ಫ್ರೆಂಡ್ಸ್.. 6 ಲಕ್ಷಕ್ಕಿಂತ ಕಡಿಮೆ ಬೆಲೆ.. 6 ಏರ್‌ಬ್ಯಾಗ್‌ನ ಈ ಜನಪ್ರಿಯ ಕಾರುಗಳನ್ನು ತೆಗೆದುಕೊಳ್ಳಬಹುದು!
ಹೊಚ್ಚ ಹೊಸ ಕಾರನ್ನು ತೆಗೆದುಕೊಳ್ಳುವ ಬಹುತೇಕರು, ಅದರಲ್ಲಿ ಜೀವರಕ್ಷಕ ಸಾಧನ 6-ಏರ್‌ಬ್ಯಾಗ್‌ಗಳು ಇರಬೇಕೆಂದು ಬಯಸುತ್ತಾರೆ. ಆದರೆ ಈ ರೀತಿಯ ಸುರಕ್ಷತಾ ವೈಶಿಷ್ಟ್ಯವನ್ನು ಹೊಂದಿರುವ ಕಾರುಗಳು, ಕೊಂಚ ದುಬಾರಿ ಬೆಲೆಯನ್ನು ಹೊಂದಿರುತ್ತವೆ. ಸದ್ಯ, ಹಲವು ಕಂಪನಿಗಳು ಕಡಿಮೆ ದರದಲ್ಲಿಯೇ ಅಂದರೆ ರೂ.6 ಲಕ್ಷದೊಳಗೆ ಆರು ಏರ್‌ಬ್ಯಾಗ್ ಆಯ್ಕೆಯನ್ನು ಪಡೆದಿರುವ ವಿವಿಧ ಕಾರುಗಳನ್ನು ಕೂಡ ಮಾರಾಟಕ್ಕೆ ತರುತ್ತಿವೆ. ನಾವಿಲ್ಲಿ ಅಂತಹದ್ದೇ ಕೆಲವೊಂದು ಜನಪ್ರಿಯ ಕಾರುಗಳ ಕುರಿತಂತೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10): ಇದೊಂದು ಹ್ಯಾಚ್‌ಬ್ಯಾಕ್ ಆಗಿದ್ದು, ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಎಲ್ಲ ರೂಪಾಂತರಗಳಲ್ಲಿ (ವೇರಿಯೆಂಟ್) 6-ಏರ್‌ಬ್ಯಾಗ್‌ನ್ನು ನೀಡಲಾಗಿದೆ. ಇದರೊಟ್ಟಿಗೆ ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ರೇರ್ ಪ್ಯಾಸೆಂಜರ್‌ಗಳಿಗಾಗಿ 3-ಪಾಯಿಂಟ್ ಸೀಟ್ ಬೆಲ್ಟ್‌ನಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಆಲ್ಟೊ ಕೆ10 ಕಾರು ಕನಿಷ್ಠ ರೂ.4.23 ಲಕ್ಷ ಮತ್ತು ಗರಿಷ್ಠ ರೂ.6.21 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀ. ಸಾಮರ್ಥ್ಯದ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio): ಈ ಹ್ಯಾಚ್‌ಬ್ಯಾಕ್‌ನ್ನು ಗ್ರಾಹಕರು ಕೂಡ ಮೆಚ್ಚಿದ್ದಾರೆ. ಇದು ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

ನೂತನ ಸೆಲೆರಿಯೊ ಕಾರು ರೂ.5.64 ಲಕ್ಷದಿಂದ ರೂ.7.37 ಲಕ್ಷ (ಎಕ್ಸ್- ಶೋರೂಂ) ಬೆಲೆಯನ್ನು ಪಡೆದಿದೆ. 1-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24.97 ರಿಂದ 34.43 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಮ್ಯಾನುವಲ್ ಎಸಿ, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ, ಇದರಲ್ಲಿ 5 ಜನರು ಓಡಾಟ ನಡೆಸಬಹುದು.
ಮಾರುತಿ ಸುಜುಕಿ ಇಕೋ (Maruti Suzuki Eeco): ಇದು ಪ್ರಮುಖ ವ್ಯಾನ್ ಆಗಿದೆ. ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಫ್ರಂಟ್ ಸೀಟ್‌ಬೆಲ್ಟ್ ರಿಮೈಂಡರ್, ಸ್ಪೀಡ್ ಅಲರ್ಟ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಒಳಗೊಂಡಿದೆ.

