ಹೊಸ ನವೀಕರಣಗಳೊಂದಿಗೆ ಬರುವ ಜನಪ್ರಿಯ ಸ್ಕೋಡಾ 7-ಸೀಟರ್ ಎಸ್‍ಯುವಿ ವಿಶೇಷತೆಗಳು
ಜನಪ್ರಿಯ ಕಾರು ತಯಾರಕ ಕಂಪನಿಯಾದ ಸ್ಕೋಡಾ ತನ್ನ ಎರಡನೇ ತಲೆಮಾರಿನ ಸ್ಕೋಡಾ ಕೊಡಿಯಾಕ್ (Skoda Kodiaq) ಎಸ್‍ಯುವಿಯನ್ನು 2025ರ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದೆ. ಈ ಹೊಸ ಸ್ಕೋಡಾ ಕೊಡಿಯಾಕ್ ಎಸ್‍ಯುವಿಯು MQB EVO ಆರ್ಕಿಟೆಕ್ಚರ್‌ನ ಫ್ಲಾಟ್ ಫಾರ್ಮ್ ಅನ್ನು ಆಧರಿಸಿದೆ. ಸ್ಕೋಡಾ ಕೊಡಿಯಾಕ್ ಎಸ್‍ಯುವಿಯ ಹಿಂದಿನ ಮಾದರಿಗೆ ಹೋಲಿಸಿದರೆ ಸುಧಾರಿತ ತಂತ್ರಜ್ಞಾನ ಮತ್ತು ಹೊಸ ಫೀಚರ್ಸ್ ಗಳೊಂದಿಗೆ ಬರುತ್ತದೆ.
ಪ್ರತಿಸ್ಪರ್ಧಿಗಳು: 2025ರ ಸ್ಕೋಡಾ ಕೊಡಿಯಾಕ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಟೊಯೋಟಾ ಫಾರ್ಚುನರ್, ಎಂಜಿ ಗ್ಲೋಸ್ಟರ್, ಹ್ಯುಂಡೈ ಟಕ್ಸನ್, ಫೋಕ್ಸ್‌ವ್ಯಾಗನ್ ಟೈಗನ್ ಮತ್ತು ಜೀಪ್ ಮೆರಿಡಿಯನ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ. ಪ್ರೀಮಿಯಂ 7-ಸೀಟರ್ ಎಸ್‍ಯುವಿ ಇಷ್ಟ ಪಡುವರಿಗೆ ಈ ಸ್ಕೋಡಾ ಕೊಡಿಯಾಕ್ ಉತ್ತಮ ಆಯ್ಕೆಗಳಲ್ಲಿ ಒಂದಾಗಿದೆ.

