6-ಸೀಟರ್.. 2 ಕುಟುಂಬಕ್ಕೆ ಬೆಸ್ಟ್ ಕಾರಿದು, 6 ಏರ್‌ಬ್ಯಾಗ್‌ನ ಮಾರುತಿ ಎಕ್ಸ್ಎಲ್6 ಎಂಪಿವಿ ಕೊಳ್ಳಬೇಕೇ.. ಫುಲ್ ಡೀಟೇಲ್ಸ್

ಇತ್ತಿಚೆಗೆ ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6) ಎಂಪಿವಿಯನ್ನು ನವೀಕರಿಸಿ, ಪರಿಚಯಿಸಲಾಗಿತ್ತು. ಪ್ರಯಾಣಿಕರ ರಕ್ಷಣೆಗಾಗಿ ಸುರಕ್ಷತೆಯ ದೃಷ್ಟಿಯಿಂದ ಇದೇ ಕಾರಿನ ಎಲ್ಲ ರೂಪಾಂತರಗಳನ್ನು (ವೇರಿಯೆಂಟ್) 6 ಏರ್‌ಬ್ಯಾಗ್‌ಗಳೊಂದಿಗೆ ಮೇಲ್ದರ್ಜೆರಿಸಲಾಗಿದೆ. ನೀವು ಹೊಚ್ಚ ಹೊಸ 'ಎಕ್ಸ್ಎಲ್6' ಎಂಪಿವಿಯನ್ನು ಖರೀದಿ ಮಾಡಬೇಕೇ.. ನಾವಿಲ್ಲಿ ಈ ಕಾರಿನ ಬೆಲೆ, ವಿನ್ಯಾಸ, ಕಾರ್ಯಕ್ಷಮತೆ, ಮೈಲೇಜ್ ಹಾಗೂ ವೈಶಿಷ್ಟ್ಯಗಳ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.

ಬೆಲೆ & ರೂಪಾಂತರಗಳು (Price & Variants):

ಈ ಎಂವಿಪಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಇದು ರೂ.11.93 ಲಕ್ಷದಿಂದ ರೂ.14.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಜಿಟಾ, ಆಲ್ಫಾ ಮತ್ತು ಆಲ್ಫಾ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

6 Airbags Maruti Suzuki Xl6 Price Design Engine Features And All Top Things

ವಿನ್ಯಾಸ & ಬಣ್ಣಗಳು (Design & Colors):

ಇದು ಹೊರಭಾಗದಲ್ಲಿ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಆಫ್ಯುಲೆಂಟ್ ರೆಡ್, ಬ್ರೇವ್ ಖಾಕಿ, ಗ್ರ್ಯಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್ ಮತ್ತು ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ ಬಣ್ಣಗಳನ್ನು ಪಡೆದಿದೆ.

ಸುತ್ತಳತೆ (Dimensions):

ನೂತನ ಮಾರುತಿ ಎಕ್ಸ್ಎಲ್6 ಎಂಪಿವಿಯು 4,445 ಎಂಎಂ ಉದ್ದ, 1775 ಎಂಎಂ ಅಗಲ ಮತ್ತು 1755 ಎಂಎಂ ಎತ್ತರವು ಇದೆ. ಜೊತೆಗೆ 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2740 ವೀಲ್‌ಬೇಸ್‌ನ್ನು ಪಡೆದಿದೆ. 45 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ.

6 Airbags Maruti Suzuki Xl6 Price Design Engine Features And All Top Things

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಇದರಲ್ಲಿ 6 ಆಸನಗಳಿವೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ ಆಯ್ಕೆಯನ್ನು ಹೊಂದಿದೆ. ಮೂರನೇ ಸಾಲಿನ ಆಸನಗಳನ್ನು ಮಡಚಿದರೇ 550 ಲೀಟರ್‌ಗಳಿಗೆ ವಿಸ್ತರಿಸಬಹುದು.

ಕಾರ್ಯಕ್ಷಮತೆ (Performance):

ನೂತನ ಕಾರು ಶಕ್ತಿಯುತವಾದ ಎರಡು ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್, 102 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 137 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20.97 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

6 Airbags Maruti Suzuki Xl6 Price Design Engine Features And All Top Things

ಇನ್ನೊಂದು 1.5-ಲೀಟರ್ ಸಿಎನ್‌ಜಿ ಎಂಜಿನ್, 87 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 121 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 26.32 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.

ವೈಶಿಷ್ಟ್ಯಗಳು (Features):

ಈ ಕಾರಿನ ಕ್ಯಾಬಿನ್ ನೋಡುಗರ ಸೆಳೆಯುವಂತಿದೆ. ಇದರೊಂದಿಗೆ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, ಪ್ಯಾಡಲ್ ಶಿಫ್ಟರ್ಸ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಎಸಿನಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಇದು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಸೀಟ್ ಬೆಲ್ಟ್ ವಾರ್ನಿಂಗ್, ಹಿಲ್ ಹೋಲ್ಡ್ ಅಸಿಸ್ಟ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Article Published On: Sunday, July 27, 2025, 8:30 [IST]
English summary
6 airbags maruti suzuki xl6 price design engine features and all top things
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+