ಅತ್ಯಂತ ಗಟ್ಟಿಮುಟ್ಟಾಗಿರುವ 5-ಸ್ಟಾರ್ ಸೇಫ್ಟಿ ಕಾರುಗಳಿವು.. ಈ ಪಟ್ಟಿಯನ್ನು ಒಮ್ಮೆ ಪರಿಶೀಲಿಸಿರಿ

ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆಯಾಗಿ ಭಾರತ್ ಎನ್‌ಸಿಎಪಿ (Bharat NCAP) ಗುರುತಿಸಿಕೊಂಡಿದೆ. ವಿವಿಧ ಮಾನದಂಡಗಳ ಅನ್ವಯ ಕಾರುಗಳಿಗೆ 'ಸೇಫ್ಟಿ ರೇಟಿಂಗ್'ನ್ನು ನೀಡುತ್ತದೆ. ದೇಶೀಯ ಮಾರುಕಟ್ಟೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ಟಾಟಾ ಪಂಚ್ ಇವಿ, ಮಹೀಂದ್ರಾ ಎಕ್ಸ್‌ಯುವಿ400 ಇವಿ, ಕಿಯಾ ಸೈರಸ್, ಸ್ಕೋಡಾ ಕೈಲಾಕ್, ಮಹೀಂದ್ರಾ ಥಾರ್ ರಾಕ್ಸ್ ಮತ್ತು ಟಾಟಾ ಸಫಾರಿಗಳನ್ನು ಅತ್ಯಂತ ಸುರಕ್ಷಿತ ಕಾರೆಂದು ಕೂಡ ತೀರ್ಮಾನ ಮಾಡಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಟಾಟಾ ಪಂಚ್ ಇವಿ (Tata Punch EV): ಈ ಕಾರನ್ನು ಭಾರತ್ ಎನ್‌ಸಿಎಪಿ ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 31.46 ಹಾಗೂ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 45 ಅಂಕಗಳನ್ನು ನೀಡುವ ಮೂಲಕ 5-ಸೇಫ್ಟಿ ರೇಟಿಂಗ್‌ನ್ನು ನೀಡಿದೆ.

5-Star Safety Cars Punch EV XUV400 Syros Kylaq Safari And Thar Roxx

ಈ ಟಾಟಾ ಪಂಚ್ ಇವಿ ಹತ್ತಾರು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಮಾನಿಟರಿಂಗ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಹಿಲ್ ಡಿಸೆಂಟ್ ಕಂಟ್ರೋಲ್‌ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ನೂತನ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರು, ಕನಿಷ್ಠ ರೂ.9.99 ಲಕ್ಷ ಮತ್ತು ಗರಿಷ್ಠ ರೂ.14.44 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 25 ಕೆಡಬ್ಲ್ಯೂಹೆಚ್ ಹಾಗೂ 35 ಕಿಲೋವ್ಯಾಟ್ ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 315 ರಿಂದ 421 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇನ್ಫೋಟೈನ್‌ಮೆಂಟ್ & ಇನ್‌ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್ಪ್ಲೇಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

5-Star Safety Cars Punch EV XUV400 Syros Kylaq Safari And Thar Roxx

ಮಹೀಂದ್ರಾ ಎಕ್ಸ್‌ಯುವಿ400 ಇವಿ (Mahindra XUV400 EV): ಈ ಕಾರು ಕೂಡ ಸುರಕ್ಷತೆಗೆ ಹೆಸರುವಾಸಿಯಾಗಿದ್ದು, ಭಾರತ್ ಎನ್‌ಸಿಎಪಿಯಿಂದ 5-ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಬಹುಮುಖ್ಯವಾಗಿ ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 30.38 ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 43 ಅಂಕಗಳನ್ನು ಗಳಿಸಿದೆ.

ಹೊಸ ಮಹೀಂದ್ರಾ ಎಕ್ಸ್‌ಯುವಿ400 ಎಲೆಕ್ಟ್ರಿಕ್ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ.

5-Star Safety Cars Punch EV XUV400 Syros Kylaq Safari And Thar Roxx

ಈ ಮಹೀಂದ್ರಾ ಎಕ್ಸ್‌ಯುವಿ400 ಇವಿ ರೂ.16.74 ಲಕ್ಷದಿಂದ ರೂ.17.69 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 34.5 ಕೆಡಬ್ಲ್ಯೂಹೆಚ್ ಮತ್ತು 39.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 375 ರಿಂದ 456 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಕಿಯಾ ಸೈರಸ್ (Kia Syros): ಈ ಕಾರು ಸಹ ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ ಸುರಕ್ಷಿತ ಕಾರಾಗಿ ಹೊರಹೊಮ್ಮಿದೆ. ಇದು ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 30.21 ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 44.42 ಅಂಕಗಳನ್ನು ಗಳಿಸಿದೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ತನ್ನದಾಗಿಸಿಕೊಂಡಿದೆ.