ವಿನ್ಯಾಸ: ಈ ಹೊಸ ಸ್ಕೋಡಾ ಕೊಡಿಯಾಕ್ ಎಸ್‍ಯುವಿಯ ಹೊಸ ಜನರೇಷನ್ ಮಾದರಿಯು ಹಿಂದಿನ ಮಾದರಿಗಿಂತ ದೊಡ್ಡದಾಗಿದೆ. ಇನ್ನು ಸ್ಕೋಡಾದ 'ಮಾಡರ್ನ್ ಸಾಲಿಡ್' ವಿನ್ಯಾಸದ ತತ್ತ್ವಶಾಸ್ತ್ರವನ್ನು ಅಲಂಕರಿಸಿದೆ. ಈ ಹೊಸ ಎಸ್‍ಯುವಿಯು ಹೆಚ್ಚಿನ ಸ್ಥಳಾವಕಾಶವನ್ನು ಸೃಷ್ಟಿಸಲು ಒಟ್ಟಾರೆ ಉದ್ದವನ್ನು ಹೆಚ್ಚಿಸುವಾಗ ಇದನ್ನು 7-ಸೀಟುಗಳ ಅವತಾರದಲ್ಲಿದೆ.
ಈ ಕೊಡಿಯಾಕ್ ಎಸ್‍ಯುವಿಯು ಸ್ಪ್ಲಿಟ್ ಎಲ್‌ಇಡಿ ಹೆಡ್‌ಲ್ಯಾಂಪ್ ಸೆಟಪ್‌ನೊಂದಿಗೆ ರಿಫ್ರೆಶ್ ಮಾಡಿದ ಮುಂಭಾಗದ ಫಾಸಿಕವನ್ನು ಹೊಂದಿದೆ ಮತ್ತು ಲಂಬವಾದ ಸ್ಲ್ಯಾಟ್‌ಗಳೊಂದಿಗೆ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಹೊಸ ಸ್ಕೋಡಾ ಕೊಡಿಯಾಕ್ ಎಸ್‍ಯುವಿಯು ಅಲಾಯ್ ವ್ಹೀಲ್ ಗಳು ಮತ್ತು ಪನರೊಮಿಕ್ ಸನ್‌ರೂಫ್ ಅನ್ನು ಹೊಂದಿದೆ ಮತ್ತು ಹಿಂಭಾಗದ ಪ್ರೊಫೈಲ್‌ನಲ್ಲಿ ಮರುಹೊಂದಿಸಲಾದ LED ಟೈಲ್-ಲ್ಯಾಂಪ್ ಕ್ಲಸ್ಟರ್ ಮತ್ತು ಬಂಪರ್ ಅನ್ನು ಒಳಗೊಂಡಿದೆ.

ಫೀಚರ್ಸ್: ಹೊಸ ಸ್ಕೋಡಾ ಕೊಡಿಯಾಕ್ ಎಸ್‍ಯುವಿಯ ಒಳಭಾಗದಲ್ಲಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಆಂಬಿಯೆಂಟ್ ಲೈಟಿಂಗ್ ಅನ್ನು ಹೊಂದಿದೆ. ಇದರೊಂದಿಗೆ Apple CarPlay ಮತ್ತು Android Auto ಜೊತೆಗೆ ಬೃಹತ್ 13-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇನ್ನು ಹೊಸ ಸ್ಕೋಡಾ ಕೊಡಿಯಾಕ್ ಎಸ್‍ಯುವಿಯಲ್ಲಿ ಹೆಚ್ಚಿನ ಸುರಕ್ಷತಾ ಫೀಚರ್ಸ್ ಗಳನ್ನು ಹೊಂದಿವೆ.
ಇದರಲ್ಲಿ ಲೆವೆಲ್ 2 ADAS ಟೆಕ್, 6 ಏರ್‌ಬ್ಯಾಗ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಟಾಪ್-ಸ್ಪೆಕ್ ಟ್ರಿಮ್ ಅನ್ನು ADAS ವೈಶಿಷ್ಟ್ಯಗಳೊಂದಿಗೆ ಸಂಪೂರ್ಣವಾಗಿ ಲೋಡ್ ಮಾಡುವ ನಿರೀಕ್ಷೆಯಿದೆ. ಇನ್ನು ಈ ಎಸ್‍ಯುವಿಯಲ್ಲಿ 6-ಏರ್‌ಬ್ಯಾಗ್‌ಗಳನ್ನು ಎಲ್ಲಾ ವೇರಿಯಂಟ್ ಲೈನ್-ಅಪ್‌ನಲ್ಲಿ ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ.

ಎಂಜಿನ್: ಹೊಸ ಜನರೇಷನ್ ಸ್ಕೋಡಾ ಕೊಡಿಯಾಕ್ ಎಸ್‍ಯುವಿಯಲ್ಲಿ ಅದೇ 2.0 ಲೀಟರ್ ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 187 bhp ಮತ್ತು 320 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 7-ಸ್ಪೀಡ್ ಡಿಸಿಟಿ ಸ್ವಯಂಚಾಲಿತ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಈ ಎಸ್‍ಯುವಿಯಲ್ಲಿ ಅಲ್ ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಸ್ಟ್ಯಾಡರ್ಡ್ ಆಗಿ ನೀಡಲಾಗುತ್ತದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








