Mahindra: 8 ಲಕ್ಷದೊಳಗೆ ಸಿಗುವ ಅತ್ಯಂತ ಸುರಕ್ಷಿತ ಎಸ್‌ಯುವಿ: 6 ಏರ್‌ಬ್ಯಾಗ್‌ಗಳು... ಸನ್‌ರೂಫ್!

ಭಾರತದಲ್ಲಿ ಇತ್ತೀಚೆಗೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ತುಸು ಬೆಲೆ ಹೆಚ್ಚಾದರೂ ಕಾರು ಕಂಪನಿಗಳು ಹೆಚ್ಚಿನ ಭದ್ರತೆಯನ್ನು ಒದಗಿಸಲು ನೋಡುತ್ತಿವೆ. ಟಾಟಾ ಮೋಟಾರ್ಸ್‌ನಿಂದ ಹಿಡಿದು ಮಹೀಂದ್ರಾವರೆಗೆ ಎಲ್ಲಾ ಬ್ರಾಂಡ್‌ಗಳು ಸುರಕ್ಷಿತ ಕಾರುಗಳನ್ನು ನೀಡಲು ಮುಂದಾಗುತ್ತಿವೆ. ಇದರ ಸಾಲಿನಲ್ಲಿ ಈಗ ಮಾರುತಿ ಕೂಡ ತನ್ನ ಡಿಜೈರ್ ಅನ್ನು 5-ಸ್ಟಾರ್ ರೇಟಿಂಗ್‌ನ ಸುರಕ್ಷಿತ ಕಾರಾಗಿ ನೀಡಿ ಎಲ್ಲರನ್ನು ಅಚ್ಚರಿಗೊಳಿಸಿದೆ. ಸದ್ಯ ಭಾರತದಲ್ಲಿ 8 ಲಕ್ಷದೊಳಗೆ ಸಿಗುವ ಬೆಸ್ಟ್‌ ಸುರಕ್ಷಿತ ಎಸ್‌ಯುವಿಯ ಬಗ್ಗೆ ಇಲ್ಲಿ ವಿವರಸಿದ್ದೇವೆ. ಇದು ಮಹೀಂದ್ರಾ ನೀಡುವ ಅತ್ಯುತ್ತಮ 5-ಸ್ಟಾರ್ ರೇಟಿಂಗ್‌ನ ಕಾರಾಗಿದೆ.

ಮಹೀಂದ್ರಾ ಎಕ್ಸ್‌ಯುವಿ 3XO (Mahindra XUV3XO) ಸದ್ಯ ಭಾರತದಲ್ಲಿ ಅತ್ಯಂತ ಸುರಕ್ಷಿತ ಎಸ್‌ಯುವಿಗಳಲ್ಲಿ ಒಂದಾಗಿದೆ. ಭಾರತ್ NCAP ಕ್ರ್ಯಾಶ್ ಟೆಸ್ಟ್‌ನಲ್ಲಿ ಮಹೀಂದ್ರಾ XUV3XO ಪರಿಪೂರ್ಣ 5-ಸ್ಟಾರ್ ರೇಟಿಂಗ್ ಅನ್ನು ಗಳಿಸಿದೆ. ವಯಸ್ಕ ಪ್ರಯಾಣಿಕರ ರಕ್ಷಣೆಯಲ್ಲಿ 32 ಅಂಕಗಳಿಗೆ 29.36 ಅಂಕಗಳು ಮತ್ತು ಮಕ್ಕಳ ರಕ್ಷಣೆಯಲ್ಲಿ 49 ಅಂಕಗಳಿಗೆ 43 ಅಂಕಗಳನ್ನು ಗಳಿಸಿದೆ.

