10 ಲಕ್ಷಕ್ಕಿಂತ ಕಡಿಮೆ ಬೆಲೆಯ ಸಿಎನ್‌ಜಿ ಕಾರು ಖರೀದಿಸಬೇಕೇ.. ಸೂಪರ್ ಮೈಲೇಜ್, ಈ ಮೂರು ಬೆಸ್ಟ್!
ಮಾರುತಿ ಸುಜುಕಿ, ಹ್ಯುಂಡೈ ಮೋಟಾರ್ ಹಾಗೂ ಟಾಟಾ ಮೋಟಾರ್ಸ್ ಸಿಎನ್‌ಜಿ (CNG) ಚಾಲಿತ ಕಾರುಗಳ ಮಾರಾಟಕ್ಕೆ ಹೆಸರುವಾಸಿಯಾಗಿವೆ. ಸಿಎನ್‌ಜಿ ಕಾರುಗಳ ನಿರ್ವಹಣಾ ವೆಚ್ಚವು ಪೆಟ್ರೋಲ್ ಮಾಡೆಲ್‌ಗಳ ಅರ್ಧದಷ್ಟು ಇರುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ರೂ.10 ಲಕ್ಷಕ್ಕಿಂತ ಕಡಿಮೆ (ಎಕ್ಸ್-ಶೋರೂಂ) ಬೆಲೆಯ ಸಿಎನ್‌ಜಿ ಕಾರನ್ನು ಹುಡುಕುತ್ತಿದ್ದರೆ.. ಮಾರುತಿ ಸುಜುಕಿ ಸ್ವಿಫ್ಟ್, ಹ್ಯುಂಡೈ ಔರಾ ಹಾಗೂ ಟಾಟಾ ಪಂಚ್ ಕಾರುಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮೊದಲಿಗೆ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಹ್ಯಾಚ್‌ಬ್ಯಾಕ್ ಕುರಿತಂತೆ ಮಾತನಾಡೋಣ. ಇದರ 1.2-ಲೀಟರ್ ಸಿಎನ್‌ಜಿ ಎಂಜಿನ್, 69.75 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 101.8 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 32.85 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ. ರೂ.8.19 ಲಕ್ಷ (ಎಕ್ಸ್-ಶೋರೂಂ) ಆರಂಭಿಕ ಬೆಲೆಯನ್ನು ಒಳಗೊಂಡಿದೆ.

ಈ ಮಾರುತಿ ಸ್ವಿಫ್ಟ್ ಕಾರು 5 ಆಸನಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್ ಮತ್ತು ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ.
ಹ್ಯುಂಡೈ ಔರಾ (Hyundai Aura) ಸೆಡಾನ್ ಕುರಿತಂತೆ ಹೇಳುವುದಾದರೆ, 1.2-ಲೀಟರ್ ಸಿಎನ್‌ಜಿ ಎಂಜಿನ್, 69 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 95.2 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇದು ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. 22 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ. ರೂ.7.54 ಲಕ್ಷ (ಎಕ್ಸ್-ಶೋರೂಂ) ಆರಂಭಿಕ ದರವನ್ನು ಹೊಂದಿದೆ.

ನೂತನ ಹ್ಯುಂಡೈ ಔರಾ ಸೆಡಾನ್‌ನಲ್ಲಿಯೂ 5 ಜನರು ಓಡಾಟ ನಡೆಸಬಹುದು. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.
ಕಡೆಯದಾಗಿ ಟಾಟಾ ಪಂಚ್ (Tata Punch) ಎಸ್‌ಯುವಿ ಬಗ್ಗೆ ಮಾತನಾಡುವುದಾದರೆ, ಇದು 1.2-ಲೀಟರ್ ಸಿಎನ್‌ಜಿ ಎಂಜಿನ್ 73.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 103 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 27 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ. ರೂ.7,29 ಲಕ್ಷ (ಎಕ್ಸ್-ಶೋರೂಂ) ಆರಂಭಿಕ ಬೆಲೆಯನ್ನು ಒಳಗೊಂಡಿದೆ.

ಈ ಕಾರು 5 ಮಂದಿ ಪ್ರಯಾಣಿಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಚಾರ್ಜರ್ ರೇರ್ ಎಸಿ ವೆಂಟ್‌ಗಳು ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 2-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ರಿವರ್ಸಿಂಗ್ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications