6 ಏರ್‌ಬ್ಯಾಗ್‌ನ ಜನಪ್ರಿಯ ಕಾರುಗಳಿವು.. ನಾಲ್ಕೇ ಲಕ್ಷ ಆರಂಭಿಕ ಬೆಲೆ, ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳು!
ಪ್ರಯಾಣಿಕರ ರಕ್ಷಣೆಗಾಗಿ ಏರ್‌ಬ್ಯಾಗ್‌ಗಳು ಮಹತ್ವದ ಪಾತ್ರವಹಿಸುತ್ತವೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ಬಹುತೇಕ ಎಲ್ಲ ಕಾರುಗಳು ಹೆಚ್ಚಿನ ಏರ್‌ಬ್ಯಾಗ್‌ಗಳು ಹಾಗೂ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿವೆ. ನೀವು ಬಜೆಟ್ ಬೆಲೆಯಲ್ಲಿ 6 ಏರ್‌ಬ್ಯಾಗ್‌ಗಳನ್ನು ಪಡೆದುಕೊಂಡಿರುವ ಕಾರನ್ನು ಖರೀದಿಸಲು ಯೋಚಿಸಿದ್ದೀರಾ.. ಹಾಗಾದರೆ ಮಾರುತಿ ಸುಜುಕಿ ಆಲ್ಟೊ, ಟಾಟಾ ಆಲ್ಟ್ರೋಜ್ ಹಾಗೂ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್‌ಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಬನ್ನಿ.. ಈ ಕಾರುಗಳ ವಿಶೇಷತೆಗಳ ಬಗ್ಗೆ ಸಂಕ್ಷಿಪ್ತವಾದ ಮಾಹಿತಿಯನ್ನು ತಿಳಿಯೋಣ.
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10): ಇದೊಂದು ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಒಳಗೊಂಡಿದೆ.

ನೂತನ ಮಾರುತಿ ಸುಜುಕಿ ಆಲ್ಟೊ ಕೆ10 ಕಾರು, ಕನಿಷ್ಠ ರೂ.4.23 ಲಕ್ಷ ಮತ್ತು ಗರಿಷ್ಠ ರೂ.6.21 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, 24.39 ರಿಂದ 33.85 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಟಾಟಾ ಆಲ್ಟ್ರೋಜ್ (Tata Altroz): ಇದು ಕೂಡ ಪ್ರಖ್ಯಾತ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಹೊಸ ಟಾಟಾ ಆಲ್ಟ್ರೋಜ್ ಕಾರು ರೂ.6.65 ಲಕ್ಷದಿಂದ ರೂ.11.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಇದು ಪೆಟ್ರೋಲ್, ಡೀಸೆಲ್ ಹಾಗೂ ಸಿಎನ್‌ಜಿ ಆಯ್ಕೆಯಲ್ಲಿ ದೊರೆಯುತ್ತದೆ. 19.33 ರಿಂದ 26.20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio): ಈ ಕಾರು ಸಹ ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ. 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.

ನೂತನ ಸೆಲೆರಿಯೊ ಹ್ಯಾಚ್‌ಬ್ಯಾಕ್, ಕನಿಷ್ಠ ರೂ.5.64 ಲಕ್ಷ ಹಾಗೂ ಗರಿಷ್ಠ ರೂ.7.37 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications