7-ಸೀಟುಗಳು, 490 Km ರೇಂಜ್, ಕಮ್ಮಿ ಬೆಲೆಯ ಹೊಸ Kia Carens Clavis ಎಲೆಕ್ಟ್ರಿಕ್ ಕಾರಿನ ಕುರಿತ ಪ್ರಮುಖಾಂಶಗಳಿವು!

ಇತ್ತೀಚೆಗೆ ಬಹುನಿರೀಕ್ಷಿತ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿಯನ್ನು ಮಾರಾಟಕ್ಕೆ ತರಲಾಗಿತ್ತು. ಈ ಎಲೆಕ್ಟ್ರಿಕ್ ಎಂಪಿವಿ ತುಂಬಾ ಚೆನ್ನಾಗಿರುವ ವಿನ್ಯಾಸ ಹಾಗೂ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಅತಿ ಕಡಿಮೆ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದ್ದು, ಒಂದು ತುಂಬು ಕುಟುಂಬ ಸುಲಭವಾಗಿ ಪ್ರಯಾಣಿಸಲು ಸಾಧ್ಯವಾಗಲಿದೆ. ನಾವಿಲ್ಲಿ ಹೊಚ್ಚ ಹೊಸ 'ಕ್ಯಾರೆನ್ಸ್ ಕ್ಲಾವಿಸ್ ಇವಿ'ಯ ಬೆಲೆ ಹಾಗೂ ವಿಶೇಷತೆಗಳ ಕುರಿತಾದ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.

ಬೆಲೆ & ರೂಪಾಂತರಗಳು (Price & Variants):

ನೂತನ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ (Kia Carens Clavis EV) ಬಜೆಟ್ ಬೆಲೆಯಲ್ಲಿ ಬಿಡುಗಡೆಗೊಂಡಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಕೊಂಡುಕೊಳ್ಳಬಹುದಾಗಿದೆ. ಕನಿಷ್ಠ ರೂ.17.99 ಲಕ್ಷ ಹಾಗೂ ಗರಿಷ್ಠ ರೂ. 24.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ & ಹೆಚ್‌ಟಿಎಕ್ಸ್ ಪ್ಲಸ್ ಎಂಬ ರೂಪಾಂತರಗಳೊಂದಿಗೂ (ವೇರಿಯೆಂಟ್) ದೊರೆಯುತ್ತದೆ.

7 Seater Kia Carens Clavis Electric Mpv Top Things Details

ವಿನ್ಯಾಸ & ಬಣ್ಣಗಳು (Design & Colors):

ಈ ಹೊಸ ಎಂಪಿವಿಯು ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ತ್ರೈ ಅಂಗುಲರ್ ಶೇಪ್ಡ್ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಗ್ರಾವಿಟಿ ಗ್ರೇ, ಅರೋರಾ ಬ್ಲ್ಯಾಕ್ ಪರ್ಲ್, ಪ್ಯೂಟರ್ ಆಲಿವ್ ಹಾಗೂ ಇಂಪೀರಿಯಲ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ.

ಕಾರ್ಯಕ್ಷಮತೆ (Performance):

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 42 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರುವ ಮಾಡೆಲ್, ಪೂರ್ತಿ ಚಾರ್ಜ್‌ನಲ್ಲಿ 404 ಕಿಲೋಮೀಟರ್ ಓಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 135 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 255 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಮತ್ತೊಂದು 51.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಪಡೆದುಕೊಂಡಿರುವ ಮಾಡೆಲ್, ಭರ್ತಿ ಚಾರ್ಜ್‌ನಲ್ಲಿ 490 ಕಿಲೋಮೀಟರ್ ಕ್ರಮಿಸುತ್ತದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್, 171 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 255 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ನೂತನ ಕ್ಯಾರೆನ್ಸ್ ಕ್ಲಾವಿಸ್ ಎಂಪಿವಿ 7 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 216 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ವೈಶಿಷ್ಟ್ಯಗಳು (Features):

ಈ ಕಾರಿನ ಕ್ಯಾಬಿನ್ ವಿನ್ಯಾಸವು ಕೂಡ ಅತ್ಯುತ್ತಮವಾಗಿದೆ. ಅದಕ್ಕೆ ತಕ್ಕಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (12.3-ಇಂಚು), ಪನೋರಮಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Thursday, July 17, 2025, 10:15 [IST]
English summary
7 seater kia carens clavis electric mpv top things details
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+