5-star-rated-safest-car-mahindra-xuv-3x0-deatis

ಮಹೀಂದ್ರಾ XUV 3XO ಎಸ್‍ಯುವಿಯ ಸುರಕ್ಷತ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ ಲೆವೆಲ್ 2 ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ತಂತ್ರಜ್ಞಾನವನ್ನು ಹೊಂದಿದೆ. ಹೆಚ್ಚುವರಿಯಾಗಿ, ಹೊಸ ಮಹೀಂದ್ರಾ ಸಬ್‌ಕಾಂಪ್ಯಾ ಎಸ್‍ಯುವಿಯಲ್ಲಿ ಆರು ಏರ್‌ಬ್ಯಾಗ್‌ಗಳು, 360-ಡಿಗ್ರಿ ಕ್ಯಾಮೆರಾ, EBD ಜೊತೆಗೆ ABS, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್ ಮತ್ತು ಬ್ರೇಕ್ ಡಿಸ್ಕ್ ವೈಪಿಂಗ್ ಹೊಂದಿದೆ.

ಈ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.7.79 ಲಕ್ಷಗಳಾಗಿದೆ. ಟಾಪ್‌ ಎಂಡ್‌ ವೇರಿಯಿಂಟ್‌ಗೆ ರೂ.15.49 (ಎಕ್ಸ್ ಶೋರೂಂ) ಲಕ್ಷಗಳಾಗಿದೆ. ಸ್ಟ್ಯಾಂಡರ್ಡ್ ಆಗಿ 6 ಏರ್‌ಬ್ಯಾಗ್‌ಗಳು, ಐಎಸ್‌ಒಫಿಕ್ಸ್ ಸೀಟ್ ಆಂಕರ್‌ಗಳು, ಇಎಸ್‌ಪಿ ಮತ್ತು ಹಿಂಭಾಗದ ಡಿಸ್ಕ್ ಬ್ರೇಕ್‌ಗಳಂತಹ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

5-star-rated-safest-car-mahindra-xuv-3x0-deatis

ಫೀಚರ್ಸ್ ವಿಷಯಕ್ಕೆ ಬಂದರೆ, ವೈರ್‌ಲೆಸ್ ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಯೊಂದಿಗೆ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡ್ಯುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಆಂಬಿಯೆಂಟ್ ಸೌಂಡ್ ಮೋಡ್‌ಗಳು, ಹಿಂದಿನ ಎಸಿ ವೆಂಟ್‌ಗಳು, ನವೀಕರಿಸಿದ 7-ಸ್ಪೀಕರ್ ಹರ್ಮನ್ ಕಾರ್ಡನ್ ಮ್ಯೂಸಿಕ್ ಸಿಸ್ಟಮ್, 10.25-ಇಂಚಿನ ಸಂಪೂರ್ಣ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ಇನ್ನಷ್ಟು ಫಿಚರ್ಸ್ ಗಳನ್ನು ಹೊಂದಿವೆ.

ಎಂಜಿನ್: ಈ ಮಹೀಂದ್ರಾ XUV 3XO ಎಸ್‍ಯುವಿ 1.2 ಲೀಟರ್ ಟರ್ಬೊ ಪೆಟ್ರೋಲ್, 1.2 ಟರ್ಬೊ GDi ಪೆಟ್ರೋಲ್ ಎಂಜಿನ್ ಮತ್ತು 1.5 ಡೀಸೆಲ್ ಎಂಜಿನ್ ಎಂಬ ಮೂರು ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 108 bhp ಮತ್ತು 200 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

5-star-rated-safest-car-mahindra-xuv-3x0-deatis

ಇದರೊಂದಿಗೆ 1.2 ಟರ್ಬೊ GDi ಪೆಟ್ರೋಲ್ ಎಂಜಿನ್ ಎಂಜಿನ್ 129 bhp ಮತ್ತು 230 Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.5-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ 115 bhp ಮತ್ತು 300 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಮತ್ತು 6-ಸ್ಪೀಡ್ AMT ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಲಭ್ಯವಿದೆ.ಈ ಎಸ್‍ಯುವಿಯು 18.89 ಕಿ.ಮೀ ಮತ್ತು 20.1 ಕಿ.ಮೀ ಮೈಲೇಜ್ ನೀಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, February 24, 2025, 9:54 [IST]
English summary
5 star rated safest car mahindra xuv 3x0 deatis
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+