5-ಸ್ಟಾರ್ ಸೇಫ್ಟಿ ಮಾರುತಿ ಡಿಜೈರ್ ಕಾರಿಗಾಗಿ ಸಾಲುಗಟ್ಟಿದ ಗ್ರಾಹಕರು.. 33.73 ಕಿ.ಮೀ ಮೈಲೇಜ್.. 6.79 ಲಕ್ಷ ಬೆಲೆ!

ಮಾರುತಿ ಸುಜುಕಿ ಇಂಡಿಯಾ (Maruti Suzuki India), ನಂಬರ್ 1 ಕಾರು ತಯಾರಕ ಕಂಪನಿಯಾಗಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಎಸ್‌ಯುವಿಗಳು ಭಾರೀ ಜನಪ್ರಿಯತೆ ಹೊಂದಿವೆ. ಅದರ ಹೊರತಾಗಿಯೂ ಕಂಪನಿಯು 2024ರ ನವೆಂಬರ್‌ನಲ್ಲಿ ಹೊಚ್ಚ ಹೊಸ ನಾಲ್ಕನೇ ತಲೆಮಾರಿನ ಡಿಜೈರ್ ಸೆಡಾನ್‌ನ್ನು ಅದ್ದೂರಿಯಾಗಿ ಮಾರಾಟಕ್ಕೆ ತಂದಿತ್ತು. ಇದು ಬಿಡುಗಡೆಗೂ ಮುನ್ನವೇ ಸುರಕ್ಷತೆಗಾಗಿ ಗ್ಲೋಬಲ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿತ್ತು. ಇತ್ತೀಚೆಗೆ ಪ್ರಕಟಗೊಂಡ ಡಿಸೆಂಬರ್ ತಿಂಗಳ ಕಾರು ಮಾರಾಟ ವರದಿಯಲ್ಲಿ ನೂತನ 'ಡಿಜೈರ್' ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕಳೆದ ತಿಂಗಳು (ಡಿಸೆಂಬರ್ - 2024) ಮಾರುತಿ ಸುಜುಕಿ ಕಂಪನಿಯು ಸರಿ ಸುಮಾರು 16,573 ಯುನಿಟ್ ಡಿಜೈರ್ ಸೆಡಾನ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 14,012 ಯುನಿಟ್‌ಗಳಿಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 18% ಪ್ರಗತಿ ಸಾಧಿಸಲಾಗಿದೆ.

5 Star Seafty Maruti Suzuki Dzire Sedan December 2024 Sales Report 18 Percent Growth

2024 ನವೆಂಬರ್‌ನಲ್ಲಿ 11,779 ಯುನಿಟ್ ಮಾರುತಿ ಸುಜುಕಿ ಡಿಜೈರ್ ಸೆಡಾನ್‌ಗಳು ಮಾರಾಟಗೊಂಡಿದ್ದವು. ಅದಕ್ಕೆ ಹೋಲಿಕೆ ಮಾಡಿದರೆ, ತಿಂಗಳಿನಿಂದ ತಿಂಗಳಿಗೆ ಮಾರಾಟ ಪ್ರಮಾಣ ಎಷ್ಟೋ ಪ್ರತಿಶತದಷ್ಟು ಬೆಳವಣಿಗೆಯಾಗಿದೆ. ಇದು ಮಾತ್ರವಲ್ಲದೆ, ಜನವರಿಯಿಂದ ನವೆಂಬರ್‌ವರೆಗೆ ಬರೋಬ್ಬರಿ 1,51,415 ಯುನಿಟ್ ಡಿಜೈರ್ ಕಾರುಗಳು ಕೂಡ ಮಾರಾಟವಾಗಿದ್ದವು.

ನೂತನ ಮಾರುತಿ ಸುಜುಕಿ ಡಿಜೈರ್ ಸೆಡಾನ್‌ ದಿನದಿಂದ ದಿನಕ್ಕೆ ಉತ್ತಮ ಸಂಖ್ಯೆಯಲ್ಲಿಯೂ ಬುಕ್ಕಿಂಗ್‌ಗಳನ್ನು ಪಡೆದುಕೊಳ್ಳುತ್ತಿದೆ. ಪ್ರತಿನಿತ್ಯ 1,000 ಖರೀದಿದಾರರು ಈ ಕಾರನ್ನು ಆರ್ಡರ್ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಮೊದಲು ಬುಕ್ಕಿಂಗ್ ಆರಂಭಿಸಿದ ಕೆಲವೇ ಗಂಟೆಗಳಲ್ಲಿ 30,000ಕ್ಕೂ ಅಧಿಕ ಗ್ರಾಹಕರು ನೂತನ ಸೆಡಾನ್‌ನ್ನು ಕಾಯ್ದಿರಿಸಿದ್ದರು.

5 Star Seafty Maruti Suzuki Dzire Sedan December 2024 Sales Report 18 Percent Growth

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಹೊಸ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಸೆಡಾನ್‌, ಕನಿಷ್ಠ ರೂ.6.79 ಲಕ್ಷ ಮತ್ತು ಗರಿಷ್ಠ ರೂ.10.14 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24.79 ರಿಂದ 33.73 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣ ಮಾಡಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 382 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಮತ್ತು ಆಟೋ ಎಸಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

5 Star Seafty Maruti Suzuki Dzire Sedan December 2024 Sales Report 18 Percent Growth

ಗ್ಲೋಬಲ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದ ಮಾರುತಿ ಸುಜುಕಿಯ ಮೊದಲ ಕಾರಾಗಿಯೂ ಈ 'ಡಿಜೈರ್' ಹೊರಹೊಮ್ಮಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 34ಕ್ಕೆ 31.24 ಅಂಕಗಳನ್ನು ಪಡೆಯುವುದರೊಂದಿಗೆ 5-ಸ್ಟಾರ್ ರೇಟಿಂಗ್ ಗಳಿಸಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 42ಕ್ಕೆ 39.20 ಅಂಕಗಳನ್ನು ಪಡೆದು 4-ಸ್ಟಾರ್ ರೇಟಿಂಗ್‌ನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, January 4, 2025, 21:19 [IST]
English summary
5 star seafty maruti suzuki dzire sedan december 2024 sales report 18 percent growth
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+