5-Star Safety Cars Punch EV XUV400 Syros Kylaq Safari And Thar Roxx

ನೂತನ ಕಿಯಾ ಸೈರಸ್ ಎಸ್‌ಯುವಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹೆಚ್ಎಸ್ಎ (ಹಿಲ್ ಸ್ಟಾರ್ಟ್ ಅಸಿಸ್ಟ್), ವಿಎಸ್ಎಂ (ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್‌ಮೆಂಟ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಹೊಸ ಸೈರಸ್ ಕಾರು ಕನಿಷ್ಠ ರೂ.8.99 ಲಕ್ಷ ಮತ್ತು ಗರಿಷ್ಠ ರೂ.17.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ.

ಸ್ಕೋಡಾ ಕೈಲಾಕ್ (Skoda Kylaq): ಇದೊಂದು ಜನಪ್ರಿಯ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಗಳಿಸಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 30.38 ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 43 ಅಂಕಗಳನ್ನು ಪಡೆದಿದೆ.

5-Star Safety Cars Punch EV XUV400 Syros Kylaq Safari And Thar Roxx

ಈ ಸ್ಕೋಡಾ ಕೈಲಾಕ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಎಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ಚೈಲ್ಡ್ ಸೀಟ್ ಮೌಂಟ್‌ಗಳು, ಹಿಲ್ ಹೋಲ್ಡ್ ಕಂಟ್ರೋಲ್, ಇಡಿಎಸ್ (ಎಲೆಕ್ಟ್ರಾನಿಕ್ ಡಿಫರೆನ್ಷಿಯಲ್ ಲಾಕಿಂಗ್ ಸಿಸ್ಟಮ್), ಎಂಎಸ್ಆರ್ (ಮೋಟಾರ್ ಸ್ಲಿಪ್ ರೆಗ್ಯುಲೇಷನ್) ಮತ್ತು ರೋಲ್ ಓವರ್ ಪ್ರೊಟೆಕ್ಷನ್, ಡಿಸ್ಕ್/ ಡ್ರಮ್‌ ಬ್ರೇಕ್‌ಗಳನ್ನು ಒಳಗೊಂಡಿದೆ.

ಟಾಟಾ ಸಫಾರಿ (Tata Safari): ಇದು ಶಕ್ತಿಯುತವಾದ ಎಸ್‌ಯುವಿಯಾಗಿದೆ. ಭಾರತ್ ಎನ್‌ಸಿಎಪಿಯ ವಯಸ್ಕರ ರಕ್ಷಣೆ ವಿಭಾಗದಲ್ಲಿ ಗರಿಷ್ಠ 32ಕ್ಕೆ 30.08 ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 44.54 ಅಂಕಗಳನ್ನು ಪಡೆದಿದೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದಿದೆ.

5-Star Safety Cars Punch EV XUV400 Syros Kylaq Safari And Thar Roxx

ನೂತನ ಟಾಟಾ ಸಫಾರಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಸೆಕೆಂಡ್ ರೋ ಐಎಸ್ಒಎಫ್ಐಎಕ್ಸ್ ಚೈಲ್ಡ್ ಸೀಟ್ ಆಂಕಾರೇಜ್‌, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್‌) ಹಿಲ್ ಅಸಿಸ್ಟ್ ಮತ್ತು 360-ಡಿಗ್ರಿವನ್ನು ಪಡೆದಿದೆ.

ಹೊಸ ಟಾಟಾ ಸಫಾರಿ ಎಸ್‌ಯುವಿ ಕನಿಷ್ಠ ರೂ.15.50 ಲಕ್ಷದಿಂದ ರೂ.27.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 14.50 ರಿಂದ 16.30 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಡುಯಲ್-ಜೋನ್ ಆಟೋಮೆಟಿಕ್ ಎಸಿ ಮತ್ತು ಸನ್‌ರೂಫ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಮಹೀಂದ್ರಾ ಥಾರ್ ರಾಕ್ಸ್ (Mahindra Thar Roxx): ಇದೊಂದು ಎಸ್‌ಯುವಿಯಾಗಿದೆ. ಭಾರತ್ ಎನ್‌ಸಿಎಪಿ ನಡೆಸಿದ್ದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 31.09 ಅಂಕಗಳು ಹಾಗೂ ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 45 ಅಂಕಗಳನ್ನು ಗಳಿಸಿದೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ.

ಈ ಮಹೀಂದ್ರಾ ಥಾರ್ ರಾಕ್ಸ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), 4 ಡಿಸ್ಕ್ ಬ್ರೇಕ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), 3-ಪಾಯಿಂಟ್ ಸೀಟ್‌ ಬೆಲ್ಟ್‌ಗಳು ಮತ್ತು 360-ಡಿಗ್ರಿ ಸರೌಂಡ್ ವ್ಯೂ ಸಿಸ್ಟಮ್‌ನ್ನು ಹೊಂದಿದೆ. ನೂತನ ಥಾರ್ ರಾಕ್ಸ್ ರೂ.12.99 ಲಕ್ಷದಿಂದ ರೂ.23.09 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, April 18, 2025, 18:30 [IST]
English summary
5 star safety cars punch ev xuv400 syros kylaq safari and thar roxx
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+