Kia Syros: ಮೊದಲ 'ಕಿಯಾ ಸೈರಸ್' ಹೊರಬಂತು... ಇಂದು ಸಾರ್ವಜನಿಕರಿಗೆ ಪ್ರದರ್ಶನ... ವಿಶೇಷತೆಗಳೇನು?

ಕಿಯಾ ಇಂಡಿಯಾ (Kia India) ಭಾರತದಲ್ಲಿ ಸದ್ಯ ಅತಿ ಹೆಚ್ಚು ಕಾರು ಮಾರಾಟ ಮಾಡುವ ಕಂಪನಿಗಳ ಪಟ್ಟಿಯಲ್ಲಿ ಮುಂದುವರಿಯುತ್ತಿದೆ. ಮುಂಬರುವ ದಿನಗಳಲ್ಲಿ ಅಗ್ರಸ್ಥಾನಕ್ಕೇರುವ ಕನಸನ್ನು ಹೊತ್ತಿದ್ದು, ಇದನ್ನು ಸಾಧ್ಯವಾಗಿಸಲು ತನ್ನ ಹೊಸ ಎಸ್‌ಯುವಿಯ ಸಬ್-4 ಮೀಟರ್ ಕಿಯಾ ಸೈರಸ್ (Kia Syros) ಎಸ್‌ಯುವಿಯನ್ನು ತರುತ್ತಿದೆ. ಡಿಸೆಂಬರ್ 2024 ರಲ್ಲಿ ಈ ಕಾರನ್ನು ಬಹಿರಂಗಪಡಿಸಲಾಗಿದ್ದು, ಇಂದಿನಿಂದ ನಡೆಯಲಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025 (Bharat Mobility Global Expo 2025) ರಲ್ಲಿ ಮೊದಲ ಬಾರಿಗೆ ಸಾರ್ವಜನಿಕರಿಗಾಗಿ ಪ್ರದರ್ಶನಕ್ಕೆ ಇಡಲಾಗುತ್ತಿದೆ.

ಮತ್ತೊಂದು ವಿಶೇಷತೆಯೆಂದರೆ ಕಿಯಾ ಸೈರಸ್ ಈಗ ಉತ್ಪಾದನೆಗೆ ಪ್ರವೇಶಿಸಿದ್ದು, ಆಂಧ್ರಪ್ರದೇಶದ ಅನಂತಪುರ ಉತ್ಪಾದನಾ ಸೌಲಭ್ಯದಿಂದ ಮೊದಲ ವಾಹನವನ್ನು ಹೊರತರಲಾಗಿದೆ. ಡಿಸೆಂಬರ್‌ನಲ್ಲಿ ಕಾರನ್ನು ಬಹಿರಂಗಪಡಿಸಿ ಬುಕಿಂಗ್‌ಗಳನ್ನು ತೆರೆದ ನಂತರ ಕಂಪನಿಯು ಉತ್ತಮ ಬೇಡಿಕೆಯನ್ನು ಪಡೆದುಕೊಂಡಿತ್ತು. ಬರೋಬ್ಬರಿ 10,258 ಪ್ರೀ-ಲಾಂಚ್ ಬುಕಿಂಗ್‌ಗಳನ್ನು ಸ್ವೀಕರಿಸಿ ದಾಖಲೆ ನಿರ್ಮಿಸಿದೆ. ಕಿಯಾ ಕಂಪನಿಯು ಹೊಸ ಸೈರಸ್ ಬೆಲೆಗಳನ್ನು ಫೆಬ್ರವರಿ 1 ರಂದು ಬಹಿರಂಗಪಡಿಸಲಿದ್ದು, ಫೆಬ್ರವರಿ ಮಧ್ಯದಿಂದ ಡೆಲಿವರಿಗಳು ಪ್ರಾರಂಭವಾಗಲಿವೆ.

auto-expo-2025-kia-syros-showcased-and-1st-unit-roll-out

ಹೊಸ ಕಿಯಾ ಸೈರಸ್ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.9.7 ಲಕ್ಷದಿಂದ ರೂ.16.50 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸಲಾಗಿದೆ. ಕಿಯಾ ಸೈರಸ್ ನೇರ ಪ್ರತಿಸ್ಪರ್ಧಿ ಹೊಂದಿಲ್ಲವಾದರೂ, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಟಾಟಾ ನೆಕ್ಸಾನ್, ಮಾರುತಿ ಬ್ರೆಝಾ, ಕಿಯಾ ಸೊನೆಟ್ ಮತ್ತು ಮಾರುತಿ ಗ್ರ್ಯಾಂಡ್ ವಿಟಾರಾದಂತಹ ಸಬ್ -4 ಮೀ. ಕಾಂಪ್ಯಾಕ್ಟ್ ಎಸ್‌ಯುವಿಗಳಿಗೆ ಪೈಪೋಟಿ ನೀಡಲಿದೆ.

