ನಮ್ಮೂರಿಗೂ ಸೈ.. ನಿಮ್ಮೂರಿಗೂ ಜೈ: 6 ಏರ್‌ಬ್ಯಾಗ್‌.. 8 ಲಕ್ಷದೊಳಗೆ ಸಿಗುವ ಸೇಫ್ಟಿ ಕಾರುಗಳಿವು!

ಇತ್ತೀಚಿನ ದಿನಗಳಲ್ಲಿ ಹೊಸ ಕಾರು ಖರೀದಿ ಮಾಡುವವರು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುತ್ತಾರೆ. ಇದೇ ಕಾರಣಕ್ಕೆ 6 ಏರ್‌ಬ್ಯಾಗ್‌ಗಳಿರುವ ಕಾರುಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ನೀವು 8 ಲಕ್ಷದೊಳಗೆ ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯ ಹೊಂದಿರುವ ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ರೆನಾಲ್ಟ್ ಟ್ರೈಬರ್, ಮಾರುತಿ ಸುಜುಕಿ ಆಲ್ಟೊ ಕೆ10, ಮಾರುತಿ ಸುಜುಕಿ ಡಿಜೈರ್, ಮಾರುತಿ ಸುಜುಕಿ ಸೆಲೆರಿಯೊ ಹಾಗೂ ಟಾಟಾ ಆಲ್ಟ್ರೋಜ್ ಕಾರುಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಒಂದಷ್ಟು ವಿವರಗಳನ್ನು ತಿಳಿಯೋಣ.

ರೆನಾಲ್ಟ್ ಟ್ರೈಬರ್ (Renault Triber):

ಇದೊಂದು 7-ಆಸನಗಳ ಕಾಂಪ್ಯಾಕ್ಟ್ ಎಂಪಿವಿಯಾಗಿದೆ. ಪ್ರಯಾಣಿಕರಿಗೂ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್ ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿದೆ.

6 Airbags Cars Under Rs 8 Lakhs Triber Alto K10 Dzire Celerio To Altroz

ಈ ಕಾರು ರೂ.6.29 ಲಕ್ಷದಿಂದ ರೂ.9.16 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಅಂಬರ್ ಟೆರಾಕೋಟಾ, ಜನ್ಸ್ಕರ್ ಬ್ಲೂ & ಶ್ಯಾಡೋ ಗ್ರೇ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 20 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು. 8-ಇಂಚಿನ ಪ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10):

ಇದು ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆ ಒದಗಿಸಬಲ್ಲದು. ಅದಕ್ಕಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರೇರ್ ಡೋರ್ ಚೈಲ್ಡ್ ಲಾಕ್ ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ.

6 Airbags Cars Under Rs 8 Lakhs Triber Alto K10 Dzire Celerio To Altroz

ನೂತನ ಆಲ್ಟೊ ಕೆ10 ರೂ.4.23 ಲಕ್ಷದಿಂದ ರೂ.6.21 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಸಿಗುತ್ತದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್ ಮತ್ತು ಮೆಟಾಲಿಕ್ ಗ್ರಾನೈಟ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ.

ಮಾರುತಿ ಸುಜುಕಿ ಡಿಜೈರ್ (Maruti Suzuki Dzire):

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 3-ಪಾಯಿಂಟ್ ಸೀಟ್ ಬೆಲ್ಟ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ರೂ.6.84 ಲಕ್ಷದಿಂದ ರೂ.10.19 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ.

6 Airbags Cars Under Rs 8 Lakhs Triber Alto K10 Dzire Celerio To Altroz

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio):

ಇದು ಅತಿ ಹೆಚ್ಚು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್‌ ಹಾಗೂ ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ. ರೂ. 5.64 ಲಕ್ಷದಿಂದ ರೂ.7.37 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ.

ಟಾಟಾ ಆಲ್ಟ್ರೋಜ್ (Tata Altroz):

ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕೂಡ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ರೂ.6.89 ಲಕ್ಷದಿಂದ ರೂ.11.49 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ.

Article Published On: Monday, August 11, 2025, 14:22 [IST]
English summary
This article highlights a selection of affordable cars featuring six airbags, all priced under INR 8 lakh. Key models include the Renault Triber, Maruti Suzuki Alto K10, and Tata Altroz, emphasising safety and performance.
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+