ (ವೇರಿಯೆಂಟ್) ಆನ್-ರೋಡ್ ಬೆಲೆ ಮತ್ತು ಇಎಂಐ ಆಯ್ಕೆಯ ಕುರಿತಂತೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