ಸೈರಸ್ ಎಸ್‌ಯುವಿ ಹಲವು ವಿಶೇಷತೆಗಳನ್ನು ಒಳಗೊಂಡಿದ್ದು, ಫೀಚರ್ಸ್ ಬಗ್ಗೆ ಮಾತನಾಡುವುದಾದ್ರೆ ಇನ್‌ಸ್ಟ್ರೂಮೆಂಟ್ ಕ್ಲಸ್ಟರ್ ಹಾಗೂ ಇನ್ಫೋಟೈನ್ಮೆಂಟ್ ಸಿಸ್ಟಮ್‌ಗಾಗಿ ಎರಡು 12.3-ಇಂಚಿನ ಸ್ಕ್ರೀನ್‌ಗಳನ್ನು ನೀಡಲಾಗಿದೆ. ಜೊತೆಗೆ 5-ಇಂಚಿನ ಕ್ಲೈಮೇಟ್ ಕಂಟ್ರೋಲ್ ಡಿಸ್ಪ್ಲೇ, ಮುಂಭಾಗ ಮತ್ತು ಹಿಂಭಾಗದ ವೆಂಟಿಲೇಟೆಡ್ ಸೀಟುಗಳು, 64-ಬಣ್ಣದ ಆಂಬಿಯೆಂಟ್ ಲೈಟಿಂಗ್ ಮತ್ತು ವೈರ್ ಲೆಸ್ ಫೋನ್ ಚಾರ್ಜರ್ ನಂತಹ ಸೌಲಭ್ಯಗಳನ್ನು ಹೊಂದಿದೆ.

auto-expo-2025-kia-syros-showcased-and-1st-unit-roll-out

ಪ್ರಯಾಣಿಕರ ಸುರಕ್ಷತೆಗಾಗಿ 6 ಏರ್ ಬ್ಯಾಗ್‌ಗಳು (ಸ್ಟ್ಯಾಂಡರ್ಡ್ ಆಗಿ), 360 ಡಿಗ್ರಿ ಕ್ಯಾಮೆರಾ, ಡ್ಯುಯಲ್ ಡ್ಯಾಶ್ ಕ್ಯಾಮ್ ಸೆಟಪ್ ಮತ್ತು ಲೆವೆಲ್ 2 ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ (ADAS) ಕೂಡ ನೀಡಲಾಗಿದೆ. ಉಳಿದಂತೆ ಪ್ರೀಮಿಯಂ ಕಾರುಗಳಲ್ಲಿ ನೀಡಲಾಗಿವ ಪನೋರಮಿಕ್ ಸನ್‌ರೂಫ್ ಮತ್ತು 4-ವೇ ಪವರ್ಡ್ ಡ್ರೈವರ್ ಸೀಟ್, ಡ್ಯುಯಲ್ ಟೋನ್ ಕ್ಯಾಬಿನ್ ಬಣ್ಣದ ಥೀಮ್ ನೊಂದಿಗೆ ಬರುತ್ತದೆ.

ಈ ಕಾರು ಎರಡು ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಇದರ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 120 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 172 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಎಂಟಿ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ.

auto-expo-2025-kia-syros-showcased-and-1st-unit-roll-out

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್, 116 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 250 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯ ಪಡೆದಿದೆ. 6-ಸ್ಪೀಡ್ ಎಂಟಿ ಹಾಗೂ 6-ಸ್ಪೀಡ್ ಎಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಆದರೆ, ಮೈಲೇಜ್ ಕುರಿತಂತೆ ಯಾವುದೇ ವಿವರಗಳನ್ನು ಕಂಪನಿಯು ಬಹಿರಂಗಪಡಿಸಿಲ್ಲ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳನ್ನು ಫಾಲೋ ಮಾಡಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, January 17, 2025, 9:22 [IST]
English summary
Auto expo 2025 kia syros showcased and 1st unit roll out
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+