6 ಲಕ್ಷಕ್ಕಿಂತ ಕಡಿಮೆ ಬೆಲೆಗೆ 6-ಏರ್‌ಬ್ಯಾಗ್‌ಗಳೊಂದಿಗೆ ಸಿಗುವ ಸುರಕ್ಷಿತ ಕಾರುಗಳು!

ಭಾರತದಲ್ಲಿ ಸದ್ಯ ಅತ್ಯಂತ ಕಡಿಮೆ ಬೆಲೆಯಲ್ಲಿ 6 ಏರ್ ಬ್ಯಾಗ್‌ ಗಳನ್ನು ಹೊಂದಿರುವ ಕೈಗೆಟುಕುವ ಕಾರುಗಳು ಸಿಗುತ್ತಿವೆ. ಈ ಕಾರುಗಳು ನಿಮ್ಮ ಬಜೆಟ್ ಬೆಲೆಯಲ್ಲಿ ಸಿಗಲಿದ್ದು ಧೀರ್ಘ ಪ್ರಯಾಣಗಳನ್ನು ಮತ್ತಷ್ಟು ಸುರಕ್ಷಿತವಾಗಿಸುತ್ತವೆ. ಈ ಕಡಿಮೆ ಬೆಲೆಯ ಹ್ಯಾಚ್‌ಬ್ಯಾಕ್‌ಗಳನ್ನು ಖರೀದಿಸುವ ಮೂಲಕ ಕಾರು ಖರೀದಿಸುವ ಕನಸನ್ನು ನನಸಾಗಿಸಿಕೊಳ್ಳಬಹುದು. ಸದ್ಯ ಭಾರತದಲ್ಲಿ 6 ಲಕ್ಷ ರೂ.ಗಿಂತ ಕಡಿಮೆ ಬೆಲೆಯ ಕೆಲವು ಕಾರುಗಳು 6-ಏರ್‌ಬ್ಯಾಗ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆಯುತ್ತಿವೆ. ಬನ್ನಿ ಯಾವೆಲ್ಲಾ ಕಾರುಗಳಿವೆ ನೋಡೋಣ.

ಮಾರುತಿ ಸುಜುಕಿ ಸೆಲೆರಿಯೊ: ಮಾರುತಿ ಸುಜುಕಿ ಸೆಲೆರಿಯೊ ಕೂಡ ಸ್ಟ್ಯಾಂಡರ್ಡ್ ಫಿಟ್‌ಮೆಂಟ್ ಆಗಿ ಆರು ಏರ್‌ಬ್ಯಾಗ್ ಗಳೊಂದಿಗೆ ಖರೀದಿಗೆ ಲಭ್ಯವಿದೆ. ಟ್ರಾನ್ಸ್ ಮಿಷನ್ ಆಯ್ಕೆಗಳಲ್ಲಿ ಮ್ಯಾನುವಲ್ ಮತ್ತು ಎಎಂಟಿ ಆಯ್ಕೆಗಳು ಇವೆ. ಮಾರುತಿ ಸೆಲೆರಿಯೊ 1.0-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, ಇದರ ಬೆಲೆ ರೂ. 5.64 ಲಕ್ಷದಿಂದ ಪ್ರಾರಂಭವಾಗುತ್ತದೆ.

affordable-safest-cars-with-6-airbags-in-india

ಮಾರುತಿ ಸುಜುಕಿ ಆಲ್ಟೋ ಕೆ10: ಮಾರುತಿ ಸುಜುಕಿ ಆಲ್ಟೋ ಕೆ10 ಖಾಸಗಿ ಮತ್ತು ಫ್ಲೀಟ್ ವಿಭಾಗಗಳಲ್ಲಿ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಆಲ್ಟೋ ಕೆ10 ಬೆಲೆಯು ಭಾರತದಲ್ಲಿ ರೂ.4.23 ಲಕ್ಷದಿಂದ ಪ್ರಾರಂಭವಾಗುತ್ತದೆ. ಆರು ಏರ್‌ಬ್ಯಾಗ್ ಗಳನ್ನು ಸ್ಟ್ಯಾಂಡರ್ಡ್ ಫಿಟ್‌ಮೆಂಟ್ ಆಗಿ ಹೊಂದಿದೆ. ಪೆಟ್ರೋಲ್ ಮತ್ತು ಪೆಟ್ರೋಲ್-ಸಿಎನ್‌ಜಿ ಬೈ-ಫ್ಯೂಯಲ್ ಪವರ್ ಟ್ರೇನ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.

ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್: ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಭಾರತದಲ್ಲಿ ದಕ್ಷಿಣ ಕೊರಿಯಾದ ವಾಹನ ತಯಾರಕರ ಎಂಟ್ರಿ ಲೆವೆಲ್ ಕಾರಾಗಿದೆ. ಇದರಲ್ಲಿ ಸ್ಟ್ಯಾಂಡರ್ಡ್ ವೈಶಿಷ್ಟ್ಯವಾಗಿ ಆರು ಏರ್‌ಬ್ಯಾಗ್ ಗಳನ್ನು ಅಳವಡಿಸಲಾಗಿದೆ. ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.5.98 ಲಕ್ಷಗಳಾಗಿದೆ.

affordable-safest-cars-with-6-airbags-in-india

ಮಾರುತಿ ಸುಜುಕಿ ಇಕೋ: ಮಾರುತಿ ಸುಜುಕಿ ಇಕೋ ಬೆಲೆ ರೂ 6 ಲಕ್ಷಕ್ಕಿಂತ ಕಡಿಮೆ ಮತ್ತು ಫ್ಲೀಟ್ ವಿಭಾಗದಲ್ಲಿ ವ್ಯಾಪಕವಾಗಿ ಜನಪ್ರಿಯ ಮಾದರಿಯಾಗಿದೆ. ಈ ಮಿನಿವ್ಯಾನ್ ಸ್ಟ್ಯಾಂಡರ್ಡ್ ವೈಶಿಷ್ಟ್ಯವಾಗಿ ಆರು ಏರ್‌ಬ್ಯಾಗ್ ಗಳೊಂದಿಗೆ ಬರುತ್ತದೆ. ದೇಶಿಯ ಮಾರುಕಟ್ಟೆಯಲ್ಲಿ ಜನಪ್ರಿಯ ಮಾದರಿಯಾಗಿರುವ ಈ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.5.70 ಲಕ್ಷಗಳಾಗಿದೆ.

ಮಾರುತಿ ಸುಜುಕಿ ವ್ಯಾಗನ್ಆರ್: ಮಾರುತಿ ಸುಜುಕಿ ವ್ಯಾಗನ್ ಆರ್ ಭಾರತದ ಎಕ್ಸ್ ಶೋರೂಂ ದರದಂತೆ ರೂ.5.55 ಲಕ್ಷಗಳಾಗಿದೆ. ಇದು ಪೆಟ್ರೋಲ್ ಮ್ಯಾನುವಲ್, ಪೆಟ್ರೋಲ್ ಆಟೋಮ್ಯಾಟಿಕ್ ಮತ್ತು ಸಿಎನ್‌ಜಿ ಮ್ಯಾನುವಲ್ ಕಾನ್ಫಿಗರೇಶನ್‌ಗಳಲ್ಲಿ ಲಭ್ಯವಿದೆ. ಈ ಕಾರು 1 ಲೀಟರ್ ಮತ್ತು 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಗಳೊಂದಿಗೆ ಬರುತ್ತದೆ.

affordable-safest-cars-with-6-airbags-in-india

ಮಾರುತಿ ಸುಜುಕಿ ವ್ಯಾಗನ್ಆರ್ ಸ್ಟ್ಯಾಂಡರ್ಡ್ ಫಿಟ್‌ಮೆಂಟ್ ಆಗಿ ಆರು ಏರ್‌ಬ್ಯಾಗ್ ಗಳೊಂದಿಗೆ ಬರುತ್ತದೆ. ಇದು ಪೆಟ್ರೋಲ್, ಪೆಟ್ರೋಲ್-ಸಿಎನ್‌ಜಿ ಬೈ-ಫ್ಯೂಯಲ್ ಆಯ್ಕೆಯೊಂದಿಗೂ ಲಭ್ಯವಿದೆ. ಈ ಟಾಲ್ ಬಾಯ್ ಹ್ಯಾಚ್‌ಬ್ಯಾಕ್ ಖಾಸಗಿ ಖರೀದಿದಾರರು ಮತ್ತು ಫ್ಲೀಟ್ ಆಪರೇಟರ್ ಗಳಲ್ಲಿ ವ್ಯಾಪಕವಾಗಿ ಜನಪ್ರಿಯವಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, May 28, 2025, 10:10 [IST]
English summary
Affordable safest cars with 6 airbags in india
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+