ಹೊಸ ಮಾರುತಿ ಇಕೋ ವ್ಯಾನ್ ಕನಿಷ್ಠ ರೂ.5.44 ಲಕ್ಷ ಹಾಗೂ ಗರಿಷ್ಠ ರೂ.6.70 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.2-ಲೀ. ಸಾಮರ್ಥ್ಯದ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ಇದು ಬೈಕ್‌ನಂತೆ 19.71 ರಿಂದ 26.78 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸೆಮಿ ಡಿಜಿಟಲ್ ಸ್ಪೀಡೋಮೀಟರ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಈ ವ್ಯಾನ್ 5 ಅಥವಾ 7 ಆಸನದೊಂದಿಗೆ ಸಿಗುತ್ತದೆ.
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR): ಈ ಹ್ಯಾಚ್‌ಬ್ಯಾಕ್‌ನ್ನು ಎಲ್ಲ ವರ್ಗದ ಗ್ರಾಹಕರು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇದು 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ಹಿಲ್-ಹೋಲ್ಡ್ ಅಸಿಸ್ಟ್, ಸೀಟ್ ಬೆಲ್ಟ್ ವಾರ್ನಿಂಗ್, ಚೈಲ್ಡ್ ಲಾಕ್ ಮತ್ತು ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಸೇರಿದಂತೆ ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ವ್ಯಾಗನ್ಆರ್ ಕಾರು ರೂ.5.64 ಲಕ್ಷದಿಂದ ರೂ.7.47 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 23.56 ರಿಂದ 34.05 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಜನರು ಓಡಾಟ ನಡೆಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಮತ್ತು ಸ್ಟೀರಿಂಗ್ ಮೌಂಟೆಡ್ ಆಡಿಯೋನಂತಹ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ (Hyundai Grand i10 Nios): ಇದು ಸಹ ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದ್ದು, ಗರಿಷ್ಟ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ವಿಶೇಷವಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಐಎಸ್ಒಎಫ್ಐಎಕ್ಸ್ ಚೈಲ್ಡ್ ಸೀಟ್ ಮೌಂಟ್ ಆಯ್ಕೆಯನ್ನು ಒಳಗೊಂಡಿದೆ.
ನೂತನ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಕಾರು ರೂ.5.98 ರಿಂದ ರೂ.8.62 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 16 ರಿಂದ 27 ಕೆಎಂಪಿಎಲ್‌ವರೆಗೆ ಕೊಡುತ್ತದೆ. 8-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ - ಫೋನ್ ಚಾರ್ಜರ್ ಹಾಗೂ ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಕಾರಿನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು.

ಹ್ಯುಂಡೈ ಎಕ್ಸ್‌ಟರ್ (Hyundai Exter): ಈ ಎಸ್‌ಯುವಿಯೂ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮಖ್ಯವಾಗಿ 6 - ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ಸೀಟ್ ಬೆಲ್ಟ್ ರಿಮೈಂಡರ್‌ನ್ನು ಒಳಗೊಂಡಿದೆ.
ಈ ಹ್ಯುಂಡೈ ಎಕ್ಸ್‌ಟರ್ ಕಾರು ಕನಿಷ್ಠ ರೂ.6.21 ಲಕ್ಷ ಮತ್ತು ಗರಿಷ್ಠ ರೂ.10.51 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19.2 ರಿಂದ 27.1 ಕೆಎಂಪಿಎಲ್‌ವರೆಗೆ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋ ಎಸಿ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications