5-ಸ್ಟಾರ್ ಸೇಫ್ಟಿ, 8-ಸೀಟರ್.. ಟೊಯೊಟಾ ಇನ್ನೋವಾ ಹೈಕ್ರಾಸ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross), ವಿಶ್ವಾಸಾರ್ಹ ಎಂಪಿವಿಯಾಗಿ ಹೊರಹೊಮ್ಮಿದೆ. ಇತ್ತೀಚೆಗೆ ಭಾರತ್ ಎನ್‌ಸಿಎಪಿ (Bharat NCAP), ಇದೇ 'ಇನ್ನೋವಾ ಹೈಕ್ರಾಸ್'ನ್ನು ಅತ್ಯಂತ ಸುರಕ್ಷಿತ ಕಾರೆಂದು ತೀರ್ಮಾನಿಸಿದ್ದು, 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ. ನೀವು ಈ ಹೊಚ್ಚ ಹೊಸ ಎಂಪಿವಿಯನ್ನು ಖರೀದಿಸಲು ಆಲೋಚಿಸಿದ್ದೀರಾ.. ನಾವಿಲ್ಲಿ, ಇದರ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ನೂತನ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ ವಿವಿಧ ರೂಪಾಂತರಗಳ ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಈ ಕಾರಿನ 7-ಸೀಟರ್ 'ಜಿ' (ಪೆಟ್ರೋಲ್) ರೂಪಾಂತರ, ರೂ.19.09 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಕೊಂಡುಕೊಂಡರೆ, ರೂ.14 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.28,000 ವರೆಗೆ ಇಎಂಐ ಕಟ್ಟಬೇಕು.

ಇದೇ ಇನ್ನೋವಾ ಹೈಕ್ರಾಸ್ ಕಾರಿನ 8-ಸೀಟರ್ 'ಜಿಎಕ್ಸ್' (ಪೆಟ್ರೋಲ್) ರೂಪಾಂತರ, ರೂ.24.60 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.19 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಗಳಿಗೆ ಮಾಸಿಕ ರೂ.39,000 ವರೆಗೆ ಇಎಂಐ ಪಾವತಿ ಮಾಡಬೇಕು.
ಈ ಎಂಪಿವಿಯ 7-ಸೀಟರ್ 'ವಿಎಕ್ಸ್' ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ರೂಪಾಂತರ, ರೂ.33 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮನೆಗೆ ತಂದರೆ, ರೂ.28 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.57,000 ವರೆಗೆ ಇಎಂಐ ಕಟ್ಟಬೇಕು.

ಟೊಯೊಟಾ ಇನ್ನೋವಾ ಹೈಕ್ರಾಸ್ ಕಾರಿನ 8-ಸೀಟರ್ ವಿಎಕ್ಸ್(ಒ) ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ರೂಪಾಂತರ, ರೂ.35 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.5 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.30 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.62,000 ವರೆಗೆ ಇಎಂಐ ಪಾವತಿಸಬೇಕು.
ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ ವಿಶೇಷತೆಗಳೇನು:
ಇದೊಂದು ಬೃಹತ್ ಗಾತ್ರದ ಎಂಪಿವಿಯಾಗಿದೆ. ತುಂಬಾ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಪ್ಲಾಟಿನಂ ವೈಟ್ ಪರ್ಲ್, ಅಟಿಟ್ಯೂಡ್ ಬ್ಲ್ಯಾಕ್ ಮೈಕಾ ಹಾಗೂ ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 2.0-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 2.0-ಲೀ. ಹೈಬ್ರಿಡ್ (ಎಲೆಕ್ಟ್ರಿಕ್+ಪೆಟ್ರೋಲ್) ಎಂಜಿನ್‌ನ್ನು ಪಡೆದಿದೆ. 23 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಈ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.1-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (7-ಇಂಚು), ಡುಯಲ್ - ಜೋನ್ ಆಟೋ ಎಸಿ, ಸನ್‌ರೂಫ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಮತ್ತು ರೇರ್-ಎಸಿ ವೆಂಟ್‌ಗಳನ್ನು ಪಡೆದಿದೆ.
ನೂತನ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿಯು ಭಾರತ್ ಎನ್‌ಸಿಎಪಿ ನಡೆದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 30.47 ಅಂಕಗಳನ್ನು ಗಳಿಸಿದೆ. ಹಾಗೆಯೇ ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 45 ಅಂಕಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ನಿಮ್ಮ ಗಮನಕ್ಕೆ.. ನಾವಿಲ್ಲಿ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿಯ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications