Toyota: ಮೊದಲ ಬಾರಿಗೆ ಕಾಣಿಸಿಕೊಳ್ತು 7-ಆಸನಗಳ ಹೊಸ ಟೊಯೊಟಾ ಕಾರು.. ಅದು ನಮ್ಮ ಕರ್ನಾಟಕದಲ್ಲೇ!

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಜನಪ್ರಿಯ ಎಸ್‌ಯುವಿಯಾಗಿ ಗುರುತಿಸಿಕೊಂಡಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಸಿಗುತ್ತದೆ. ಈ ಮಾರ್ಚ್ ತಿಂಗಳು ಹೈರೈಡರ್ ಎಸ್‌ಯುವಿಯ 5,286 ಯುನಿಟ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಲಾಗಿದೆ. ಸದ್ಯ, 5 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಮಾತ್ರ ಖರೀದಿಗೆ ಲಭ್ಯವಿದೆ. ಟೊಯೊಟಾ ಕಂಪನಿಯು ಇದೇ ಎಸ್‌ಯುವಿಯನ್ನು 7-ಆಸನದೊಂದಿಗೂ ಮಾರಾಟಕ್ಕೆ ತರಲು ಸಾಕಷ್ಟು ತಯಾರಿಯನ್ನು ಮಾಡಿಕೊಳ್ಳುತ್ತಿದೆ.

ಈಚೆಗೆ, 7-ಆಸನಗಳನ್ನು ಹೊಂದಿರುವ ಹೊಸ 'ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್' ಕಾರು ಪ್ರಾಯೋಗಿಕ ಸಂಚಾರ ನಡೆಸುವಾಗ ಮೊದಲ ಬಾರಿಗೆ ಕಾಣಿಸಿಕೊಂಡಿದೆ. ಆ ಸ್ಪೈ ಫೋಟೋಗಳು ಆನ್‌ಲೈನ್‌ನಲ್ಲಿ ಕೂಡ ಸೋರಿಕೆಯಾಗಿವೆ. ವಿಶೇಷವಾಗಿ ಈ ಕಾರು ಬೆಂಗಳೂರಿನಲ್ಲೇ ಕಂಡುಬಂದಿದೆ ಎಂಬ ವಿಚಾರವು ಗೊತ್ತಾಗಿದೆ. ನೂತನ ಎಸ್‌ಯುವಿ, ಈಗಿರುವ ಮಾಡೆಲ್‌ಗಿಂತ ಸಾಕಷ್ಟು ಭಿನ್ನವಾಗಿರಲಿದೆ ಎಂದು ಹೇಳಲಾಗಿದೆ.

7-Seater Toyota Urban Cruiser Hyryder Suv Spied Testing First Time In Karnataka Details

ಪರೀಕ್ಷಾರ್ಥ ಓಡಾಟದ ವೇಳೆಯಲ್ಲಿ ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕ ಎಸ್‌ಯುವಿಯನ್ನು ಕಪ್ಪು ಬಣ್ಣದ ಕವರ್‌ನಿಂದ ಮುಚ್ಚಿದ್ದ ಹಿನ್ನೆಲೆ, ವಿನ್ಯಾಸದ ಕುರಿತಂತೆ ಅಷ್ಟಾಗಿ ಯಾವುದೇ ವಿಚಾರಗಳು ತಿಳಿಯಲಿಲ್ಲ. ಮಾರುತಿ ಸುಜುಕಿ ಹಾಗೂ ಟೊಯೊಟಾ ಕಂಪನಿಗಳು ವ್ಯಾಪಾರ ಪಾಲುದಾರಿಕೆಯನ್ನು ಹೊಂದಿವೆ. ಆ ಕಾರಣಕ್ಕೆ ನೂತನ 7-ಆಸನಗಳ ಅರ್ಬನ್ ಕ್ರೂಸರ್ ಹೈರೈಡರ್ ಸಹ ಮುಂಬರಲಿರುವ ಗ್ರ್ಯಾಂಡ್ ವಿಟಾರಾದಂತೆಯೇ ವಿನ್ಯಾಸವನ್ನು ಒಳಗೊಂಡಿರಲಿದೆ ಎಂದು ತಿಳಿದುಬಂದಿದೆ.

ಈ ಹೊಸ ಕಾರು ಶಕ್ತಿಯುತವಾದ ಎರಡು ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿರುವ ನಿರೀಕ್ಷೆಯಿದೆ. ಇದು 1.5-ಲೀ. 4-ಸಿಲಿಂಡರ್ ಮೈಲ್ಡ್-ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀ. 3-ಸಿಲಿಂಡರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಹೊಂದಿರಲಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದುಕೊಂಡಿರುವ ಸಾಧ್ಯತೆಯೂ ಹೆಚ್ಚಿದೆ.

7-Seater Toyota Urban Cruiser Hyryder Suv Spied Testing First Time In Karnataka Details

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‌ಯುವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡು ಮಾರಾಟಕ್ಕೆ ಬರಬಹುದು ಎನ್ನಲಾಗಿದೆ. ಇದು 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಪನೋರಮಿಕ್ ಸನ್‌ರೂಫ್‌ನ್ನು ಪಡೆದುಕೊಂಡಿರಬಹುದು ಎನ್ನಲಾಗಿದೆ.

ಹೊಸ 7-ಆಸನಗಳ ಅರ್ಬನ್ ಕ್ರೂಸರ್ ಹೈರೈಡರ್ ಕಾರು ಪ್ರಯಾಣಿಕರಿಗೂ ಗರಿಷ್ಠ ರಕ್ಷಣೆಯನ್ನು ಒದಗಿಸುವ ನಿರೀಕ್ಷೆಯಿದೆ. ಇದು 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಲ್ ವೀಲ್ ಡಿಸ್ಕ್ ಬೈಕ್‌ಗಳನ್ನು ಹೊಂದಿರಬಹುದು ಎಂದು ಹೇಳಲಾಗಿದೆ.

ಪ್ರಸ್ತುತ ದೇಶೀಯ ಗ್ರಾಹಕರ ಖರೀದಿಗೆ ದೊರೆಯುವ 5-ಆಸನಗಳ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‌ಯುವಿ, ಕನಿಷ್ಠ ರೂ.11.34 ಲಕ್ಷ ಹಾಗೂ ಗರಿಷ್ಠ ರೂ.19.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತಿ ಶೀಘ್ರದಲ್ಲಿ ಬಿಡುಗಡೆಯಾಗುವ ಹೊಸ ಕಾರು ಕೂಡ ಹೆಚ್ಚು-ಕಮ್ಮಿ ಇದೇ ದರದಲ್ಲಿ ಮಾರಾಟಕ್ಕೆ ಬರಬಹುದು ಎಂದು ಅಂದಾಜಿಸಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source Link: 91Wheels

More from DriveSpark

Article Published On: Wednesday, April 23, 2025, 19:03 [IST]
English summary
7 seater toyota urban cruiser hyryder suv spied testing first time in karnataka details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+